ದಾಸರಹಳ್ಳಿ ವಿಧಾನಸಭಾ ಕ್ಷೇತ್ರ : ಬಿಜೆಪಿ ಸದಸ್ಯತ್ವ ಅಭಿಯಾನಕ್ಕೆ ಸಚಿವೆ ಶೋಭಾ ಕರಂದ್ಲಾಜೆ ಚಾಲನೆ

KannadaprabhaNewsNetwork |  
Published : Oct 07, 2024, 01:44 AM ISTUpdated : Oct 07, 2024, 04:43 AM IST
ದಾಸರಹಳ್ಳಿಯ ಶೆಟ್ಟಿಹಳ್ಳಿಯಲ್ಲಿ ಬಿಜೆಪಿ ಸದಸ್ಯತ್ವ ಅಭಿಯಾನ ಮಹಾಸಂಪರ್ಕ ಕಾರ್ಯಕ್ರಮಕ್ಕೆ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ, ಶಾಸಕ ಎಸ್‌.ಮುನಿರಾಜು ಚಾಲನೆ ನೀಡಿದರು. ಶೆಟ್ಟಿಹಳ್ಳಿ ಸುರೇಶ್‌, ಮಂಜುನಾಥ, ವಿನೋದ್‌ ಗೌಡ, ಅಬ್ಬಿಗೆರೆ ಮಂಜುನಾಥ್‌ ಗೌಡ, ಕಿರಣ್‌ ಕುಮಾರ್‌, ಶಿಲ್ಪಾ ಸುರೇಶ್‌ ಇದ್ದರು. | Kannada Prabha

ಸಾರಾಂಶ

ದಾಸರಹಳ್ಳಿ ವಿಧಾನಸಭಾ ಕ್ಷೇತ್ರದ ಶೆಟ್ಟಿಹಳ್ಳಿಯಲ್ಲಿ ಶೆಟ್ಟಿಹಳ್ಳಿ ವಾರ್ಡ್ ಆಧ್ಯಕ್ಷ ಶೆಟ್ಟಿಹಳ್ಳಿ ಸುರೇಶ್ ನೇತೃತ್ವದಲ್ಲಿ ಬಿಜೆಪಿ ಸದಸ್ಯತ್ವ ಆಭಿಯಾನ ಮಹಾಸಂಪರ್ಕ ಕಾರ್ಯಕ್ರಮಕ್ಕೆ ಕೇಂದ್ರ ಸಚಿವೆ ಶೋಭ ಕರಂದ್ಲಾಜೆ ಚಾಲನೆ ನೀಡಿದರು.

ಪೀಣ್ಯ ದಾಸರಹಳ್ಳಿ: ಬಿಜೆಪಿಯ ರಾಷ್ಟ್ರ ವ್ಯಾಪ್ತಿ ಸದಸ್ಯತ್ವ ಅಭಿಯಾನಕ್ಕೆ ಈಗಾಗಲೇ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಚಾಲನೆ ನೀಡಿದ್ದಾರೆ. 2047ರ ವೇಳೆಗೆ ಅಭಿವೃದ್ಧಿ ಹೊಂದಿದ ಭಾರತದ ಗುರಿಯನ್ನು ಸಾಧಿಸಲು ಯುವಜನರನ್ನು ಸಂಪರ್ಕಿಸಬೇಕು ಎಂದು ಕೇಂದ್ರ ಸಚಿವೆ ಶೋಭ ಕರಂದ್ಲಾಜೆ ತಿಳಿಸಿದರು.

ದಾಸರಹಳ್ಳಿ ವಿಧಾನಸಭಾ ಕ್ಷೇತ್ರದ ಶೆಟ್ಟಿಹಳ್ಳಿಯಲ್ಲಿ ಶೆಟ್ಟಿಹಳ್ಳಿ ವಾರ್ಡ್ ಆಧ್ಯಕ್ಷ ಶೆಟ್ಟಿಹಳ್ಳಿ ಸುರೇಶ್ ನೇತೃತ್ವದಲ್ಲಿ ಬಿಜೆಪಿ ಸದಸ್ಯತ್ವ ಆಭಿಯಾನ ಮಹಾಸಂಪರ್ಕ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಬಳಿಕ ಮಾತನಾಡಿದರು.

