ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜೀನಾಮೆಗೆ ಜೆಡಿಎಸ್‌ ಒತ್ತಾಯ

KannadaprabhaNewsNetwork |  
Published : Jun 11, 2024, 01:33 AM ISTUpdated : Jun 11, 2024, 03:57 AM IST
ಸಿದ್ದರಾಮಯ್ಯ | Kannada Prabha

ಸಾರಾಂಶ

ಪ.ಜಾತಿ, ಪ.ವರ್ಗಕ್ಕೆ ಮೀಸಲಾಗಿಟ್ಟ 11,144 ಕೋಟಿ ರು.ಗಳನ್ನು ಹಿಂಪಡೆದು ಅನ್ಯ ಉದ್ದೇಶಕ್ಕೆ ಬಳಸಿಕೊಂಡು ಸಂವಿಧಾನ ವಿರೋಧಿ ಕೆಲಸ ಮಾಡಿದ ತಮ್ಮ ಆಪ್ತ ಸಚಿವ ಡಾ.ಎಚ್.ಸಿ. ಮಹದೇವಪ್ಪರವರ ರಾಜೀನಾಮೆ ಕೇಳೋದಿಲ್ಲ ಇದ್ಯಾವ ನ್ಯಾಯ.

  ಟಿ.ನರಸೀಪುರ ;  ಮಹರ್ಷಿ ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ನಡೆದಿದೆ ಎನ್ನಲಾದ 187 ಕೋಟಿ ರು.ಗಳ ಅವ್ಯವಹಾರದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಕೈವಾಡವಿರುವ ಶಂಕೆ ಎದುರಾಗಿದ್ದು, ಕೂಡಲೇ ಅವರು ತಮ್ಮ ಮುಖ್ಯಮಂತ್ರಿ ಹುದ್ದೆಗೆ ರಾಜೀನಾಮೆ ನೀಡಿ ಘಟನೆಯನ್ನು ಸಿಬಿಐ ತನಿಖೆಗೆ ವಹಿಸಬೇಕು ಎಂದು ಜೆಡಿಎಸ್ ರಾಜ್ಯ ಮಾಧ್ಯಮ ವಕ್ತಾರ ತಾಯೂರು ಪ್ರಕಾಶ್ ಒತ್ತಾಯಿಸಿದರು.

ಈ ಅವ್ಯವಹಾರ ಪ್ರಕರಣದಲ್ಲಿ ಸಚಿವ ಬಿ. ನಾಗೇಂದ್ರ ರಾಜೀನಾಮೆ ನೀಡಿರುವುದು ದುರದೃಷ್ಟಕರವಾಗಿದ್ದು, ರಾಜ್ಯದ ಮುಖ್ಯಮಂತ್ರಿಗಳ ಮೌಖಿಕ ಆದೇಶವಿಲ್ಲದೇ ನಿಗಮದಲ್ಲಿ ಅವ್ಯವಹಾರ ನಡೆಯಲು ಸಾಧ್ಯವಿಲ್ಲ, ಅಲ್ಲದೇ 187 ಕೋಟಿ ರು. ಗಳ ಹಣ ದುರುಪಯೋಗ ಮಾಡಿಕೊಳ್ಳುವ ಶಕ್ತಿ ಹಾಗೂ ಧೈರ್ಯ ಕೂಡ ಸಚಿವರಿಗಿಲ್ಲ, ಹಾಗಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯರವರೇ ಹಗರಣದ ಕೇಂದ್ರ ಬಿಂದುವಾಗಿದ್ದಾರೆ. ಆದರೆ ಇಲ್ಲಿ ಸಚಿವ ಬಿ. ನಾಗೇಂದ್ರ ಅವರ ತಲೆದಂಡವಾಗಿದೆ ಎಂದು ಸುದ್ದಿಗೋಷ್ಠಿಯಲ್ಲಿ ಅವರು ಕಿಡಿ ಕಾರಿದರು.

ಸಚಿವ ಮಹದೇವಪ್ಪ ರಾಜೀನಾಮೆ ಯಾಕಿಲ್ಲ?

ಪ. ಜಾತಿ, ಪ.ವರ್ಗಕ್ಕೆ ಮೀಸಲಾಗಿಟ್ಟ 11,144 ಕೋಟಿ ರು.ಗಳನ್ನು ಹಿಂಪಡೆದು ಅನ್ಯ ಉದ್ದೇಶಕ್ಕೆ ಬಳಸಿಕೊಂಡು ಸಂವಿಧಾನ ವಿರೋಧಿ ಕೆಲಸ ಮಾಡಿದ ತಮ್ಮ ಆಪ್ತ ಸಚಿವ ಡಾ.ಎಚ್.ಸಿ. ಮಹದೇವಪ್ಪರವರ ರಾಜೀನಾಮೆ ಕೇಳೋದಿಲ್ಲ ಇದ್ಯಾವ ನ್ಯಾಯ ಎಂದು ಅವರು ಪ್ರಶ್ನಿಸಿದರು.

ಸಣ್ಣ ಸಮುದಾಯಕ್ಕೆ ಮಾಡಿದ ಅನ್ಯಾಯ:

ಅಧಿಕಾರಿಗಳು ಮಾಡಿದ ಸಣ್ಣ ತಪ್ಪಿಗಾಗಿ ನಮ್ಮ ಸಮುದಾಯದ ನಾಗೇಂದ್ರ ಅವರ ತಲೆದಂಡ ಮಾಡಲಾಗಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ನವರು ಸಮುದಾಯಕ್ಕೆ ಮಾಡಿದ ಅನ್ಯಾಯವಾಗಿದ್ದು, ಹಾಗಾಗಿ ಬಿ. ನಾಗೇಂದ್ರರವರ ರಾಜೀನಾಮೆ ಅಂಗೀಕಾರ ಮಾಡದೇ ಮತ್ತೆ ಅವರಿಗೆ ಸಚಿವ ಸ್ಥಾನ ನೀಡಬೇಕು, ಇಲ್ಲದಿದ್ದರೆ ಕಾಂಗ್ರೆಸ್ ಪಕ್ಷವನ್ನು ಬೆಂಬಲಿಸಿರುವ ನಮ್ಮ ಸಮಾಜದ ಮಹನೀಯರು ಪಕ್ಷಾತೀತವಾಗಿ, ಜಾತ್ಯತೀತವಾಗಿ ನಾಗೇಂದ್ರ ಅವರ ಪರವಾಗಿ ಹೋರಾಟ ಮಾಡಬೇಕಾಗುತ್ತದೆ, ಸಣ್ಣ ಸಮುದಾಯ ಎಂಬ ಕಾರಣಕ್ಕೆ ನಮ್ಮ ಸಮಾಜವನ್ನು ಟಾರ್ಗೆಟ್ ಮಾಡುತ್ತಿರುವ ಸಿದ್ದರಾಮಯ್ಯ ಅವರ ನಡೆಯ ವಿರುದ್ಧ ಪ್ರತಿಭಟನೆ ಮಾಡಬೇಕಾದ ಅನಿವಾರ್ಯತೆ ಎದುರಾಗಲಿದೆ ಎಂದು ಅವರು ಎಚ್ಚರಿಕೆ ನೀಡಿದರು.

PREV

Recommended Stories

ರಾಹುಲ್‌ ವಿರುದ್ಧ 5ಕ್ಕೆ ಬಿಜೆಪಿ ಧರಣಿ : ಬಿವೈವಿ
ಸಂಘರ್ಷ ಬಿಟ್ಟು ಒಳಮೀಸಲು ಜಾರಿ : ಪರಂ ನೇತೃತ್ವದ ಸಭೆ