ಕಾರ್ಮಿಕರ ಹಿತರಕ್ಷಣೆಗೆ ಕೈ ಬೆಂಬಲಿಸಿ

KannadaprabhaNewsNetwork |  
Published : Apr 22, 2024, 02:02 AM ISTUpdated : Apr 22, 2024, 04:31 AM IST
೨೧ಕೆಎಲ್‌ಆರ್-೫ಕೋಲಾರದ ಜಿಲ್ಲಾ ಕಾಂಗ್ರೆಸ್ ಕಛೇರಿಯಲ್ಲಿ ಕಾರ್ಮಿಕರ ಸಮಾವೇಶದಲ್ಲಿ ಕರ್ನಾಟಕ ರಾಜ್ಯ ಇಂಟಕ್ ಅಧ್ಯಕ್ಷ ಲಕ್ಷ್ಮೀವೆಂಕಟೇಶ್ ಮಾತನಾಡಿದರು. | Kannada Prabha

ಸಾರಾಂಶ

ಕರ್ನಾಟಕ ಕಟ್ಟಡ ಕಾರ್ಮಿಕರ ಕಲ್ಯಾಣ ನಿಧಿಯಲ್ಲಿ ಸಾವಿರಾರು ಕೋಟಿ ಹಣ ಸಂಗ್ರಹವಾಗಿದೆ. ಆದರೆ ಕಾರ್ಮಿಕ ಸಚಿವಾಲಯ ಬೇಕಾಬಿಟ್ಟಿ ಕಾರ್ಯಕ್ರಮಗಳನ್ನು ಮಾಡಿ ಈ ಹಣವನ್ನು ದುರ್ಬಳಕೆ ಮಾಡಿಕೊಂಡಿದೆ

 ಕೋಲಾರ:  ಕಾಂಗ್ರೆಸ್ ದೀನ ದಲಿತರ, ದುರ್ಬಲ ವರ್ಗದವರ, ಅಲ್ಪಸಂಖ್ಯಾತರ, ಕಾರ್ಮಿಕರು ಸೇರಿದಂತೆ ಸಾಮಾಜಿಕ ನ್ಯಾಯದಿಂದ ವಂಚಿತರಾದವರ ಏಳಿಗೆಗಾಗಿ ದುಡಿಯುತ್ತಾ ಇದ್ದು ವಿಶೇಷವಾಗಿ ಕಾರ್ಮಿಕ ಹಿತದೃಷ್ಟಿಯಿಂದ ಇಂಟಕ್ ಸಂಸ್ಥೆಯು ದುಡಿಯುತ್ತಿದೆ. ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಬೆಂಬಲಿಸುವಂತೆ ಕರ್ನಾಟಕ ರಾಜ್ಯ ಇಂಟಕ್ ಅಧ್ಯಕ್ಷ ಲಕ್ಷ್ಮೀವೆಂಕಟೇಶ್ ತಿಳಿಸಿದರು.ನಗರದ ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಕಾರ್ಮಿಕರ ಸಮಾವೇಶದಲ್ಲಿ ಮಾತನಾಡಿ, ಕಟ್ಟಡ ನಿರ್ಮಾಣದಲ್ಲಿ ತೊಡಗಿರುವವರು ದಲಿತ, ಹಿಂದುಳಿದ, ಅಲ್ಪಸಂಖ್ಯಾತ ಸಮುದಾಯದವರೇ ಹೆಚ್ಚು. ಹಿಂದಿನ ರಾಜ್ಯದ ಬಿಜೆಪಿ ಸರ್ಕಾರವು ಕಟ್ಟಡ ಕಾರ್ಮಿಕರ ವಿವಿಧ ಕಿಟ್‌ಗಳ ಹೆಸರಿನಲ್ಲಿ ಬಹುಕೋಟಿ ಹಗರಣವನ್ನು ನಡೆಸಿತ್ತು ಎಂದರು.

