ಕನ್ನಡಪ್ರಭ ವಾರ್ತೆ ಮಂಡ್ಯ
ಪಾದಯಾತ್ರೆ ಸಮಯದಲ್ಲಿ ಎರಡೂ ಪಕ್ಷದವರ ಬಾವುಟ ಇರಬಾರದು ಎಂದು ಮೊದಲೇ ತೀರ್ಮಾನ ಮಾಡಿದ್ದೆವು. ಅದಕ್ಕಾಗಿ ಎಲ್ಲರೂ ಕೇಸರಿ ಶಾಲನ್ನೇ ಧರಿಸಿ ಬಂದಿದ್ದೆವು. ಬಿಜೆಪಿಯವರೂ ಬಾವುಟ ಹಿಡಿದು ಬಂದಿರಲಿಲ್ಲ. ಹಾಗಾಗಿ ಇಲ್ಲಿ ಗೊಂದಲದ ಪ್ರಶ್ನೆಯೇ ಉದ್ಭವಿಸುವುದಿಲ್ಲ ಎಂದು ಗುರುವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.
ಬಿಜೆಪಿಯೊಂದಿಗೆ ನಾವು ಮೈತ್ರಿ ಮಾಡಿಕೊಂಡಿದ್ದೇವಷ್ಟೇ. ಯಾವುದೇ ಕಾರಣಕ್ಕೂ ನಮ್ಮ ಜಾತ್ಯತೀತ ತತ್ವ-ಸಿದ್ಧಾಂತಗಳನ್ನು ಬಿಟ್ಟುಕೊಡುವುದಿಲ್ಲ. ಅವುಗಳನ್ನು ಮುಂದುವರೆಸುತ್ತೇವೆ. ಜೆಡಿಎಸ್ ಕತೆ ಮುಗಿಯಿತು ಎನ್ನುವುದು ಕಾಂಗ್ರೆಸ್ಸಿಗರ ಭ್ರಮೆ ಎಂದು ಲೇವಡಿ ಮಾಡಿದರು.ದೇವೇಗೌಡರಿಂದ ಅಭಿವೃದ್ಧಿ, ಅಧಿಕಾರದ ಬಲ:
ನೀವು ಶಾಸಕರಾಗಿ, ಸಚಿವರಾಗಿದ್ದದ್ದು ಜೆಡಿಎಸ್ ಸರ್ಕಾರದಲ್ಲೇ ಎನ್ನುವುದನ್ನು ಮೆರೆತಿದ್ದೀರಾ. ನೀವು ಮಾಡಿರುವ ಅಭಿವೃದ್ಧಿಗಳೂ ಜೆಡಿಎಸ್ ಕೊಡುಗೆಗಳೇ ದೇವೇಗೌಡರು ಮತ್ತು ಕುಮಾರಸ್ವಾಮಿ ಅವರು ನಿಮಗೆ ರಾಜಕೀಯವಾಗಿ ಶಕ್ತಿ ತುಂಬಿದ್ದರು. ೨೦೦೮ರ ಚುನಾವಣೆಯಲ್ಲಿ ಸೋತಾಗ ದೊಡ್ಡಬಳ್ಳಾಪುರ ಕ್ಷೇತ್ರದಿಂದ ಟಿಕೆಟ್ ನೀಡಲು ಕುಮಾರಸ್ವಾಮಿ ದೇವೇಗೌಡರಿಗೆ ಹೇಳಿದ್ದರು. ಆದರೆ, ದೇವೇಗೌಡರು ಅದಕ್ಕೆ ಒಪ್ಪದೆ ಮಂಡ್ಯ ಲೋಕಸಭಾ ಚುನಾವಣೆ ಟಿಕೆಟ್ ಕೊಟ್ಟು ಸಂಸತ್‌ಗೆ ಕಳುಹಿಸಿದರು. ರಾಜಕೀಯ ಬೆಳವಣಿಗೆಗೆ ಕಾರಣರಾದವರ ಬಗ್ಗೆ ಇಂದು ಸಚಿವರು ಲಘುವಾಗಿ ಮಾತನಾಡುತ್ತಿರುವುದು ಸರಿಯಲ್ಲ ಎಂದರು.
ಜಿಲ್ಲೆಗೆ ಎಚ್.ಡಿ.ದೇವೇಗೌಡರು ಮತ್ತು ಕುಮಾರಸ್ವಾಮಿ ಅವರು ಏನೆಲ್ಲಾ ಕೊಡುಗೆಗಳನ್ನು ನೀಡಿದ್ದಾರೆ ಎಂಬ ಬಗ್ಗೆ ದಾಖಲೆಗಳೊಂದಿಗೆ ಚರ್ಚೆಗೆ ಬರುವುದಕ್ಕೆ ನಾವು ಸಿದ್ಧರಿದ್ದೇವೆ. ನೀವು ಸಿದ್ಧರಿದ್ದೀರಾ. ಬನ್ನಿ ಸಾರ್ವಜನಿಕವಾಗಿ ಚರ್ಚೆ ಮಾಡೋಣ. ಆಗ ಜಿಲ್ಲೆಗೆ ಜೆಡಿಎಸ್ ಕೊಡುಗೆ ಏನು, ಕಾಂಗ್ರೆಸ್ ಸರ್ಕಾರದ ಕೊಡುಗೆ ಏನು ಎಂಬ ಸತ್ಯದ ಅರಿವಾಗುತ್ತದೆ ಎಂದು ಸವಾಲು ಹಾಕಿದರು.
ಗೋಷ್ಠಿಯಲ್ಲಿ ಶಾಸಕ ಎಚ್.ಟಿ.ಮಂಜು, ಮಾಜಿ ಶಾಸಕರಾದ ಕೆ.ಸುರೇಶ್‌ಗೌಡ, ಡಾ.ಕೆ.ಅನ್ನದಾನಿ, ಜೆಡಿಎಸ್ ಜಿಲ್ಲಾಧ್ಯಕ್ಷ ಡಿ.ರಮೇಶ್, ಮನ್‌ಮುಲ್ ಮಾಜಿ ಅಧ್ಯಕ್ಷ ಬಿ.ಆರ್.ರಾಮಚಂದ್ರ, ಜಯರಾಂ ಇದ್ದರು.