ಕನ್ನಡಪ್ರಭ ವಾರ್ತೆ ಕೆ.ಆರ್.ಪೇಟೆ
ಪಟ್ಟಣದ ಟಿಎಪಿಸಿಎಂಎಸ್ ಆವರಣದಲ್ಲಿ ಜನರೊಂದಿಗೆ ಜನತಾದಳ ಡಿಜಿಟಲ್ ಸದಸ್ಯತ್ವ ನೋಂದಣಿ ಅಭಿಯಾನದ ಅಂಗವಾಗಿ ತಾಲೂಕು ಜೆಡಿಎಸ್‌ನಿಂದ ಆಯೋಜಿಸಿದ್ದ ಬೃಹತ್ ಕಾರ್ಯಕರ್ತರ ಸಭೆಗೆ ಚಾಲನೆ ನೀಡಿ ಮಾತನಾಡಿದರು.
ಸಿದ್ದರಾಮಯ್ಯರನ್ನು ನಂಬಿ ಹೋದ ಹಿರಿಯ ಶಾಸಕ ಬಿ.ಆರ್ ಪಾಟೀಲ್ ಅವರ ಗತಿ ಏನಾಗಿದೆ. ಬೀದಿಯಲ್ಲಿ ಬಂದು ಸರ್ಕಾರದ ವಿರುದ್ಧ ಮಾತನಾಡುತ್ತಿದ್ದಾರೆ. ಲಾಟರಿ ಸಿಎಂ ಅಂತ ಅವರ ಪಕ್ಷದಲ್ಲೇ ಮಾತಾಡುತ್ತಿದ್ದಾರೆ. ಇದಕ್ಕೆ ಉತ್ತರಿಸಿ ಎಂದು ಪ್ರಶ್ನಿಸಿದರು.ಕೆ.ಆರ್.ಪೇಟೆ ಕ್ಷೇತ್ರದ ಅಭಿವೃದ್ಧಿಗೆ ರಾಜ್ಯ ಸರ್ಕಾರದಿಂದ ಯಾವುದೇ ಸಹಕಾರ, ಅನುದಾನ ಸಿಗುತ್ತಿಲ್ಲ ಎಂದು ಇಲ್ಲಿನ ಶಾಸಕ ಎಚ್.ಟಿ.ಮಂಜು ಹೇಳುತ್ತಿದ್ದಾರೆ. ಇದು ಕೇವಲ ವಿಪಕ್ಷದ ಶಾಸಕರು ಮಾತ್ರ ಹೇಳುತ್ತಿಲ್ಲ. ಬದಲಾಗಿ ರಾಜ್ಯದಲ್ಲಿ ಆಡಳಿತ ನಡೆಸುತ್ತಿರುವ ಕಾಂಗ್ರೆಸ್ ಶಾಸಕರೇ ಹೇಳುತ್ತಿದ್ದಾರೆ ಎಂದು ಕಿಡಿಕಾರಿದರು.
ಸಿಎಂ ಸಿದ್ದರಾಮಯ್ಯ ಅವರೇ ನೀವು ಜೆಡಿಎಸ್ ಬಗ್ಗೆ ಚರ್ಚಿಸುವುದನ್ನು ಬಿಟ್ಟು ನಿಮ್ಮ ಪಕ್ಷದ ಸಮಸ್ಯೆ ಬಗೆಹರಿಸಿಕೊಳ್ಳಿ. ನಿಮ್ಮ ರಾಜಕೀಯ ಅನುಭವಕ್ಕಾಗಿರುವಷ್ಟು ವಯಸ್ಸು ನನಗಾಗಿಲ್ಲ. ಆದರೆ, ನಮ್ಮ ಪಕ್ಷದ ಇತಿಹಾಸದ ಬಗ್ಗೆ ನನಗೆ ಅರಿವಿದೆ. ಬಿಜೆಪಿ -ಜೆಡಿಎಸ್ ಮೈತ್ರಿಯಿಂದ ರಾಜ್ಯದಲ್ಲಿ ಜೆಡಿಎಸ್ ಬಲ ಕುಂದಿಲ್ಲ ಎಂದರು.
