ಇನ್ನೂ 3.5 ವರ್ಷ ಸಿದ್ದರಾಮಯ್ಯ ಸಿಎಂ ಆಗಿರಲಿ - ಕೈ ಬಲಪಡಿಸುವ ಕೆಲಸ ಮಾಡಬೇಕಿದೆ: ಸಚಿವ ಬೈರತಿ

ಸಾರಾಂಶ

ಮುಖ್ಯಮಂತ್ರಿಯಾಗಿ 2ನೇ ಅವಧಿಯಲ್ಲೂ ಸಿದ್ದರಾಮಯ್ಯ ಉತ್ತಮವಾಗಿ ಕೆಲಸ ಮಾಡಿಕೊಂಡು ಬರುತ್ತಿದ್ದಾರೆ. ಇನ್ನೂ ಮೂರೂವರೆ ವರ್ಷ ಅವರೇ ಸಿಎಂ ಆಗಿ ಮುಂದುವರಿಯಲಿ ಎಂದು ಸಚಿವ ಬೈರತಿ ಸುರೇಶ್‌ ಹೇಳಿದರು.

ದಾವಣಗೆರೆ : ಮುಖ್ಯಮಂತ್ರಿಯಾಗಿ 2ನೇ ಅವಧಿಯಲ್ಲೂ ಸಿದ್ದರಾಮಯ್ಯ ಉತ್ತಮವಾಗಿ ಕೆಲಸ ಮಾಡಿಕೊಂಡು ಬರುತ್ತಿದ್ದಾರೆ. ಇನ್ನೂ ಮೂರೂವರೆ ವರ್ಷ ಅವರೇ ಸಿಎಂ ಆಗಿ ಮುಂದುವರಿಯಲಿ ಎಂದು ಸಚಿವ ಬೈರತಿ ಸುರೇಶ್‌ ಹೇಳಿದರು.

ನಗರದಲ್ಲಿ ಭಾನುವಾರ ನಡೆದ ಜಿಲ್ಲಾಮಟ್ಟದ 537ನೇ ದಾಸ ಶ್ರೇಷ್ಟ ಕನಕ ದಾಸರ ಜಯಂತ್ಯೋತ್ಸವ ಹಾಗೂ ಕನಕರ ಪುತ್ಥಳಿ ಲೋಕಾರ್ಪಣೆ ಸಮಾರಂಭದಲ್ಲಿ ಅವರು ಮಾತನಾಡಿದರು.

ಮುಖ್ಯಮಂತ್ರಿಯಾಗಿ 2ನೇ ಅವಧಿಯಲ್ಲೂ ಸಿದ್ದರಾಮಯ್ಯ ಉತ್ತಮವಾಗಿ ಕೆಲಸ ಮಾಡಿಕೊಂಡು ಬರುತ್ತಿದ್ದಾರೆ. ಇನ್ನೂ ಮೂರೂವರೆ ವರ್ಷ ಕಾಲ ನಮ್ಮದೇ ಸರ್ಕಾರ ಇರುತ್ತದೆ. ಸಿದ್ದರಾಮಯ್ಯನವರನ್ನೇ ಅಷ್ಟೂ ಕಾಲ ಸಿಎಂ ಆಗಿ ಮುಂದುವರಿಸಬೇಕು. ನಾವೆಲ್ಲರೂ ಸಿದ್ದರಾಮಯ್ಯನವರ ಕೈಗಳನ್ನು ಬಲಪಡಿಸುವ ಕೆಲಸ ಮಾಡೋಣ. ಅಹಿಂದ ಸಮುದಾಯಕ್ಕೆ ಎಲ್ಲರೂ ಬೆಂಬಲಿಸಬೇಕು ಎಂದು ಮನವಿ ಮಾಡಿದರು.

Share this article