ಮೋದಿಗೆ ಮಕ್ಕಳಿಲ್ಲ ಅಂದ್ರೆ ನಾವೇನು ಮಾಡೋಣ: ಖರ್ಗೆ!

ಸಾರಾಂಶ

ನಿಜಾಂ ಸರ್ಕಾರದ ಆಡಳಿತದಲ್ಲೇ ಹೆಣ್ಣುಮಕ್ಕಳ ಮಾಂಗಲ್ಯಕ್ಕೆ ಕೈ ಹಾಕುವ ಧೈರ್ಯ ಇರಲಿಲ್ಲ. ಈಗ ದೇಶದಲ್ಲಿ ಸಂವಿಧಾನ ಹಾಗೂ ಪ್ರಜಾಪ್ರಭುತ್ವವಿದ್ದು, ಮಹಿಳೆಯರ ಮಂಗಳಸೂತ್ರಕ್ಕಾಗಿ ಕಾಂಗ್ರೆಸ್ ಪಕ್ಷ ತನ್ನ ಪ್ರಾಣ ಕೊಡಲೂ ಸಿದ್ಧವಿದೆ ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹೇಳಿದರು.

ಯಾದಗಿರಿ : ನಿಜಾಂ ಸರ್ಕಾರದ ಆಡಳಿತದಲ್ಲೇ ಹೆಣ್ಣುಮಕ್ಕಳ ಮಾಂಗಲ್ಯಕ್ಕೆ ಕೈ ಹಾಕುವ ಧೈರ್ಯ ಇರಲಿಲ್ಲ. ಈಗ ದೇಶದಲ್ಲಿ ಸಂವಿಧಾನ ಹಾಗೂ ಪ್ರಜಾಪ್ರಭುತ್ವವಿದ್ದು, ಮಹಿಳೆಯರ ಮಂಗಳಸೂತ್ರಕ್ಕಾಗಿ ಕಾಂಗ್ರೆಸ್ ಪಕ್ಷ ತನ್ನ ಪ್ರಾಣ ಕೊಡಲೂ ಸಿದ್ಧವಿದೆ ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹೇಳಿದರು.

ಕಲಬುರಗಿ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ರಾಧಾಕೃಷ್ಣ ದೊಡ್ಡಮನಿ ಪರ ಗುರುಮಠಕಲ್ ನಲ್ಲಿ ಅವರು ಮತಯಾಚನೆ ನಡೆಸಿದರು. ಮಂಗಳಸೂತ್ರ ವಿಚಾರವಾಗಿ ಮೋದಿ ಹೇಳಿಕೆಗೆ ತೀವ್ರ ವಾಗ್ದಾಳಿ ನಡೆಸಿದ ಖರ್ಗೆ, ಯಾರಿಗೆ ಮಕ್ಕಳು ಜಾಸ್ತಿ ಇದ್ದಾರೆ ಅವರಿಗೆ ಸಂಪತ್ತು ಜಾಸ್ತಿ ಹೋಗುತ್ತೆ ಎಂದು ಮೋದಿ ಹೇಳಿದ್ದಾರೆ. ಅವರಿಗೆ ಮಕ್ಕಳಿಲ್ಲ ಎಂದರೆ ನಾವೇನು ಮಾಡೋಣ ಎಂದು ಪ್ರಶ್ನಿಸಿದರು.

ಕಳೆದ 10 ವರ್ಷದ ಬಿಜೆಪಿ ಸರಕಾರದ ಆಡಳಿತದಿಂದ ದೇಶದಲ್ಲಿರುವ 22 ಜನ ಉದ್ಯಮಿಗಳು ಮಾತ್ರ ಆರ್ಥಿಕವಾಗಿ ಉದ್ಧಾರವಾಗಿದ್ದಾರೆ. ಆದರೆ, ಕಾರ್ಮಿಕರು, ರೈತರು, ಸಾಮಾನ್ಯ ಜನರ ಜೀವನಮಟ್ಟ ಸುಧಾರಿಸಲಿಲ್ಲ ಎಂದು ಅವರು ಅಕ್ರೋಶ ವ್ಯಕ್ತ ಪಡಿಸಿದರು.

ಮೋದಿಯವರು ಕಾಂಗ್ರೆಸ್ ಪಕ್ಷ ಹಾಗೂ ನಾಯಕರನ್ನು ಬೈಯ್ಯುವುದನ್ನೇ ಕೆಲಸ ಮಾಡಿಕೊಂಡಿದ್ದಾರೆ. ಅವರು ಬೈದಷ್ಟೂ ನಮಗೆ ಒಳ್ಳೆಯದಾಗುತ್ತದೆ. ಇಂದಿರಾ ಗಾಂಧಿ, ರಾಜೀವ್ ಗಾಂಧಿ, ಸೋನಿಯಾ ಗಾಂಧಿ, ರಾಹುಲ್ ಗಾಂಧಿ, ಪ್ರಿಯಾಂಕ್ ಗಾಂಧಿ ಹಾಗೂ ನನಗೆ ಬೈಯುತ್ತಲೇ ಇರುತ್ತಾರೆ. ನಮಗೆ ಬೈಯುವ ಬದಲು ನಮ್ಮ ರಾಜ್ಯಕ್ಕೆ ಏನು ಮಾಡಿದ್ದಾರೆ ಎಂಬುದನ್ನು ಅವರು ವಿವರಿಸಲಿ ಎಂದು ಖರ್ಗೆ ಆಗ್ರಹಿಸಿದರು.

Share this article