ಕೆಂಪೇಗೌಡರು ದೂರದೃಷ್ಟಿ ಆಡಳಿತಗಾರ: ಸಿಎಂ ಸಿದ್ದರಾಮಯ್ಯ ಬಣ್ಣನೆ

KannadaprabhaNewsNetwork |  
Published : Jun 28, 2025, 01:33 AM ISTUpdated : Jun 28, 2025, 06:38 AM IST
ಮಾಲಾರ್ಪಣೆ | Kannada Prabha

ಸಾರಾಂಶ

ನಾಡಪ್ರಭು ಕೆಂಪೇಗೌಡರು ದಕ್ಷ ಹಾಗೂ ದೂರದೃಷ್ಟಿಯಿದ್ದಂತಹ ಆಡಳಿತಗಾರ. ಅವರ ಆಡಳಿತ ನಮ್ಮೆಲ್ಲರಿಗೂ ಮಾದರಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ಕನ್ನಡಪ್ರಭ ವಾರ್ತೆ, ಬೆಂಗಳೂರು ನಾಡಪ್ರಭು ಕೆಂಪೇಗೌಡರು ದಕ್ಷ ಹಾಗೂ ದೂರದೃಷ್ಟಿಯಿದ್ದಂತಹ ಆಡಳಿತಗಾರ. ಅವರ ಆಡಳಿತ ನಮ್ಮೆಲ್ಲರಿಗೂ ಮಾದರಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.ಕೆಂಪೇಗೌಡರ 516 ನೇ ಜಯಂತಿಯ ಅಂಗವಾಗಿ ವಿಧಾನಸೌಧದ ಪೂರ್ವ ದಿಕ್ಕಿನಲ್ಲಿರುವ ಅವರ ಪ್ರತಿಮೆಗೆ ಶುಕ್ರವಾರ ಮಾಲಾರ್ಪಣೆ ಮಾಡಿದ ನಂತರ ಮಾಧ್ಯಮದವರೊಂದಿಗೆ ಮಾತನಾಡಿದರು.

2013-18ರ ಅವಧಿಯಲ್ಲಿ ನಮ್ಮ ಸರ್ಕಾರ ಡಾ.ನಿರ್ಮಲಾನಂದ ಸ್ವಾಮೀಜಿ ಅವರೊಂದಿಗೆ ಚರ್ಚಿಸಿ ಕೆಂಪೇಗೌಡರ ಜನ್ಮದಿನಾಂಕವನ್ನು ತಿಳಿದು, ಪ್ರತೀ ವರ್ಷ ಅವರ ಜಯಂತಿ ಆಚರಣೆಗೆ ಕ್ರಮ ವಹಿಸಿತ್ತು. ಅದರಂತೆ ಸರ್ಕಾರದಿಂದಲೇ ಪ್ರತೀ ವರ್ಷ ಜಯಂತಿ ಆರಂಭಿಸುವ ಮೂಲಕ ಕೆಂಪೇಗೌಡರನ್ನು ಸ್ಮರಿಸುವ ಕೆಲಸ ಮಾಡುತ್ತಿದೆ. ಈ ಬಾರಿ ಕೆಂಪೇಗೌಡರ 516ನೇ ಜಯಂತಿಯನ್ನು ಸರ್ಕಾರ, ಕಂಪೇಗೌಡ ಅಭಿವೃದ್ಧಿ ಪ್ರಾಧಿಕಾರ ಹಾಗೂ ಬಿಬಿಎಂಪಿ ಸಹಯೋಗದಲ್ಲಿ ಆಚರಿಸಲಾಗುತ್ತಿದೆ. ಸುಮನಹಳ್ಳಿಯ ಜಗಜೀವನ್ ರಾಮ್ ನಗರದಲ್ಲಿ ಕೆಂಪೇಗೌಡ ಜಯಂತಿ ಆಚರಿಸಲಾಗುತ್ತಿದೆ. ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ವಿಮಾನನಿಲ್ದಾಣದ ಬಳಿ ಇರುವ ಕೆಂಪೇಗೌಡರ ಪ್ರತಿಮೆಗೆ ಮಾಲಾರ್ಪಣೆ ಮಾಡಿ ಗೌರವ ಸಲ್ಲಿಸಿದ್ದಾರೆ ಎಂದು ತಿಳಿಸಿದರು.

ಬೆಂಗಳೂರಿನ ನಾಲ್ಕು ಭಾಗದಲ್ಲಿ ಗೋಪುರಗಳನ್ನು ಕಟ್ಟಿಸಿದ ಕೆಂಪೇಗೌಡರು ಅಂದೇ ಬೆಂಗಳೂರಿನ ಆಡಳಿತ ಹೇಗಿರಬೇಕೆಂದು ಅರಿತು ವೃತ್ತಿ ಆಧಾರಿತವಾಗಿ ಅನೇಕ ಪೇಟೆಗಳನ್ನು ತಮ್ಮ ಆಡಳಿತಾವಧಿಯಲ್ಲಿ ನಿರ್ಮಿಸಿದ್ದರು. ಅಂತಾರಾಷ್ಟ್ರೀಯ ಮಟ್ಟದಲ್ಲಿ ಗುರುತಿಸಲ್ಪಟ್ಟಿದ್ದರೆ ಅದಕ್ಕೆ ಅಡಿಪಾಯ ಹಾಕಿದ್ದು ಕೆಂಪೇಗೌಡರು. ಅವರ ಆಡಳಿತ ನಮಗೆಲ್ಲರಿಗೂ ಮಾದರಿ ಎಂದು ಹೇಳಿದರು.

PREV
Catch up on the latest political news from Karnataka and India (ರಾಜಕೀಯ ಸುದ್ದಿ) — election results, government decisions, party updates, and in-depth political analysis on Kannada Prabha.
Read more Articles on

Recommended Stories

ದ್ವೇಷಭಾಷಣ ಬಿಲ್‌ಗೆ ಸಹಿ ಬೇಡ : ಗೌರ್ನರ್‌ಗೆ ಬಿಜೆಪಿ
‘ಜಿ ರಾಮ್‌ ಜಿ’ ವಿರುದ್ಧ ಸಮರಕ್ಕೆ ನಾಳೆ ಕೈ ವಿಶೇಷ ಸಂಪುಟ ಸಭೆ