ಸಚಿವ ಜಮೀರ್ ವಿರುದ್ಧ ಜೆಡಿಎಸ್ ಪ್ರತಿಭಟನೆ

KannadaprabhaNewsNetwork |  
Published : Nov 13, 2024, 12:00 AM IST
ಸಿಕೆಬಿ-2 ಸಚಿವ   ಜಮೀರ್ ಅಹ್ಮದ್ ಖಾನ್‌ ವಿರುದ್ದ   ಜಿಲ್ಲಾ ಜೆಡಿಎಸ್ ಕಾರ್ಯಕರ್ತರು ಜಿಲ್ಲಾಡಳಿತ ಭವನದ ಮುಂದೆ ಪ್ರತಿಭಟನೆ ನಡೆಸಿದರು. | Kannada Prabha

ಸಾರಾಂಶ

ಇಂತಹ ಸಚಿವ ಬಿ.ಜೆಡ್. ಜಮೀರ್ ಅಹ್ಮದ್ ಖಾನ್‌ ವಿರುದ್ದ ಕಾನೂನಿನ ರಿತ್ಯಾ ಕ್ರಮ ಕೈಗೊಳ್ಳುವಂತೆ ರಾಜ್ಯಪಾಲರಿಗೆ ಜಿಲ್ಲಾಧಿಕಾರಿಗಳ ಮೂಲಕ ಜಿಲ್ಲಾ ಜೆಡಿಎಸ್‌ ದೂರು ಸಲ್ಲಿಸಲಿದೆ. ಜಮೀರ್ ಅಹ್ಮದ್ ಖಾನ್‌ ವಿರುದ್ದ ಕ್ರಮ ಕೈಗೊಳ್ಳದಿದ್ದಲ್ಲಿ ರಾಜ್ಯಾದ್ಯಂತ ಹೋರಾಟ ಮಾಡಲು ನಿರ್ಧರಿಸಿದೆ

ಕನ್ನಡಪ್ರಭ ವಾರ್ತೆ ಚಿಕ್ಕಬಳ್ಳಾಪುರ

ಸಚಿವ ಬಿ.ಝಡ್. ಜಮೀರ್ ಅಹ್ಮದ್ ಖಾನ್‌ ಅವರು ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ವಿರುದ್ಧ ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆಯ ಪ್ರಚಾರದ ಭಾಷಣದಲ್ಲಿ ಅವಹೇಳನಕಾರಿ ಹಾಗೂ ಅಸಂಸದಿಯ ಪದಗಳನ್ನು ಬಳಕೆ ಮಾಡಿದ್ದಾರೆಂದು ಖಂಡಿಸಿ ಚಿಕ್ಕಬಳ್ಳಾಪುರ ಜಿಲ್ಲಾ ಜೆಡಿಎಸ್ ಕಾರ್ಯಕರ್ತರು ಜಿಲ್ಲಾಡಳಿತ ಭವನದ ಮುಂದೆ ಮಂಗಳವಾರ ಪ್ರತಿಭಟನೆ ನಡೆಸಿದರು.

ಜೆಡಿಎಸ್ ಜಿಲ್ಲಾಧ್ಯಕ್ಷ ಮುಕ್ತ ಮುನಿಯಪ್ಪ ಮಾತನಾಡಿ, ಚನ್ನಪಟ್ಟಣ ಉಪ ಚುನಾವಣೆಯಲ್ಲಿ ಕಾಂಗ್ರೆಸ್‌ ಅಭ್ಯರ್ಥಿ ಸಿ.ಪಿ.ಯೋಗೇಶ್ವರ್‌ ಪರ ಪ್ರಚಾರದ ವೇಳೆ ವಸತಿ ಹಾಗೂ ವಕ್ಫ್‌ ಸಚಿವ ಬಿ. ಝಡ್​. ಜಮೀರ್​ ಅಹ್ಮದ್​ ಖಾನ್ ​​ ಭಾಷಣದ ಮಧ್ಯೆ ‘ಕರಿಯ ಕುಮಾರಸ್ವಾಮಿ’ ಎಂದು ಅವಹೇಳನಕಾರಿ ಹೇಳಿಕೆ ನೀಡಿ ವರ್ಣಭೇದ ಮಾಡಿದ್ದಾರೆ ಎಂದು ಆರೋಪಿಸಿದರು.

