ಅಮ್ಯೂಸ್‌ಮೆಂಟ್ ಪಾರ್ಕ್‌ಗೆ ಬೇರೆ ಜಾಗ ಗುರುತಿಸಲಿ: ಸಂಸದ ಯಧುವೀರ್

KannadaprabhaNewsNetwork |  
Published : Jun 13, 2025, 01:10 AM IST
ಯದುವೀರ್‌ | Kannada Prabha

ಸಾರಾಂಶ

ಪ್ರವಾಸಿ ಕೇಂದ್ರವಾಗಿ ಕೃಷ್ಣರಾಜಸಾಗರ ಈಗಾಗಲೇ ವಿಶ್ವದ ಜನರನ್ನು ತನ್ನತ್ತ ಸೆಳೆಯುತ್ತಿದೆ. ಪ್ರತಿ ತಿಂಗಳು ಲಕ್ಷಾಂತರ ಸಂಖ್ಯೆಯಲ್ಲಿ ಪ್ರವಾಸಿಗರು ಆಗಮಿಸುತ್ತಿದ್ದಾರೆ. ಕೆ.ಆರ್.ಎಸ್. ಅಣೆಕಟ್ಟೆ ನಿರ್ಮಾಣಗೊಂಡು ೧೦೦ ವರ್ಷ ಸಮೀಪಿಸುತ್ತಿರುವುದೆ. ಅಣೆಕಟ್ಟೆ ಭದ್ರತೆ ಸೂಕ್ಷ್ಮ ವಿಚಾರವಾಗಿರುವುದರಿಂದ ಈ ಯೋಜನೆಯನ್ನು ಬೇರೆಡೆಗೆ ಸ್ಥಳಾಂತರಿಸುವುದು ಸೂಕ್ತ.

ಕನ್ನಡಪ್ರಭ ವಾರ್ತೆ ಮಂಡ್ಯ

ಪ್ರವಾಸೋದ್ಯಮ ಅಭಿವೃದ್ಧಿಯನ್ನು ಗುರಿಯಾಗಿಸಿಕೊಂಡು ಕೃಷ್ಣರಾಜಸಾಗರ ಜಲಾಶಯದ ಬಳಿ ನಿರ್ಮಿಸಲು ಉದ್ದೇಶಿಸಿರುವ ಅಮ್ಯೂಸ್‌ಮೆಂಟ್ ಪಾರ್ಕ್ ಯೋಜನೆಗೆ ಬೇರೆ ಕಡೆ ಜಾಗ ಗುರುತಿಸುವುದು ಉತ್ತಮ ಎಂದು ಮೈಸೂರು-ಕೊಡಗು ಸಂಸದ ಯಧುವೀರ್ ಒಡೆಯರ್ ತಿಳಿಸಿದರು.

ಜಿಲ್ಲಾ ಬಿಜೆಪಿ ವಿಕಾಸ ಭವನದಲ್ಲಿ ನಡೆದ ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಅವರು, ಪ್ರವಾಸಿ ಕೇಂದ್ರವಾಗಿ ಕೃಷ್ಣರಾಜಸಾಗರ ಈಗಾಗಲೇ ವಿಶ್ವದ ಜನರನ್ನು ತನ್ನತ್ತ ಸೆಳೆಯುತ್ತಿದೆ. ಪ್ರತಿ ತಿಂಗಳು ಲಕ್ಷಾಂತರ ಸಂಖ್ಯೆಯಲ್ಲಿ ಪ್ರವಾಸಿಗರು ಆಗಮಿಸುತ್ತಿದ್ದಾರೆ. ಕೆ.ಆರ್.ಎಸ್. ಅಣೆಕಟ್ಟೆ ನಿರ್ಮಾಣಗೊಂಡು ೧೦೦ ವರ್ಷ ಸಮೀಪಿಸುತ್ತಿರುವುದೆ. ಅಣೆಕಟ್ಟೆ ಭದ್ರತೆ ಸೂಕ್ಷ್ಮ ವಿಚಾರವಾಗಿರುವುದರಿಂದ ಈ ಯೋಜನೆಯನ್ನು ಬೇರೆಡೆಗೆ ಸ್ಥಳಾಂತರಿಸುವುದು ಸೂಕ್ತ ಎಂದು ಸಲಹೆ ನೀಡಿದರು.

