KannadaprabhaNewsNetwork | Updated : Mar 08 2024, 03:52 PM IST
ಸಾರಾಂಶ
ಮಂಡ್ಯ ಜಿಲ್ಲಾ ನಾಯಕರೊಂದಿಗೆ ಜೆಡಿಎಸ್ ಸಭೆ ನಡೆಸಿರುವುದು ಆ ಪಕ್ಷದ ಆಂತರಿಕ ವಿಚಾರದ. ಅದರಲ್ಲಿ ಮಧ್ಯಪ್ರವೇಶಿಸಿ ನಾನು ಮಾತನಾಡುವುದಿಲ್ಲ. ಮೈತ್ರಿ ಧರ್ಮ ಪಾಲಿಸುವ ನಿರ್ಧಾರ ಮಾಡಿರುವುದನ್ನು ಸ್ವಾಗತಿಸುವೆ. ಲೋಕಸಭೆ ಚುನಾವಣೆಯಲ್ಲಿ ಮೈತ್ರಿ ಧರ್ಮ ಪಾಲನೆ ಮಾಡುವ ನಿರ್ಧಾರ ಮಾಡಿರುವುದು ಒಳ್ಳೆಯ ಬೆಳವಣಿಗೆ.
ಕನ್ನಡಪ್ರಭ ವಾರ್ತೆ ಮಂಡ್ಯಲೋಕಸಭೆ ಚುನಾವಣೆಯಲ್ಲಿ ಮೈತ್ರಿ ಧರ್ಮ ಪಾಲನೆ ಮಾಡುವ ನಿರ್ಧಾರ ಮಾಡಿರುವುದು ಒಳ್ಳೆಯ ಬೆಳವಣಿಗೆ. ನಾನು ಅದನ್ನು ಸ್ವಾಗತಿಸುತ್ತೇನೆ. ನಾನಾದರೂ ಅಷ್ಟೇ. ಯಾರೇ ಅಭ್ಯರ್ಥಿಯಾದರೂ ಪಕ್ಷದ ಸೂಚನೆಯಂತೆ ಕೆಲಸ ಮಾಡುತ್ತೇನೆ ಎಂದು ಸಂಸದೆ ಸುಮಲತಾ ಅಂಬರೀಶ್ ಹೇಳಿದರು.
ಇಲ್ಲಿನ ಚಾಮುಂಡೇಶ್ವರಿ ನಗರದ ತಮ್ಮ ನಿವಾಸದಲ್ಲಿ ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಮಾತನಾಡಿ, ಜಿಲ್ಲಾ ನಾಯಕರೊಂದಿಗೆ ಜೆಡಿಎಸ್ ಸಭೆ ನಡೆಸಿರುವುದು ಆ ಪಕ್ಷದ ಆಂತರಿಕ ವಿಚಾರದ. ಅದರಲ್ಲಿ ಮಧ್ಯಪ್ರವೇಶಿಸಿ ನಾನು ಮಾತನಾಡುವುದಿಲ್ಲ. ಮೈತ್ರಿ ಧರ್ಮ ಪಾಲಿಸುವ ನಿರ್ಧಾರ ಮಾಡಿರುವುದನ್ನು ಸ್ವಾಗತಿಸುವೆ ಎಂದರು.
ನಾನು ಮಂಡ್ಯ ಬಿಟ್ಟು ಎಲ್ಲೂ ಹೋಗುವುದಿಲ್ಲ. ಇನ್ನೊಂದು ಎರಡು ದಿನ ಅಥವಾ ಒಂದು ವಾರ ಕಾಯಿರಿ. ನಿಮ್ಮ ಪ್ರಶ್ನೆಗಳಿಗೆಲ್ಲಾ ಉತ್ತರ ಸಿಗಲಿದೆ. ನೀವು ನಮ್ಮ ಪಕ್ಷಕ್ಕೆ ಬೇಕು ಮಂಡ್ಯದಲ್ಲಿ ಪಕ್ಷ ಸಂಘಟನೆಗೆ ನೀವು ಬೇಕು ಎಂದು ಎಲ್ಲೆಡೆ ಹೇಳುತ್ತಿದ್ದಾರೆ. ಪಕ್ಷದ ಹೈಕಮಾಂಡ್ ನನಗೆ ಟಿಕೆಟ್ ಘೋಷಿಸಿದ ಕೂಡಲೇ ತಾಲೂಕುವಾರು ಸಭೆಗಳನ್ನು ನಡೆಸುವುದಾಗಿ ತಿಳಿಸಿದರು.
