ನಟಿ ಹಾಗೂ ತಮಿಳುನಾಡಿನಲ್ಲಿ ಬಿಜೆಪಿಯ ತಾರಾ ಪ್ರಚಾರಕಿಯಾಗಿರುವ ಖುಷ್ಬೂ ಸುಂದರ್ ತಮಗೆ ಅನಾರೋಗ್ಯವುಂಟಾದ ಹಿನ್ನೆಲೆಯಲ್ಲಿ ಚುನಾವಣಾ ಪ್ರಚಾರಕ್ಕೆ ಗೈರಾಗುವುದಾಗಿ ತಿಳಿಸಿದ್ದಾರೆ.
ಚೆನ್ನೈ: ನಟಿ ಹಾಗೂ ತಮಿಳುನಾಡಿನಲ್ಲಿ ಬಿಜೆಪಿಯ ತಾರಾ ಪ್ರಚಾರಕಿಯಾಗಿರುವ ಖುಷ್ಬೂ ಸುಂದರ್ ತಮಗೆ ಅನಾರೋಗ್ಯವುಂಟಾದ ಹಿನ್ನೆಲೆಯಲ್ಲಿ ಚುನಾವಣಾ ಪ್ರಚಾರಕ್ಕೆ ಗೈರಾಗುವುದಾಗಿ ತಿಳಿಸಿದ್ದಾರೆ.
ಈ ಕುರಿತು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ ನಡ್ಡಾಗೆ ಪತ್ರ ಬರೆದಿದ್ದು, ‘ನನಗೆ 2019ರಲ್ಲಿ ಮೂಳೆ ಮುರಿದಿದ್ದು, ಕಳೆದ ಐದು ವರ್ಷಗಳಿಂದಲೂ ಆ ಕುರಿತು ಮುನ್ನೆಚ್ಚರಿಕೆ ವಹಿಸುತ್ತಿದ್ದೇನೆ. ಅದರೆ ಚುನಾವಣಾ ಪ್ರಚಾರದಲ್ಲಿ ಹೆಚ್ಚು ಪ್ರಯಾಣ, ಕುಳಿತಿರುವಿಕೆ ಅತ್ಯಗತ್ಯ ಆಗಿರುವುದರಿಂದ ಮತ್ತೆ ನನಗೆ ಮೂಳೆ ಮುರಿತ ಬಾಧಿಸಲಾರಂಭಿಸಿದೆ. ಈ ಹಿನ್ನೆಲೆಯಲ್ಲಿ ಚುನಾವಣಾ ಪ್ರಚಾರಕ್ಕೆ ಅಲ್ಪ ವಿರಾಮ ಘೋಷಿಸುತ್ತಿದ್ದೇನೆ’ ಎಂದು ವಿನಂತಿಸಿದ್ದಾರೆ.
ಖುಷ್ಬೂ ಕೇವಲ ಬಾಲಿವುಡ್ ಅಲ್ಲದೆ ಕನ್ನಡ, ತಮಿಳು ಮುಂತಾದ ಭಾಷೆಗಳಲ್ಲೂ ನಟಿಸಿ ಪ್ರೇಕ್ಷಕರಿಗೆ ಚಿರಪರಿಚಿತರಾಗಿದ್ದಾರೆ.
Catch up on the latest political news from Karnataka and India (ರಾಜಕೀಯ ಸುದ್ದಿ) — election results, government decisions, party updates, and in-depth political analysis on Kannada Prabha.