ಪಕ್ಷದ ಹಿತದೃಷ್ಟಿಯಿಂದ ಸಿದ್ದರಾಮಯ್ಯ ರಾಜೀನಾಮೆ‌ ನೀಡಲಿ : ಕಾಂಗ್ರೆಸ್ ಹಿರಿಯ ನಾಯಕ ಕೋಳಿವಾಡ

ಸಾರಾಂಶ

ಬೇರೆ ಬೇರೆ ರಾಜ್ಯಗಳಲ್ಲಿ ಚುನಾವಣೆ ಇದೆ. ಬಿಜೆಪಿಯವರು ಸಿದ್ದರಾಮಯ್ಯ ವಿಚಾರದಲ್ಲಿ ಪಕ್ಷವನ್ನು ಮುಜುಗರಕ್ಕೆ ಈಡು ಮಾಡ್ತಿದ್ದಾರೆ. ನಾನು 50 ವರ್ಷದ ರಾಜಕೀಯ ಜೀವನದಲ್ಲಿ ಅನೇಕ ಸಿಎಂಗಳನ್ನು ನೋಡಿದ್ದೇನೆ.

ಬೆಂಗಳೂರು : ಬೇರೆ ಬೇರೆ ರಾಜ್ಯಗಳಲ್ಲಿ ಚುನಾವಣೆ ಇದೆ. ಬಿಜೆಪಿಯವರು ಸಿದ್ದರಾಮಯ್ಯ ವಿಚಾರದಲ್ಲಿ ಪಕ್ಷವನ್ನು ಮುಜುಗರಕ್ಕೆ ಈಡು ಮಾಡ್ತಿದ್ದಾರೆ. ನಾನು 50 ವರ್ಷದ ರಾಜಕೀಯ ಜೀವನದಲ್ಲಿ ಅನೇಕ ಸಿಎಂಗಳನ್ನು ನೋಡಿದ್ದೇನೆ. 

ವಿರೋಧ ಪಕ್ಷದವರ ಕುತಂತ್ರದಿಂದ ಸುಳ್ಳು ಆಪಾದನೆ ಸಿದ್ದರಾಮಯ್ಯ ಮೇಲೆ ಬಂದಿದೆ. ಸಿದ್ದರಾಮಯ್ಯ ಕಪ್ಪು ಚುಕ್ಕೆ ಇಲ್ಲದಂತೆ ಕೆಲಸ ಮಾಡಿದ ನಂಬರ್ 1 ಸ್ಥಾನದಲ್ಲಿದ್ದಾರೆ ಎಂದು ಕಾಂಗ್ರೆಸ್‌ ಪಕ್ಷದ ಹಿರಿಯಾ ನಾಯಕ ಹಾಗೂ ಮಾಜಿ ಸ್ಪೀಕರ್‌ ಕೆ.ಬಿ. ಕೋಳಿವಾಡ ತಿಳಿಸಿದ್ದಾರೆ.

ಇಂದು(ಗುರುವಾರ) ನಗರದಲ್ಲಿ ಏಷ್ಯಾನೆಟ್ ಸುವರ್ಣ ನ್ಯೂಸ್ ಜತೆ ಮಾತನಾಡಿದ ಕೆ.ಬಿ. ಕೋಳಿವಾಡ ಅವರು, ಕಾಂಗ್ರೆಸ್‌ ಪಕ್ಷವನ್ನು ಮುಜುಗರಕ್ಕೆ ಈಡು ಮಾಡುವ ಕುತಂತ್ರವನ್ನ ಪ್ರಧಾನಿ ಮೋದಿ ಮಾಡ್ತಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಸಿದ್ದರಾಮಯ್ಯ ರಾಜೀನಾಮೆ ಕೊಟ್ಟೇ ಕೊಡ್ತಾರೆ: ಕೇಂದ್ರ ಸಚಿವ ಸೋಮಣ್ಣ

ಎಷ್ಟೇ ಕಳಂಕ ರಹಿತರಾದರೂ ಪಕ್ಷದ ದೃಷ್ಟಿಯಿಂದ ಸಿದ್ದರಾಮಯ್ಯ ರಾಜೀನಾಮೆ ನೀಡಲಿ. ತನಿಖೆಯಲ್ಲಿ ನಿಷ್ಕಳಂಕರಾಗಿ ಹೊರ ಬಂದ ಬಳಿಕ ಸಿದ್ದರಾಮಯ್ಯ ಮತ್ತೆ ಸಿಎಂ ಆಗಲಿ. 136 ಶಾಸಕರು ಸಿದ್ದರಾಮಯ್ಯ ಜೊತೆಗೆ ಇದ್ದಾರೆ. ಪಕ್ಷದ ಹಿತದೃಷ್ಟಿಯಿಂದ ಸಿದ್ದರಾಮಯ್ಯ ರಾಜೀನಾಮೆ‌ ಕೊಟ್ಟು ನಿಷ್ಕಳಂಕರಾಗಲಿ ಎಂದು ಹೇಳಿದ್ದಾರೆ.

Share this article