18 ರಿಂದ 25 ವರ್ಷದೊಳಗಿನ ಯುವಕರು 2047ರಲ್ಲಿ ನನ್ನ ಭಾರತದ ಕನಸಿಗೆ ಶಕ್ತಿಯ ದೊಡ್ಡ ಮೂಲವಾಗಿದ್ದಾರೆ. ಆದ್ದರಿಂದ, ಅಭಿವೃದ್ಧಿ ಹೊಂದಿದ ಭಾರತದ ಗುರಿಯನ್ನು ಪೂರೈಸಲು ಅವರನ್ನು ಸಂಪರ್ಕಿಸಬೇಕು. ಅವರು ನೇಷನ್ ಫಸ್ಟ್ ಎಂಬ ಕಲ್ಪನೆಯೊಂದಿಗೆ ಸಂಪರ್ಕ ಹೊಂದಿರಬೇಕು. ಪಕ್ಷಕ್ಕೆ 10 ಕೋಟಿ ಹೊಸ ಸದಸ್ಯರನ್ನು ಸೇರಿಸುವ ಗುರಿಯನ್ನು ಹೊಂದಲಾಗಿದೆ. ದಾಸರಹಳ್ಳಿಯಲ್ಲಿ ಒಂದು ಲಕ್ಷಕ್ಕೂ ಅಧಿಕ ಸದಸ್ಯತ್ವವನ್ನು ಮಾಡುವ ಗುರಿಯನ್ನು ಹೊಂದಿದ್ದೇವೆ ಎಂದು ತಿಳಿಸಿದರು.

ಬಳಿಕ ಮಾತನಾಡಿದ ಶಾಸಕ ಎಸ್.ಮುನಿರಾಜು, ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ದೇಶವನ್ನು ಶಾಂತಿ ಮತ್ತು ಸಮೃದ್ಧಿಯ ಹೊಸ ಎತ್ತರಕ್ಕೆ ಏರಿಸುವ ಬಿಜೆಪಿಯ ಬದ್ಧತೆಯನ್ನು ಎತ್ತಿ ಹಿಡಿದಿದ್ದಾರೆ. ಇಂದು ಬಡ ಜನರು ನಮ್ಮ ನೀತಿಗಳು ಮತ್ತು ನಿರ್ಧಾರಗಳ ಫಲಿತಾಂಶಗಳಲ್ಲಿ ಹೆಚ್ಚಿನ ನಂಬಿಕೆಯನ್ನು ಹೊಂದಿದ್ದಾರೆ ಮತ್ತು ದೇಶವನ್ನು ಅಭಿವೃದ್ಧಿ ಹೊಂದಿದ ದೇಶವನ್ನಾಗಿ ಮಾಡಲು ಅಳವಡಿಸಿಕೊಂಡ ಮಾರ್ಗವನ್ನು ಹೊಂದಿದ್ದಾರೆ ಎಂದು ಹೇಳಿದರು.

ಮಂಡಲ ಬಿಜೆಪಿ ಅಧ್ಯಕ್ಷ ಸೋಮಶೇಖರ್, ಶೆಟ್ಟಿಹಳ್ಳಿ ವಾರ್ಡ್ ಅಧ್ಯಕ್ಷ ಬಿ.ಸುರೇಶ್, ಬಿಜೆಪಿ ಹಿರಿಯ ಮುಖಂಡ ಮಂಜುನಾಥ, ಪ್ರಧಾನ ಕಾರ್ಯದರ್ಶಿ ವಿನೋದ್ ಗೌಡ, ಅಬ್ಬಿಗೆರೆ ಮಂಜುನಾಥ್ ಗೌಡ, ಕಿರಣ್ ಕುಮಾರ್, ಮಹಿಳಾ ಮುಖಂಡರಾದ ಶಿಲ್ಪ ಸುರೇಶ್, ಸುರೇಖಾ, ಭಾಗ್ಯಮ್ಮ, ಗೌರಮ್ಮ ಇದ್ದರು.

PREV

Recommended Stories

ದೇಶದಲ್ಲೇ ನಾನೇ ನಂ.1 ಗೃಹ ಮಂತ್ರಿ: ಡಾ.ಪರಂ
ವರ್ಷಾಂತ್ಯಕ್ಕೆ ಡಿಕೆಶಿ ಸಿಎಂ ಎಂದ ಶಿವಗಂಗಾಗೆ ನೋಟಿಸ್‌