ಶಾಸಕ ಇಕ್ಬಾಲ್ ಹುಸೇನ್ ಹುಟ್ಟುಹಬ್ಬ ಅದ್ಧೂರಿ ಆಚರಣೆ

KannadaprabhaNewsNetwork |  
Published : Apr 13, 2026, 01:15 AM ISTUpdated : Apr 13, 2026, 04:14 AM IST
Congress

ಸಾರಾಂಶ

ಶಾಸಕ ಎಚ್.ಎ.ಇಕ್ಬಾಲ್ ಹುಸೇನ್ ಅವರ ಹುಟ್ಟುಹಬ್ಬವನ್ನು ಪಕ್ಷದ ಮುಖಂಡರು, ಕಾರ್ಯಕರ್ತರು ಹಾಗೂ ಅಭಿಮಾನಿಗಳು ವಿವಿಧ ದೇವಾಲಯಗಳಲ್ಲಿ ವಿಶೇಷ ಪೂಜೆ ಸಲ್ಲಿಸಿ ಹಾಗೂ ಸಾರ್ವಜನಿಕರಿಗೆ ಸಿಹಿ ಹಂಚಿ ಅದ್ಧೂರಿಯಾಗಿ ಆಚರಿಸಿದರು.

  ರಾಮನಗರ :  ಶಾಸಕ ಎಚ್.ಎ.ಇಕ್ಬಾಲ್ ಹುಸೇನ್ ಅವರ ಹುಟ್ಟುಹಬ್ಬವನ್ನು ಪಕ್ಷದ ಮುಖಂಡರು, ಕಾರ್ಯಕರ್ತರು ಹಾಗೂ ಅಭಿಮಾನಿಗಳು ವಿವಿಧ ದೇವಾಲಯಗಳಲ್ಲಿ ವಿಶೇಷ ಪೂಜೆ ಸಲ್ಲಿಸಿ ಹಾಗೂ ಸಾರ್ವಜನಿಕರಿಗೆ ಸಿಹಿ ಹಂಚಿ ಅದ್ಧೂರಿಯಾಗಿ ಆಚರಿಸಿದರು.

ಕ್ಷೇತ್ರದ ಅನೇಕ ಮುಖಂಡರು ಬೆಂಗಳೂರಿನ ನಿವಾಸದಲ್ಲಿ ಇಕ್ಬಾಲ್ ಹುಸೇನ್ ಅವರನ್ನು ಭೇಟಿ ಮಾಡಿ ಹೂಗುಚ್ಛ ನೀಡಿ, ಶಾಲು ಹೊದಿಸಿ ಶುಭಾಶಯ ಕೋರಿದರು. ರಾಮನಗರದ ಮುಖಂಡರು ಏಲಕ್ಕಿ ಹಾರ ಹಾಗೂ ಹಾರೋಹಳ್ಳಿಯ ಮುಖಂಡರು ಜೋಳದ ಹಾರ ಹಾಕಿ ಇಕ್ಬಾಲ್ ಅವರನ್ನು ಅಭಿನಂದಿಸಿದರು.

ಹಾರೋಹಳ್ಳಿಯ ಚಾಮುಂಡೇಶ್ವರಿ ದೇವಾಲಯದಲ್ಲಿ ಶಾಸಕ ಇಕ್ಬಾಲ್ ಹುಸೇನ್ ರವರ ಹುಟ್ಟುಹಬ್ಬದ ಪ್ರಯುಕ್ತ ವಿಶೇಷ ಪೂಜೆ ಸಲ್ಲಿಸಿದರು. ಆನಂತರ ಸಾರ್ವಜನಿಕರಿಗೆ ಸಿಹಿ ಹಂಚಲಾಯಿತು. ಹಾರೋಹಳ್ಳಿ - ಮರಳವಾಡಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಅಶೋಕ್ , ಬಮೂಲ್ ನಿರ್ದೇಶಕ ಹರೀಶ್ ಸೇರಿ ಅನೇಕ ಮುಖಂಡರು ಹಾಜರಿದ್ದರು.

ಹೂವಿನ ಸುರಿ ಮಳೆ:

ರಾಮನಗರದಲ್ಲಿನ ಶಾಸಕರ ಕಚೇರಿಗೆ ಇಕ್ಬಾಲ್ ಹುಸೇನ್ ರವರು ಆಗಮಿಸುತ್ತಿದ್ದಂತೆ ಕಾರ್ಯಕರ್ತರು ಪಟಾಕಿ ಸಿಡಿಸಿ ಅದ್ಧೂರಿಯಾಗಿ ಸ್ವಾಗತ ಕೋರಿದರು. ಬೃಹತ್ ಗಾತ್ರದ ಕೇಕ್ ಅನ್ನು ಕತ್ತರಿಸಿದ ಶಾಸಕರು, ಅಭಿಮಾನಿಗಳಿಗೆ ತಿನ್ನಿಸಿದರು. ಪಕ್ಷದ ಮುಖಂಡರು ಮತ್ತು ಕಾರ್ಯಕರ್ತರು ಶಾಲು ಹೊದಿಸಿ ಹೂವಿನ ಹಾರ ಹಾಕಿ ಅಭಿನಂದಿಸಿದರು.

