ಚಾಮರಾಜನಗರ: ನಗರದ ಕೃಷಿ ಮಹಾ ವಿದ್ಯಾಲಯದ ವತಿಯಿಂದ ಚಿಕ್ಕತುಪ್ಪೂರು ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಕನ್ನಡ ರಾಜ್ಯೋತ್ಸವ ಆಚರಿಸಲಾಯಿತು. ಮುಖ್ಯೋಪಾಧ್ಯಾಯರಾದ ಪಾರ್ವತಮ್ಮ ಮಾತನಾಡಿ, ಪ್ರತಿಯೊಬ್ಬರು ಕನ್ನಡಭಾಷೆಯ ಬಗ್ಗೆ ಅಭಿಮಾನ ಬೆಳೆಸಿಕೊಳ್ಳಬೇಕು. ಹೆಚ್ಚು ಹೆಚ್ಚು ಓದುವಂತಹ ವಾತವರಣ ನಿರ್ಮಿಸಿಕೊಳ್ಳಬೇಕು ಎಂದು ಕರೆ ನೀಡಿದರು. ಎಸ್ ಡಿಎಂಸಿ ಸದಸ್ಯ ದೊಡ್ಡಸ್ವಾಮಿಯವರು ತಾಯಿ ಭುವನೇಶ್ವರಿ ದೇವಿಗೆ ಪೂಜೆ ಸಲ್ಲಿಸಿ, ಕನ್ನಡ ರಾಜ್ಯೋತ್ಸವದ ಮಹತ್ವ, ನಾಡಿನ ಇತಿಹಾಸ ಹಾಗೂ ಕನ್ನಡ ಸಂಸ್ಕೃತಿಯ ಬಗ್ಗೆ ಮಾತನಾಡಿದರು. ಸಹ ಶಿಕ್ಷಕಿ ಸಿದ್ದಮ್ಮ ನಿರೂಪಣೆ ಮಾಡಿದರು. ಕೃಷಿ ಕಾಲೇಜಿನ ವಿದ್ಯಾರ್ಥಿಗಳು, ಶಾಲೆಯ ಮಕ್ಕಳು ಹಾಗೂ ಗ್ರಾಮಸ್ಥರ ಸಮ್ಮುಖದಲ್ಲಿ ಕಾರ್ಯಕ್ರಮ ಯಶಸ್ವಿಯಾಯಿತು. -------------