ಕೆ.ಆರ್.ಎಸ್.ನಲ್ಲಿ ಅಮ್ಯೂಸ್‌ಮೆಂಟ್ ಪಾರ್ಕ್ ನಿರ್ಮಾಣವಾಗುವುದಕ್ಕೆ ರೈತ ಸಂಘಟನೆಗಳು ಹಾಗೂ ಆ ಭಾಗದ ರೈತರು ವಿರೋಧಿಸುತ್ತಿದ್ದಾರೆಯೇ ಹೊರತು, ಆ ಯೋಜನೆ ಬೇರೆಡೆ ನಿರ್ಮಾಣ ಮಾಡುವುದಕ್ಕೆ ಯಾರಿಂದಲೂ ವಿರೋಧವಿಲ್ಲ. ರೈತರಿಂದ ವ್ಯಕ್ತವಾಗುತ್ತಿರುವ ಭಾವನೆಗಳಿಗೆ ಪ್ರಥಮ ಆದ್ಯತೆ ನೀಡುತ್ತಿದ್ದು, ಈ ಯೋಜನೆಗೆ ನಮ್ಮ ವಿರೋಧವೂ ಇದೆ ಎಂದು ಸ್ಪಷ್ಟಪಡಿಸಿದರು.

ಕಾವೇರಿ ಆರತಿಗೆ ೧೦೦ ಕೋಟಿ ರು. ಖರ್ಚು ಮಾಡುತ್ತಿರುವುದು ಅವೈಜ್ಞಾನಿಕ. ಇಷ್ಟೊಂದು ಹಣವನ್ನು ದುಂದು ವೆಚ್ಚ ಮಾಡುವುದು ಸರಿಯಲ್ಲ, ಬಿಜೆಪಿಯವರಿಗೆ ಇದನ್ನು ವಹಿಸಿಕೊಟ್ಟರೆ ನಾವೇ ಉಚಿತವಾಗಿ ಕಾವೇರಿ ಆರತಿ ಮಾಡುವುದಾಗಿ ತಿರುಗೇಟು ನೀಡಿದರು.

ಕೆಆರ್‌ಎಸ್ ಸುತ್ತಮುತ್ತ ಉತ್ತಮವಾದ ಪರಿಸರವಿದೆ. ವ್ಯವಸಾಯಕ್ಕೆ ಯೋಗ್ಯವಾದ ಫಲವತ್ತಿನಿಂದ ಕೂಡಿದ ಭೂಮಿ ಇದೆ. ಜೀವವೈವಿಧ್ಯ ಸೂಕ್ಷ್ಮ ವಲಯ ಇರುವುದರಿಂದ ಅಲ್ಲಿ ಯೋಜನೆ ಜಾರಿಯಾದರೆ ಪರಿಸರಕ್ಕೆ ದೊಡ್ಡ ಅನಾಹುತವಾಗಲಿದೆ. ಆ ದೃಷ್ಠಿಯಿಂದ ರೈತರು ಮತ್ತು ಸಂಘಟನೆಗಳ ಅಭಿಪ್ರಾಯಗಳಿಗೆ ಮನ್ನಣೆ ನೀಡಿ ರಾಜ್ಯ ಸರ್ಕಾರ ಈ ಯೋಜನೆಯನ್ನು ಬೇರೆಡೆಗೆ ಸ್ಥಳಾಂತರಿಸಿ, ಪ್ರವಾಸೋದ್ಯಮ ಬೆಳವಣಿಗೆಗೆ ಸಹಕಾರಿಯಾಗಲಿ ಎಂದರು.

PREV
Catch up on the latest political news from Karnataka and India (ರಾಜಕೀಯ ಸುದ್ದಿ) — election results, government decisions, party updates, and in-depth political analysis on Kannada Prabha.

Recommended Stories

ದೆಹಲಿಯಲ್ಲೂ ಸಿದ್ದು ಸಿದ್ದು, ಡಿಕೆ ಡಿಕೆ ಸದ್ದು
ಮತಚೋರಿ ಬಗ್ಗೆ ದಿಲ್ಲೀಲಿ ಕೈ ನಾಯಕರ ರಣಕಹಳೆ