16745 ಕೋಟಿ ರು. ತಲುಪಿದ ಮೇಕೆದಾಟು ಯೋಜನಾ ವೆಚ್ಚ

Published : Sep 08, 2026, 07:52 AM IST
Mekedatu project cost

ಸಾರಾಂಶ

ಮೇಕೆದಾಟು ಯೋಜನೆಗೆ ಕೇಂದ್ರದಿಂದ ಅನುಮತಿ ದೊರೆಯುವುದು ವಿಳಂಬವಾಗುತ್ತಿರುವ ಹಿನ್ನೆಲೆಯಲ್ಲಿ ಯೋಜನಾ ವೆಚ್ಚ ಶೇ.86ರಷ್ಟು ಹೆಚ್ಚಳವಾಗಿದೆ. ಈ ಹಿಂದೆ ಸಲ್ಲಿಸಿದ್ದ ಡಿಪಿಆರ್‌ನಲ್ಲಿ 9 ಸಾವಿರ ಕೋಟಿ ರು. ಯೋಜನಾ ವೆಚ್ಚ ನಿಗದಿ ಮಾಡಲಾಗಿತ್ತು. ಇದೀಗ ಸಲ್ಲಿಸಲಾಗಿರುವ ಪರಿಷ್ಕೃತ ಡಿಪಿಆರ್‌ನಲ್ಲಿ ಯೋಜನಾ ವೆಚ್ಚ 16,745 ಕೋಟಿ ರು.ಗೆ ಹೆಚ್ಚಳವಾಗಿದೆ.

ಬೆಂಗಳೂರು : ಮೇಕೆದಾಟು ಯೋಜನೆಗೆ ಕೇಂದ್ರದಿಂದ ಅನುಮತಿ ದೊರೆಯುವುದು ವಿಳಂಬವಾಗುತ್ತಿರುವ ಹಿನ್ನೆಲೆಯಲ್ಲಿ ಯೋಜನಾ ವೆಚ್ಚ ಶೇ.86ರಷ್ಟು ಹೆಚ್ಚಳವಾಗಿದೆ. ಈ ಹಿಂದೆ ಸಲ್ಲಿಸಿದ್ದ ಡಿಪಿಆರ್‌ನಲ್ಲಿ 9 ಸಾವಿರ ಕೋಟಿ ರು. ಯೋಜನಾ ವೆಚ್ಚ ನಿಗದಿ ಮಾಡಲಾಗಿತ್ತು. ಇದೀಗ ಸಲ್ಲಿಸಲಾಗಿರುವ ಪರಿಷ್ಕೃತ ಡಿಪಿಆರ್‌ನಲ್ಲಿ ಯೋಜನಾ ವೆಚ್ಚ 16,745 ಕೋಟಿ ರು.ಗೆ ಹೆಚ್ಚಳವಾಗಿದೆ.

ಬೆಂಗಳೂರಿಗೆ ಕುಡಿಯುವ ನೀರು ಪೂರೈಕೆ ಹಾಗೂ ವಿದ್ಯುತ್‌ ಉತ್ಪಾದನೆ ದೃಷ್ಟಿಯಿಂದ ಮೇಕೆದಾಟು ಯೋಜನೆ ಜಾರಿಗೆ ಸರ್ಕಾರ ಮುಂದಾಗಿದೆ. ಅದಕ್ಕಾಗಿ ಈಗಾಗಲೇ ಎರಡು ಬಾರಿ ಡಿಪಿಆರ್‌ ಸಲ್ಲಿಕೆಯಾಗಿದೆ. ಈ ಹಿಂದೆ ಡಿಪಿಆರ್‌ ಸಲ್ಲಿಸಿದಾಗ ಕೇಂದ್ರ ಸರ್ಕಾರ ಕೆಲ ಸ್ಪಷ್ಟನೆಗಳೊಂದಿಗೆ ಪರಿಷ್ಕೃತ ಡಿಪಿಆರ್‌ ಸಲ್ಲಿಸುವಂತೆ ಸೂಚಿಸಿತ್ತು.

