ಕನ್ನಡಪ್ರಭ ವಾರ್ತೆ ಕೋಲಾರ
ತಾಲೂಕಿನ ಲಕ್ಷ್ಮೀಸಾಗರದ ತಮ್ಮ ತೋಟದಲ್ಲಿ ಭಾನುವಾರ ಲೋಕಸಭಾ ಚುನಾವಣೆಗೆ ಸಂಬಂಧಿಸಿದಂತೆ ನರಸಾಪುರ ಹೋಬಳಿ ಮಟ್ಟದ ಜೆಡಿಎಸ್ ಕಾರ್ಯಕರ್ತರ ಪೂರ್ವಭಾವಿ ಸಭೆಯಲ್ಲಿ ಮಾತನಾಡಿ, ಜಿಲ್ಲೆಯಲ್ಲಿ ಜೆಡಿಎಸ್ ಬಲಿಷ್ಠವಾಗಿದೆ, ಮತದಾರರು ಮತ್ತು ನಾಯಕರ ಮಧ್ಯೆ ಸಮನ್ವಯತೆ ಕೊರತೆಯಾಗಿರಬಹುದು, ಆದರೆ ಪಕ್ಷಕ್ಕೆ ಯಾವತ್ತೂ ಹಿನ್ನಡೆಯಾಗಿಲ್ಲ, ಆಯಾ ಭಾಗದಲ್ಲಿ ಪಕ್ಷದ ಸಂಘಟನೆಗೆ ಒತ್ತು ನೀಡಿ ನಾಯಕರಾಗಿ ಗುರುತಿಸಿಕೊಳ್ಳಬೇಕಾಗಿದೆ ಎಂದು ತಿಳಿಸಿದರು.
ಕೇಂದ್ರದಲ್ಲಿ ಎನ್.ಡಿ.ಎ ಅಧಿಕಾರಕ್ಕೆದೇಶದಲ್ಲಿ ಪ್ರಧಾನಿ ನರೇಂದ್ರ ಮೋದಿ ಮತ್ತು ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರ ನಾಯಕತ್ವದಲ್ಲಿ ಈ ಬಾರಿಯೂ ಎನ್.ಡಿ.ಎ ಮೈತ್ರಿ ಕೂಟ ಅಧಿಕಾರಕ್ಕೆ ಬರಲಿದೆ, ಈ ಚುನಾವಣೆಯಲ್ಲಿ ಬಿಜೆಪಿ-ಜೆಡಿಎಸ್ ಪಕ್ಷಗಳ ಕಾರ್ಯಕರ್ತರು ದೇಶದ ಭವಿಷ್ಯದ ದೃಷ್ಟಿಯಿಂದ ಒಗ್ಗಟ್ಟಿನಿಂದ ಚುನಾವಣೆ ಎದುರಿಸಬೇಕು ಜನರಿಗೆ ನ್ಯಾಯ ಕೊಡುವಲ್ಲಿ ಕಾಂಗ್ರೆಸ್ ಸರಕಾರ ವಿಫಲವಾಗಿದೆ ಎಂದರು.
ಜೆಡಿಎಸ್ ಪಕ್ಷದ ಕಾರ್ಯಕರ್ತರು ಮಾತನಾಡಿ, ಜಿಲ್ಲೆಯಲ್ಲಿ ಜೆಡಿಎಸ್-ಬಿಜೆಪಿ ಪಕ್ಷಗಳ ಮಧ್ಯೆಯೇ ನೇರ ಹಣಾಹಣೆ ಇದ್ದು ಕೇವಲ ನಾಯಕರು ಅಷ್ಟೇ ಸಮನ್ವಯತೆ ಸಾಧಿಸಿದರೆ ಸಾಲದು, ಗ್ರಾಮಗಳಲ್ಲಿನ ಎರಡು ಪಕ್ಷದ ಮುಖಂಡರ ಮಧ್ಯೆ ಸಮನ್ವಯತೆ ಸಾಧಿಸುವಂತೆ ಸಭೆಗಳನ್ನು ಮಾಡಬೇಕು, ಜೊತೆಗೆ ಪಕ್ಷದ ಸಂಘಟನೆ ಬಗ್ಗೆ ಕಾರ್ಯಕರ್ತರೊಂದಿಗೆ ನಾಯಕರು ಕೈ ಜೋಡಿಸಬೇಕು, ಯುವಕರಿಗೆ ಪಕ್ಷದಲ್ಲಿ ಜವಾಬ್ದಾರಿ ನೀಡಬೇಕು ಎಂದು ಮನವಿ ಮಾಡಿದರು.ಜೆಡಿಎಸ್ ತಾಲೂಕು ಅಧ್ಯಕ್ಷ ಬಾಬು ಮೌನಿ, ಎಸ್ಸಿ ಘಟಕದ ಅಧ್ಯಕ್ಷ ಲಕ್ಷ್ಮೀಸಾಗರ ಸುನಿಲ್ ಕುಮಾರ್, ಟಿಎಪಿಸಿಎಂಎಸ್ ಅಧ್ಯಕ್ಷ ವಡಗೂರು ರಾಮು, ವಕೀಲರ ಸಂಘದ ಅಧ್ಯಕ್ಷ ಬೆಗ್ಲಿ ಮುನೇಗೌಡ, ಜೆಡಿಎಸ್ ಎಸ್ಸಿ ನರಸಾಪುರ ಗ್ರಾಪಂ ಅಧ್ಯಕ್ಷ ಕೃಷ್ಣಪ್ಪ, ಬೆಳಮಾರನಹಳ್ಳಿ ಗ್ರಾಪಂ ಉಪಾಧ್ಯಕ್ಷ ವೆಂಕಟೇಗೌಡ, ಮತ್ತಿತರರು ಇದ್ದರು.