ಸೋನಿಯಾ ಎಂಪಿ ನಿಧಿ ಅಲ್ಪಸಂಖ್ಯಾತರಿಗೆ ಎಂದ ಬಿಜೆಪಿ ಮಾಡಿದ್ದೇನು: ಖರ್ಗೆ

KannadaprabhaNewsNetwork |  
Published : May 16, 2024, 12:54 AM ISTUpdated : May 16, 2024, 04:10 AM IST
 ಖರ್ಗೆ | Kannada Prabha

ಸಾರಾಂಶ

ರಾಯ್‌ಬರೇಲಿ ಸಂಸದೆ ಸೋನಿಯಾ ಗಾಂಧಿ ತಮ್ಮ ಸಂಸದರ ನಿಧಿಯಿಂದ ಶೇ.70ರಷ್ಟು ಹಣವನ್ನು ಅಲ್ಪಸಂಖ್ಯಾತರಿಗೆ ನೀಡಿದ್ದಾರೆ ಎಂಬ ಕೇಂದ್ರ ಗೃಹ ಸಚಿವ ಅಮಿತ್ ಶಾ ಹೇಳಿಕೆಗೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ತಿರುಗೇಟು ನೀಡಿದ್ದಾರೆ.

ನವದೆಹಲಿ: ರಾಯ್‌ಬರೇಲಿ ಸಂಸದೆ ಸೋನಿಯಾ ಗಾಂಧಿ ತಮ್ಮ ಸಂಸದರ ನಿಧಿಯಿಂದ ಶೇ.70ರಷ್ಟು ಹಣವನ್ನು ಅಲ್ಪಸಂಖ್ಯಾತರಿಗೆ ನೀಡಿದ್ದಾರೆ ಎಂಬ ಕೇಂದ್ರ ಗೃಹ ಸಚಿವ ಅಮಿತ್ ಶಾ ಹೇಳಿಕೆಗೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ತಿರುಗೇಟು ನೀಡಿದ್ದಾರೆ. 

ಸಂಸದರ ನಿಧಿಯ ಒಟ್ಟು ಮೊತ್ತ ಬರಿ 5 ಕೋಟಿ. ಅದರಲ್ಲಿ ಪ್ರಮುಖವಾಗಿ ಕೇಂದ್ರ ಸರ್ಕಾರ ರಸ್ತೆ ಅಭಿವೃದ್ಧಿ ಕಾರ್ಯಕ್ಕೆ 1 ಕೋಟಿ ಖರ್ಚು ಮಾಡಿದ್ದರೆ ದೊಡ್ಡದು. ಆದರೆ ಸೋನಿಯಾ ಗಾಂಧಿ ಅವರು ಎಂದಿಗೂ ಸಂಸದರ ನಿಧಿಯನ್ನು ದುರ್ಬಳಕೆ ಮಾಡಿಕೊಂಡಿಲ್ಲ. 

ಅವರು ಎಂದಿಗೂ ಓಲೈಕೆ ರಾಜಕಾರಣ ಮಾಡಿಲ್ಲ. ಇನ್ನೊಂದೆಡೆ ಬಿಜೆಪಿ ತನ್ನ ಅಧಿಕಾರವಧಿಯಲ್ಲಿ ಶ್ರೀಮಂತರ 16 ಲಕ್ಷ ಕೋಟಿ ರು. ಸಾಲವನ್ನು ಮನ್ನಾ ಮಾಡಿಲ್ಲವೇ ಎಂದು ಖರ್ಗೆ ಪ್ರಶ್ನಿಸಿದರು.

PREV
Catch up on the latest political news from Karnataka and India (ರಾಜಕೀಯ ಸುದ್ದಿ) — election results, government decisions, party updates, and in-depth political analysis on Kannada Prabha.

Recommended Stories

ಯಾವ ದೇವ್ರಿಗೆ ಪೂಜೆ ಮಾಡಿಸಿದ್ದೀರಿ? : ಮಧುಗೆ ರವಿ!
ಉತ್ತರ ಕರ್ನಾಟಕಕ್ಕೆ ₹15,000 ಕೋಟಿ : ಅಜಯ್‌