ಕ್ರಮ ಕೈಗೊಳ್ಳದಿದ್ದರೆ ಹೋರಾಟ

ಕುಮಾರಸ್ವಾಮಿ ಬಿಜೆಪಿಗೆ ಹೋಗಿ ಮುಸಲ್ಮಾನರನ್ನು ಖರೀದಿ ಮಾಡುತ್ತಾನಂತೆ. ಏ ಕುಮಾರಸ್ವಾಮಿ ನಿನ್‌ ರೇಟು ಹೇಳು, ಮುಸಲ್ಮಾನರು ಒಂದೊಂದ್‌ ಪೈಸೆ ಹಾಕಿ ಇಡೀ ನಿನ್ನ ಕುಟುಂಬವನ್ನೇ ಖರೀದಿ ಮಾಡುತ್ತಾರೆ’ ಎಂದು ಉರ್ದುವಿನಲ್ಲಿ ಟೀಕಿಸಿದ್ದಾರೆ. ಇಂತಹ ಸಚಿವ ಬಿ.ಜೆಡ್. ಜಮೀರ್ ಅಹ್ಮದ್ ಖಾನ್‌ ವಿರುದ್ದ ಕಾನೂನಿನ ರಿತ್ಯಾ ಕ್ರಮ ಕೈಗೊಳ್ಳುವಂತೆ ರಾಜ್ಯಪಾಲರಿಗೆ ಜಿಲ್ಲಾಧಿಕಾರಿಗಳ ಮೂಲಕ ದೂರು ಸಲ್ಲಿಸುತ್ತಿದ್ದೇವೆ. ಜಮೀರ್ ಅಹ್ಮದ್ ಖಾನ್‌ ವಿರುದ್ದ ಕ್ರಮ ಕೈಗೊಳ್ಳದಿದ್ದಲ್ಲಿ ರಾಜ್ಯಾದ್ಯಂತ ಹೋರಾಟ ಮಾಡುತ್ತೇವೆ ಎಂದು ಹೇಳಿದರು. ಜೆಡಿಎಸ್ ಜಿಲ್ಲಾ ಕಾರ್ಯಾಧ್ಯಕ್ಷ ಕೆ.ಆರ್.ರೆಡ್ಡಿ ಮಾತನಾಡಿ, ಕಾಂಗ್ರೆಸ್‌ ವಿರೋಧಿಸುವ ನಾಯಕರ ಮೇಲೆ ಜನಾಂಗೀಯ ದಾಳಿ, ನಿಂದನೆಗಳ ಮಾಡುವುದೇ ಕಾಂಗ್ರೆಸ್ಸಿಗರ ಚಾಳಿ. ಇದು ಕಾಂಗ್ರೆಸ್‌ನ ನಿಜಮುಖ. ದ್ವೇಷ ಹರಡುವುದು, ವಿಭಜಿಸುವುದು ಮತ್ತು ಅಗೌರವ ತೋರುವುದು ಕಾಂಗ್ರೆಸ್‌ ಸಂಸ್ಕೃತಿಯಾಗಿದೆ. ಇದಕ್ಕೆಲ್ಲ ಜೆಡಿಎಸ್ ಹೆದರುವುದಿಲ್ಲ ಎಂದರ.

ರಾಜಕೀಯ ಜೀವನ ನೀಡಿದ್ದು ಎಚ್ಡಿಡಿ

ಜೆಡಿಎಸ್ ವರಿಷ್ಠ ಹಾಗೂ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರು ಚಾಮರಾಜ ಪೇಟೆಯಲ್ಲಿ ಜಮೀರ್‌ ಅವರನ್ನು ಗೆಲ್ಲಿಸಿ ರಾಜಕೀಯ ಜೀವನ ನೀಡಿದ್ದರು. ಈಗ ಅದೇ ಜಮೀರ್‌ ಗೌಡರ ಕುಟುಂಬ ಖರೀದಿಸುತ್ತೇನೆ ಎಂದಿದ್ದಾರೆ. ಇದು ಒಕ್ಕಲಿಗರನ್ನೇ ಖರೀದಿಸುತ್ತೇವೆ ಎಂದು ಅರ್ಥವೇ ಅಥವಾ ಹಿಂದೂಗಳನ್ನು ಖರೀದಿಸುತ್ತೇವೆ ಎಂದು ಅರ್ಥವೇ ಎಂದು ಪ್ರಶ್ನಿಸಿದರು.

ಜಮೀರ್‌ ಫೋಟೋಗೆ ಚಪ್ಪಲಿಹಾರ

ʼಚಪ್ಪಲಿ ಹಾರ ಹಾಕಿರುವ ಸಚಿವ ಬಿ.ಜೆಡ್. ಜಮೀರ್ ಅಹ್ಮದ್ ಖಾನ್‌ ಭಾವಚಿತ್ರ ವಿರುವ ʼ ಬಿತ್ತಪತ್ರ ಪ್ರದರ್ಶಿಸಿ ಜಮೀರ್ ಅಹ್ಮದ್ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿ ಅಸಮಾಧಾನ ಹೊರಹಾಕಿದರು. ಪ್ರತಿ ಭಟನೆಯ ನಂತರ ಪ್ರತಿಭಟಣಾಕಾರರು ಜಿಲ್ಲಾಧಿಕಾರಿಗಳ ಮೂಲಕ ರಾಜ್ಯಪಾಲರಿಗೆ ಮನವಿ ಸಲ್ಲಿಸಿದರು .

ಪ್ರತಿಭಟನೆಯಲ್ಲಿ ಬಂಡ್ಲು ಶ್ರೀನಿವಾಸ್,ಶಾಂತಮೂರ್ತಿ,ಮಂಜುನಾಥ್,ವೆಂಕಟೇಶ್, ಸಾಧಿಕ್,ಜಫ್ರುಲ್ಲಾ ಖಾನ್, ಪಾರಿಜಾತಮ್ಮ, ಶ್ರೀಧರ್, ಮುನಿಕೃಷ್ಣ ಮತ್ತಿತರರು ಇದ್ದರು

PREV
Catch up on the latest political news from Karnataka and India (ರಾಜಕೀಯ ಸುದ್ದಿ) — election results, government decisions, party updates, and in-depth political analysis on Kannada Prabha.

Recommended Stories

ಜಿ ರಾಮ್‌ ಜಿ, ಅನುದಾನ ಕಡಿತ ವಿರುದ್ಧ ಇಂದು ರಾಜ್ಯ ಸಂಪುಟದಲ್ಲಿ ನಿರ್ಣಯ?
ಹಸ್ತಕ್ಷೇಪ ನಿಲ್ಲಿಸಿ ಎಂದ ಸಿದ್ದು, ಡಿಕೆ ಕೇರಳ ಸಿಎಂ ತಿರುಗೇಟು