ಹನಕೆರೆ ಗ್ರಾಮದ ಬಳಿ ಅಂಡರ್ ಪಾಸ್ ನಿರ್ಮಾಣಕ್ಕೆ ನಾನು ಎನ್‌ಎಚ್ಎ ಅಧಿಕಾರಿಗಳಿಗೆ ಪತ್ರ ಬರೆದಿದ್ದೆ ಎಂದು ಹೇಳಿ ಪತ್ರ ಬರೆದಿದ್ದನ್ನ ಓದಿ ಹೇಳಿದ ಸಂಸದೆ, ಅಂಡರ್ ಪಾಸ್ ವಿಚಾರದಲ್ಲಿ ಸಂಸದರು ಕ್ರೆಡಿಟ್ ತೆಗೆದುಕೊಳ್ಳುವುದಕ್ಕೆ ಪ್ರಯತ್ನಿಸುತ್ತಿದ್ದಾರೆ ಎಂದಿದ್ದ ಶಾಸಕ ರವಿಕುಮಾರ್ ಮಾತಿಗೆ ಕ್ರೆಡಿಟ್‌ಗಾಗಿ ನಾನು ಈ ಕೆಲಸ ಮಾಡ್ತಿಲ್ಲ. ಹಾಗೊಂದು ವೇಳೆ ಕ್ರೆಡಿಟ್ ತೆಗೆದುಕೊಳ್ಳಬೇಕೆಂದಿದ್ದರೆ ಇಂತಹ ಕೆಲಸ ಮಾಡಿದ್ದೇನೆ ಎಂದು ಎಲ್ಲಾ ಕಡೆ ಫೋಟೋ ಹಾಕಿಕೊಳ್ಳುತ್ತಿದ್ದೆ ಎಂದು ಅಣಕಿಸಿದರು.ಮುಖ್ಯಮಂತ್ರಿ ಸ್ಥಾನ ಖಾಲಿ ಇಲ್ಲ: ಚಲುವರಾಯಸ್ವಾಮಿಮಂಡ್ಯರಾಜ್ಯದಲ್ಲಿ ಮುಖ್ಯಮಂತ್ರಿ ಸ್ಥಾನ ಖಾಲಿ ಇಲ್ಲ. ಹಾಗಾಗಿ ದಲಿತ ಮುಖ್ಯಮಂತ್ರಿ ಎಂಬ ವಿಚಾರವೇ ಅಪ್ರಸ್ತುತ. ಮುಖ್ಯಮಂತ್ರಿ ಆಯ್ಕೆ ಸಂದರ್ಭ ಬಂದಾಗ ನೋಡೋಣ ಎಂದು ಕೃಷಿ ಸಚಿವ ಎನ್.ಚಲುವರಾಯಸ್ವಾಮಿ ಪ್ರತಿಕ್ರಿಯಿಸಿದರು.ನಮ್ಮದು ಜಾತ್ಯತೀತ ಪಕ್ಷ. ಯಾವ ಸಮಾಜಕ್ಕೆ ಬೇಕಾದರೂ ಅವಕಾಶ ಸಿಗಲಿದೆ. ಎಐಸಿಸಿ ಅಧ್ಯಕ್ಷರೇ ದಲಿತರಿದ್ದಾರೆ.ಅವರೇ ಸೂಕ್ತವಾದ ನಿರ್ಧಾರ ಮಾಡುತ್ತಾರೆ. ಮುಖ್ಯಮಂತ್ರಿ ಯಾರಾಗಬೇಕು ಎಂಬ ವಿಚಾರವನ್ನು ಹೈಕಮಾಂಡ್ ನಿರ್ಧಾರ ಮಾಡುತ್ತದೆ ಎಂದು ನಗರದಲ್ಲಿ ಸುದ್ದಿಗಾರರಿಗೆ ತಿಳಿಸಿದರು.ಕಾಂಗ್ರೆಸ್‌ನಲ್ಲಿ ದುಡ್ಡು ಇದ್ದವರಿಗೆ ಟಿಕೆಟ್ ಸಿಗಲಿದೆ ಎಂಬ ಡಾ.ಎಚ್.ಎನ್.ರವೀಂದ್ರ ಆರೋಪಕ್ಕೆ ಪ್ರತಿಕ್ರಿಯಿಸಿ, ಟಿಕೆಟ್ ಕೊಡುವ ವಿಚಾರ ನನ್ನ ವ್ಯಾಪ್ತಿಯಲ್ಲಿ ಇಲ್ಲ. ಪಕ್ಷದ ಎಐಸಿಸಿ ಅಧ್ಯಕ್ಷರು, ಪಕ್ಷದ ಹಿರಿಯ ನಾಯಕರು ಕೊಡುತ್ತಾರೆ. ಡಾ ರವೀಂದ್ರ ತಮ್ಮ ಹುದ್ದೆಗೆ ರಾಜೀನಾಮೆ ಕೊಟ್ಟಿದ್ದಾರೆ. ಅದನ್ನು ಅಂಗೀಕರಿಸೋದು ಪಕ್ಷಕ್ಕೆ ಬಿಟ್ಟ ವಿಚಾರ ಎಂದರು.ರವೀಂದ್ರ ಅವರು ತಮ್ಮನನ್ನು ವರ್ಗಾವಣೆ ಮಾಡುವಂತೆ ಕೇಳಿದ್ದರು. ಎರಡೇ ದಿನದಲ್ಲಿ ವರ್ಗಾವಣೆ ಮಾಡಿಸಿ ಅದನ್ನು ನಾನು ವ್ಯಾಟ್ಸಾಪ್ ಕೂಡ ಮಾಡಿದ್ದೆ. ಅವರೊಬ್ಬಸ್ನೇಹಿತ. ಪಕ್ಷದಲ್ಲಿ ಮುಂದುವರಿಯೋದು ಬಿಡೋದು ಅವರಿಗೆ ಬಿಟ್ಟ ವಿಚಾರ ಎಂದಷ್ಟೇ ಹೇಳಿದರು.