ಜೆಡಿಎಸ್ ನಿಷ್ಟಾವಂತ ಕಾರ್ಯಕರ್ತರ ಹೃದಯದಲ್ಲಿದೆ. ನಾವು ಎಂದಿಗೂ ಹೆದರಿ ಓಡಿ ಹೋಗುವವರಲ್ಲ. 100 ವರ್ಷದ ಇತಿಹಾಸ ಹೊಂದಿರುವ ನಿಮ್ಮ ಕಾಂಗ್ರೆಸ್ ದೇಶದಲ್ಲಿ ಕೇವಲ ಮೂರು ರಾಜ್ಯಗಳಲ್ಲಿ ಮಾತ್ರ ಅಧಿಕಾರದಲ್ಲಿದೆ. ಗ್ಯಾರಂಟಿ ಮೂಲಕ ಜನರ ಧಿಕ್ಕು ತಪ್ಪಿಸಿ ಅಧಿಕಾರಕ್ಕೆ ಬಂದಿದ್ದೀರಿ. ಯಾರೋ ಕಟ್ಟಿ ಬೆಳೆಸಿದ ಪಕ್ಷಕ್ಕೆ ಸೇರಿಕೊಂಡ ನೀವು ನಾಯಕತ್ವಕ್ಕೆ ಸೆಡ್ಡು ಹೊಡೆಯುತ್ತಾರೆನ್ನುವ ಕಾರಣಕ್ಕೆ ಈ ಹಿಂದೆ ಪಕ್ಷದ ಪ್ರಭಾವಿ ರಾಜಕಾರಣಿಯೊಬ್ಬರನ್ನು ಸೋಲುವಂತೆ ಮಾಡಿದೀರಿ ಎಂದು ಆರೋಪಿಸಿದರು.
ಜೆಡಿಎಸ್ ವರಿಷ್ಠ ಎಚ್.ಡಿ.ದೇವೇಗೌಡರು ಮತ್ತು ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿ ಅವರು ಅಧಿಕಾರ ಅನುಭವಿಸಿದ್ದು ಕಡಿಮೆ. ಆದರೆ, ತಮ್ಮ ಕೆಲಸಗಳ ಮೂಲಕ ಕಡಿಮೆ ಅವಧಿಯಲ್ಲಿಯೇ ಜನರ ಹೃದಯದಲ್ಲಿ ಸ್ಥಾನ ಪಡೆದಿದ್ದಾರೆ. ರೈತ ಪರ ಕಾಳಜಿ ಮತ್ತು ಹೋರಟದ ತಳಹದಿಯ ಮೇಲೆ ಜೆಡಿಎಸ್ ನಿಂತಿದೆ. ಕುಮಾರಣ್ಣ ಕೇಂದ್ರ ಸಚಿವರಾಗಿ ರಾಜ್ಯದ ಅಭಿವೃದ್ಧಿಯ ಬಗ್ಗೆ ಅಪಾರ ತುಡಿತ ಹೊಂದಿದ್ದಾರೆ. ಆದರೆ, ಅವರಿಗೆ ರಾಜ್ಯ ಸರ್ಕಾರ ಅಗತ್ಯ ಸಹಕಾರ ನೀಡುತ್ತಿಲ್ಲ ಬೇಸರ ವ್ಯಕ್ತಪಡಿಸಿದರು.
ಸಮಾರಂಭದಲ್ಲಿ ಶಾಸಕ ಎಚ್.ಟಿ.ಮಂಜು, ಮಾಜಿ ಶಾಸಕರಾದ ಅನ್ನದಾನಿ, ಸುರೇಶ್ ಗೌಡ, ಪಕ್ಷದ ಜಿಲ್ಲಾಧ್ಯಕ್ಷ ಡಿ.ರಮೇಶ್, ತಾಲೂಕು ಅಧ್ಯಕ್ಷ ಜಾನಕೀರಾಂ, ಮೈಸೂರಿನ ಮಾಜಿ ಮೇಯರ್ ರವಿ, ಮುಖಂಡರಾದ ಎಚ್.ಕೆ.ಅಶೋಕ್, ಮಲ್ಲೇನಹಳ್ಳಿ ಮೋಹನ್, ಶೀಳನೆರೆ ಮೋಹನ್, ವಿ.ಎಂ.ಮಹದೇವೇಗೌಡ, ಬಿ.ಎಂ.ಕಿರಣ್, ಅಕ್ಕಿಹೆಬ್ಬಾಳು ರಘು, ಗದ್ದೆಹೊಸೂರು ಅಶ್ವಿನ್ ಕುಮಾರ್, ಶಾಸಕರ ಸಹೋದರ ಎಚ್.ಟಿ.ಲೋಕೇಶ್, ಜೆಡಿಎಸ್ ಮಹಿಳಾ ಘಟಕದ ತಾಲೂಕು ಅಧ್ಯಕ್ಷೆ ರೇಖಾ ಸೇರಿದಂತೆ ಹಲವರಿದ್ದರು.