ಕಲ್ಯಾಣ ನಿಧಿ ದುರುಪಯೋಗ

ಕರ್ನಾಟಕ ಕಟ್ಟಡ ಕಾರ್ಮಿಕರ ಕಲ್ಯಾಣ ನಿಧಿಯಲ್ಲಿ ಸಾವಿರಾರು ಕೋಟಿ ಹಣ ಸಂಗ್ರಹವಾಗಿದೆ. ಕಾನೂನು ಪ್ರಕಾರ ಆ ಹಣವನ್ನು ಕಾರ್ಮಿಕರ ಕಲ್ಯಾಣಕ್ಕೆ ಸಂಬಂಧಿಸಿದ ಕಾರ್ಯಕ್ರಮಗಳನ್ನು ಹೊರತುಪಡಿಸಿ ಇತರೆ ಯಾವುದೇ ಉದ್ದೇಶಗಳಿಗೆ ಬಳಸುವಂತಿಲ್ಲ. ಆದರೆ ಕಾರ್ಮಿಕ ಸಚಿವಾಲಯ ಬೇಕಾಬಿಟ್ಟಿ ಕಾರ್ಯಕ್ರಮಗಳನ್ನು ಮಾಡಿ ಹಣವನ್ನು ನೇರವಾಗಿ ಕಾರ್ಮಿಕರ ಖಾತೆಗೆ ಹೋಗದೇ ಹಣವನ್ನು ದುರ್ಬಳಕೆ ಮಾಡಿಕೊಂಡಿದ್ದಾರೆ ಅವರಿಗೆ ಬುದ್ದಿ ಕಲಿಸುವ ಸಂದರ್ಭ ಬಂದಿದೆ ಎಂದರು.

ಇಂಟಕ್ ರಾಜ್ಯ ಕಾರ್ಯಾಧ್ಯಕ್ಷ ಶ್ಯಾಮಣ್ಣರೆಡ್ಡಿ ಮಾತನಾಡಿ, ಬಿಜೆಪಿ ಸರಕಾರಗಳು ಬಡವರ ಕಾರ್ಮಿಕರ ಪರವಾಗಿ ನಿಲ್ಲದೇ ಬಂಡವಾಳಶಾಹಿಗಳ ಭೂಮಾಲೀಕರ ಪರವಾದ ನೀತಿಗಳನ್ನು ತಂದಿದ್ದಾರೆ ಕಾರ್ಮಿಕರ ಹಕ್ಕುಗಳನ್ನು ನಾಶ ಮಾಡಲು ಹೊರಟಿದ್ದಾರೆ ಈ ಚುನಾವಣೆ ಕಾರ್ಮಿಕರ ಅಳಿವು ಉಳಿವಿನ ಪ್ರಶ್ನೆಯಾಗಿದೆ ಎಚ್ಚತ್ತುಕೊಂಡು ಕೋಲಾರ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಕೆ.ವಿ ಗೌತಮ್ ಅವರಿಗೆ ಮತ ಹಾಕುವಂತೆ ಮನವಿ ಮಾಡಿದರುಇಂಟಕ್ ಜಿಲ್ಲಾ ಅಧ್ಯಕ್ಷ ಹೊನ್ನೇನಹಳ್ಳಿ ಯಲ್ಲಪ್ಪ, ಕರ್ನಾಟಕ ರಾಜ್ಯ ಲೇಬರ್ ಸೆಲ್ ಅಧ್ಯಕ್ಷ ಪುಟ್ಟಸ್ವಾಮಿಗೌಡ, ಎಐಟಿಯುಸಿಸಿ ರಾಜ್ಯ ಪ್ರಧಾನ ಕಾರ್ಯದರ್ಶಿ ಪ್ರಭಾಕರ್, ಜಿಲ್ಲಾ ಕಾಂಗ್ರೆಸ್ ಕಾರ್ಯಾಧ್ಯಕ್ಷ ಊರಬಾಗಿಲು ಶ್ರೀನಿವಾಸ್, ನಗರ ಬ್ಲಾಕ್ ಅಧ್ಯಕ್ಷ ಪ್ರಸಾದ್ ಬಾಬು, ಎಸ್ಸಿ ಘಟಕದ ಜಿಲ್ಲಾ ಅಧ್ಯಕ್ಷ ಕೆ.ಜಯದೇವ್, ಶಿವಣ್ಣ, ಲಕ್ಷ್ಮಿದೇವಿ, ಗೀತಾ ಇದ್ದರು.

PREV

Recommended Stories

ರಾಹುಲ್‌ ವಿರುದ್ಧ 5ಕ್ಕೆ ಬಿಜೆಪಿ ಧರಣಿ : ಬಿವೈವಿ
ಸಂಘರ್ಷ ಬಿಟ್ಟು ಒಳಮೀಸಲು ಜಾರಿ : ಪರಂ ನೇತೃತ್ವದ ಸಭೆ