ಯುವ ಕಾಂಗ್ರೆಸ್ ಮುಖಂಡರು ಶಾಸಕ ಇಕ್ಬಾಲ್ ಹುಸೇನ್ ರವರ ಮೇಲೆ ಗುಲಾಬಿ ಹೂವಿನ ಮಳೆ ಸುರಿಸಿದರು. ದೇವಾಲಯದಲ್ಲಿ ವಿಶೇಷ ಪೂಜೆ ಮತ್ತು ದರ್ಗಾಗಳಲ್ಲಿ ವಿಶೇಷ ಪ್ರಾರ್ಥನೆ ಸಲ್ಲಿಸಿದರು.

ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಜಿಲ್ಲಾಧ್ಯಕ್ಷ ಕೆ.ರಾಜು, ರಾಮನಗರ ನಗರಾಭಿವೃದ್ಧಿ ಪ್ರಾಧಿಕಾರ ಅಧ್ಯಕ್ಷ ಚೇತನ್ ಕುಮಾರ್ , ನಗರಸಭೆ ಸದಸ್ಯ ಬೈರೇಗೌಡ, ಹಿಂದುಳಿದ ವರ್ಗಗಳ ಮಹಾ ಒಕ್ಕೂಟದ ಜಿಲ್ಲಾಧ್ಯಕ್ಷ ರೈಡ್ ನಾಗರಾಜ್ , ಕೈಲಾಂಚ ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷ ಅಂಕನಹಳ್ಳಿ ಮಹೇಶ್ , ವಿಭೂತಿಕೆರೆ ಸೊಸೈಟಿ ಮಾಜಿ ಅಧ್ಯಕ್ಷ ಕುಂಬಾಪುರ ಪಾರ್ಥ, ಮುಖಂಡರಾದ ಗುರುವೇಗೌಡ, ಯುವ ಮುಖಂಡರಾದ ಮುಷೀರ್ , ವಸೀಂ ಅಕ್ರಂ, ಇನಾಯತ್ , ಅನಿಲ್ ಜೋಗೇಂದರ್ , ಚನ್ನಮಾನಹಳ್ಳಿ ಶ್ರೀನಿವಾಸ್ , ಗುತ್ತಿಗೆದಾರ ವಾಸು ಸೇರಿದಂತೆ ಅನೇಕ ಮುಖಂಡರು ಶಾಸಕ ಇಕ್ಬಾಲ್ ಹುಸೇನ್ ಅವರನ್ನು ಅಭಿನಂದಿಸಿದರು.

ರಾಮನಗರ ಸಾರ್ವಭೌಮ ಸಂಚಿಕೆ ಬಿಡುಗಡೆ

ರಾಮನಗರ ಕ್ಷೇತ್ರ ಶಾಸಕ ಎಚ್.ಎ.ಇಕ್ಬಾಲ್ ಹುಸೇನ್ ರವರ ಹುಟ್ಟುಹಬ್ಬದ ಪ್ರಯುಕ್ತ ಕನ್ನಡಪ್ರಭ ಹೊರ ತಂದಿರುವ ರಾಮನಗರ ಸಾರ್ವಭೌಮ ವಿಶೇಷ ಸಂಚಿಕೆಯನ್ನು ಶಾಸಕ ಇಕ್ಬಾಲ್ ಹುಸೇನ್ ಬಿಡುಗಡೆ ಮಾಡಿದರು.

ರಾಜ್ಯ ಸರ್ಕಾರದಿಂದ ಕ್ಷೇತ್ರಕ್ಕೆ ಹರಿದು ಬಂದಿರುವ ಅನುದಾನ, ಶಿಕ್ಷಣ, ಆರೋಗ್ಯ, ನೀರಾವರಿ ಸೇರಿದಂತೆ ಎಲ್ಲಾ ರಂಗದಲ್ಲಿ ನಡೆಯುತ್ತಿರುವ ಅಭಿವೃದ್ಧಿ ಕಾಮಗಾರಿಗಳನ್ನು ಸಮಗ್ರವಾಗಿ ವಿಶ್ಲೇಷಿಸಿರುವ ರಾಮನಗರ ಸಾರ್ವಭೌಮ ವಿಶೇಷ ಸಂಚಿಕೆ ಕುರಿತು ಶಾಸಕ ಇಕ್ಬಾಲ್ ಹುಸೇನ್ ಮೆಚ್ಚುಗೆ ವ್ಯಕ್ತಪಡಿಸಿದರು.

