ಮೋದಿ ‘ರಾಜಿ ಆದ ಪ್ರಧಾನಿ’: ರಾಹುಲ್‌ ವಾಗ್ದಾಳಿ

Published : Nov 21, 2026, 01:22 PM IST
Rahul Gandhi

ಸಾರಾಂಶ

‘ಕಾಂಗ್ರೆಸ್ ಅಧಿಕಾರದಲ್ಲಿದ್ದರೆ ಭಾರತದ ಪ್ರಧಾನಮಂತ್ರಿಗಳು ಇಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್, ಚೀನಾ ಅಧ್ಯಕ್ಷ ಕ್ಸಿ ಜಿನ್‌ಪಿಂಗ್ ಮತ್ತು ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಅವರೊಂದಿಗೆ ಮೇಜಿನ ಮೇಲೆ ಕುಳಿತುಕೊಳ್ಳುತ್ತಿದ್ದರು

ನವದೆಹಲಿ : ‘ಕಾಂಗ್ರೆಸ್ ಅಧಿಕಾರದಲ್ಲಿದ್ದರೆ ಭಾರತದ ಪ್ರಧಾನಮಂತ್ರಿಗಳು ಇಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್, ಚೀನಾ ಅಧ್ಯಕ್ಷ ಕ್ಸಿ ಜಿನ್‌ಪಿಂಗ್ ಮತ್ತು ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಅವರೊಂದಿಗೆ ಮೇಜಿನ ಮೇಲೆ ಕುಳಿತುಕೊಳ್ಳುತ್ತಿದ್ದರು. ಆದರೆ, ರಾಜಿ ಮಾಡಿಕೊಂಡ ಪ್ರಧಾನಿ ಎಂದಿಗೂ ಈ ಮೇಜಿನ ಬಳಿ ಕುಳಿತುಕೊಳ್ಳಲು ಸಾಧ್ಯವಿಲ್ಲ’ ಎಂದು ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಲೋಕಸಭೆ ವಿಪಕ್ಷ ನಾಯಕ ರಾಹುಲ್ ಗಾಂಧಿ ಹರಿತ ವಾಗ್ದಾಳಿ ನಡೆಸಿದ್ದಾರೆ.

ಅಪರೂಪದ ತ್ರಿಪಕ್ಷೀಯ ಮಾತುಕತೆ ಚಿತ್ರ ಟ್ವೀಟ್‌

ಟ್ರಂಪ್, ಕ್ಸಿ ಮತ್ತು ಪುಟಿನ್ ಅವರ ಅಪರೂಪದ ತ್ರಿಪಕ್ಷೀಯ ಮಾತುಕತೆಯ ಚಿತ್ರವನ್ನು ಟ್ವೀಟ್‌ನಲ್ಲಿ ಹಂಚಿಕೊಂಡ ಗಾಂಧಿ ‘ಕಾಂಗ್ರೆಸ್ ಅಧಿಕಾರದಲ್ಲಿದ್ದರೆ, ಭಾರತದ ಪ್ರಧಾನಿ ಈ ಮೇಜಿನ ಬಳಿ ಕುಳಿತುಕೊಳ್ಳುತ್ತಿದ್ದರು. ರಾಜಿ ಮಾಡಿಕೊಂಡ ಪ್ರಧಾನಿ ಎಂದಿಗೂ ಈ ಮೇಜಿನ ಬಳಿ ಕುಳಿತುಕೊಳ್ಳಲು ಸಾಧ್ಯವಿಲ್ಲ’ ಎಂದು ಕುಟುಕಿದ್ದಾರೆ.

ಬಿಜೆಪಿ ಕಿಡಿ:

ಬಿಜೆಪಿ ವಕ್ತಾರ ತುಹಿನ್ ಸಿನ್ಹಾ ಈ ಬಗ್ಗೆ ಕಿಡಿಕಾರಿದ್ದು, ‘ಭಾರತದ ಮಾನಹಾನಿ ಮಾಡಲು ರಾಹುಲ್ ಗಾಂಧಿಗೆ ಹಣ ನೀಡಲಾಗಿದೆ ಎಂದು ತೋರುತ್ತದೆ’ ಎಂದಿದ್ದಾರೆ.

PREV
Catch up on the latest political news from Karnataka and India (ರಾಜಕೀಯ ಸುದ್ದಿ) — election results, government decisions, party updates, and in-depth political analysis on Kannada Prabha.
Read more Articles on

Recommended Stories

ಪಂಚಾಯ್ತಿ ಫೈಟ್‌ : ಬಿಜೆಪಿ ಹಿಂದಿಕ್ಕಿ ಕಾಂಗ್ರೆಸ್‌ ಜಯಭೇರಿ
ಅಮಿತ್‌ ಕೈಗೆ ಹಿರಿಯೂರು ಗ್ರೌಂಡ್‌ರಿಪೋರ್ಟ್ : ಎಚ್ಡಿಕೆ