ಅದರಂತೆ ರಾಜ್ಯ ಸರ್ಕಾರ ಕಳೆದ ತಿಂಗಳು ಪರಿಷ್ಕೃತ ಡಿಪಿಆರ್‌ ಸಲ್ಲಿಸಿದೆ. ಡಿಪಿಆರ್‌ನಲ್ಲಿ ಬದಲಾವಣೆ ಹಾಗೂ ಕೇಂದ್ರದಿಂದ ಅನುಮತಿ ದೊರೆಯುವರಲ್ಲಾಗುತ್ತಿರುವ ವಿಳಂಬದಿಂದಾಗಿ ಯೋಜನಾ ವೆಚ್ಚದಲ್ಲಿ ಭಾರೀ ಪ್ರಮಾಣದಲ್ಲಿ ಏರಿಕೆಯಾಗಿದೆ. ಈ ಮೊದಲು ಸಲ್ಲಿಕೆಯಾಗಿದ್ದ ಯೋಜನೆಯ ಡಿಪಿಆರ್‌ನಲ್ಲಿ 9 ಸಾವಿರ ಕೋಟಿ ರು. ಯೋಜನಾ ವೆಚ್ಚ ನಿಗದಿ ಮಾಡಲಾಗಿತ್ತು. ಇದೀಗ ಸಲ್ಲಿಸಲಾಗಿರುವ ಪರಿಷ್ಕೃತ ಡಿಪಿಆರ್‌ನಲ್ಲಿ ಯೋಜನಾ ವೆಚ್ಚ 16,745 ಕೋಟಿ ರು.ಗೆ ಹೆಚ್ಚಳವಾಗಿದೆ. ಇದು ರಾಜ್ಯದ ಆರ್ಥಿಕ ಹೊರೆಯನ್ನು ಮತ್ತಷ್ಟು ಹೆಚ್ಚಿಸುವಂತಾಗಿದೆ. ಹೀಗಾಗಿ ಮೇಕೆದಾಟು ಯೋಜನೆ ಜಾರಿಗಾಗಿ ಕೇಂದ್ರ ಸರ್ಕಾರದಿಂದ ಆರ್ಥಿಕ ನೆರವು ಪಡೆಯಲು ಯೋಜಿಸಲಾಗುತ್ತಿದೆ. ಅದರಂತೆ ಕಳೆದ ವಾರ ಕೇಂದ್ರ ಸಚಿವರನ್ನು ಭೇಟಿಯಾಗಿದ್ದ ಜಲಸಂಪನ್ಮೂಲ ಸಚಿವ ಚಲುವರಾಯಸ್ವಾಮಿ ಅವರು ಯೋಜನೆಯ ವಿವರಣೆ ನೀಡಿದ್ದಲ್ಲದೆ, ಆರ್ಥಿಕ ನೆರವು ನೀಡುವಂತೆಯೂ ಕೋರಿದ್ದಾರೆ.

ಯೋಜನೆ ವಿವರ:

ಮೇಕೆದಾಟು ಯೋಜನೆಯಿಂದ 67 ಟಿಎಂಸಿ ನೀರು ಸಂಗ್ರಹಿಸಿ ಅದರಲ್ಲಿ 4.67 ಟಿಎಂಸಿ ನೀರು ಬೆಂಗಳೂರು ನಗರಕ್ಕೆ ಪೂರೈಸಲಾಗುತ್ತದೆ. ಅದರ ಜತೆಗೆ 400 ಮೆಗಾವ್ಯಾಟ್‌ ವಿದ್ಯುತ್‌ ಉತ್ಪಾದನೆ ಮಾಡುವ ಯೋಜನೆ ಇದೆ.

ನಾನಾ ಕಾರಣವೊಡ್ಡಿ ಮೇಕೆದಾಟು ಯೋಜನೆಗೆ ಅನುಮತಿ ನೀಡುವಲ್ಲಿ ಕೇಂದ್ರ ಸರ್ಕಾರದ ವಿಳಂಬ

ಹೀಗಾಗಿ 9000 ಕೋಟಿ ರು. ಇದ್ದ ಯೋಜನಾ ವೆಚ್ಚ ಇದೀಗ ಭರ್ಜರಿ 16745 ಕೋಟಿ ರು.ಗೆ ಏರಿಕೆ

ಇತ್ತೀಚೆಗೆ ಕೇಂದ್ರ ಸರ್ಕಾರಕ್ಕೆ ಸಲ್ಲಿಸಿದ ಪರಿಷ್ಕೃತ ಡಿಪಿಆರ್‌ನಲ್ಲಿ ಈ ಬಗ್ಗೆ ರಾಜ್ಯ ಸರ್ಕಾರ ಪ್ರಸ್ತಾಪ

ಆರ್ಥಿಕ ಹೊರೆ ಹೆಚ್ಚಿದ ಹಿನ್ನೆಲೆಯಲ್ಲಿ ಹೆಚ್ಚಿನ ನೆರವು ನೀಡುವಂತೆ ಕೇಂದ್ರ ಸರ್ಕಾರಕ್ಕೆ ರಾಜ್ಯದ ಮೊರೆ

ಮೇಕೆದಾಟು ಅಣೆಕಟ್ಟು ಮೂಲಕ ಬೆಂಗಳೂರಿಗೆ ಕುಡಿಯುವ ನೀರು, ವಿದ್ಯುತ್‌ ಉತ್ಪಾದನೆ ಗುರಿ ಇದೆ

PREV
Catch up on the latest political news from Karnataka and India (ರಾಜಕೀಯ ಸುದ್ದಿ) — election results, government decisions, party updates, and in-depth political analysis on Kannada Prabha.
Read more Articles on

Recommended Stories

ವಾಲ್ಮೀಕಿ ಹಗರಣ: 5 ತಾಸು ನಾಗೇಂದ್ರಗೆ ಇಡಿ ವಿಚಾರಣೆ
ಹಿಂದುಳಿದವರ ಸಮಾವೇಶ ಅಹಿಂದದ ಒಡಕಿನ ಸುಳಿವು?