ಈ ಸಂದರ್ಭದಲ್ಲಿ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಜಿಲ್ಲಾಧ್ಯಕ್ಷ ಕೆ.ರಾಜು, ರಾಮನಗರ ನಗರಾಭಿವೃದ್ಧಿ ಪ್ರಾಧಿಕಾರ ಅಧ್ಯಕ್ಷ ಚೇತನ್ ಕುಮಾರ್ , ನಗರಸಭೆ ಸದಸ್ಯ ಬೈರೇಗೌಡ, ಹಿಂದುಳಿದ ವರ್ಗಗಳ ಮಹಾ ಒಕ್ಕೂಟದ ಜಿಲ್ಲಾಧ್ಯಕ್ಷ ರೈಡ್ ನಾಗರಾಜ್ , ಕೈಲಾಂಚ ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷ ಅಂಕನಹಳ್ಳಿ ಮಹೇಶ್ , ಯುವ ಮುಖಂಡರಾದ ಮುಷೀರ್ , ಚನ್ನಮಾನಹಳ್ಳಿ ಶ್ರೀನಿವಾಸ್, ಇನಾಯತ್ ಮತ್ತಿತರರು ಹಾಜರಿದ್ದರು.

ರಾಮನಗರ ಕ್ಷೇತ್ರದಲ್ಲಿ ಅಭಿವೃದ್ಧಿ ಕಾರ್ಯಗಳನ್ನು ಸಾಕಾರ ಮಾಡಿರುವ ಶಾಸಕ ಎಚ್.ಎ.ಇಕ್ಬಾಲ್ ಹುಸೇನ್ ರವರ ಜನಪರ ಕಾರ್ಯಗಳು ಜನರ ಮನಸ್ಸಿನಲ್ಲಿವೆ. ಮತ್ತಷ್ಟು ಅಭಿವೃದ್ಧಿ ಕೆಲಸಗಳನ್ನು ಮಾಡುವ ಶಕ್ತಿಯನ್ನು ದೇವರು ಕರುಣಿಸಲಿ.

- ಕೆ.ರಾಜು, ಜಿಲ್ಲಾಧ್ಯಕ್ಷರು, ಗ್ಯಾರಂಜಿ ಯೋಜನೆಗಳ ಅನುಷ್ಠಾನ ಸಮಿತಿ.

ರಾಮನಗರ ಕ್ಷೇತ್ರದ ಅಭಿವೃದ್ಧಿಗೆ ₹1800 ಕೋಟಿ ಅನುದಾನ ತರುವ ಮೂಲಕ ಶಾಸಕ ಇಕ್ಬಾಲ್ ಹುಸೇನ್ ರವರು ತಮ್ಮ ಬದ್ಧತೆಯನ್ನು ಪ್ರದರ್ಶಿಸಿದ್ದಾರೆ. ಕ್ಷೇತ್ರದಲ್ಲಿ ನೂರಾರು ಕೋಟಿ ರುಪಾಯಿಗಳ ಕಾಮಗಾರಿಗಳು ಪ್ರಗತಿಯಲ್ಲಿದ್ದು, ಅವೆಲ್ಲವೂ ಶೀಘ್ರದಲ್ಲಿಯೇ ಲೋಕಾರ್ಪಣೆಗೊಳ್ಳಲಿವೆ. ಅಭಿವೃದ್ಧಿ ವಿಚಾರದಲ್ಲಿ ಇಕ್ಬಾಲ್ ರವರು ಎಲ್ಲರಿಗೂ ಮಾದರಿಯಾಗಿದ್ದಾರೆ.

ಎ.ಬಿ.ಚೇತನ್ ಕುಮಾರ್ , ಅಧ್ಯಕ್ಷರು, ರಾಮನಗರ ನಗರಾಭಿವೃದ್ಧಿ ಪ್ರಾಧಿಕಾರ

PREV
Catch up on the latest political news from Karnataka and India (ರಾಜಕೀಯ ಸುದ್ದಿ) — election results, government decisions, party updates, and in-depth political analysis on Kannada Prabha.
Read more Articles on

Recommended Stories

14ರಂದು ಕನಕಪುರಕ್ಕೆ ನಿಖಿಲ್ ಕುಮಾರಸ್ವಾಮಿ
ಮುನಿಸು ಮರೆತು ಮೋದಿ- ರಾಗಾ ಆಪ್ತ ಮಾತು!