2 ವರ್ಷದಿಂದ ನನ್ನ, ಎಚ್ಡಿಕೆ ಫೋನ್‌ ಕದ್ದಾಲಿಕೆ ನೂರಕ್ಕೆ ನೂರರಷ್ಟು ನಿಜ : ಅಶೋಕ್‌

Published : Mar 25, 2025, 07:27 AM IST
R Ashok

ಸಾರಾಂಶ

ಹನಿಟ್ರ್ಯಾಪ್ ಬೆನ್ನಲ್ಲೇ ರಾಜ್ಯದಲ್ಲಿ ಇದೀಗ ಫೋನ್ ಕದ್ದಾಲಿಕೆ ವಿಚಾರದ ಚರ್ಚೆ ಮುನ್ನಲೆಗೆ ಬಂದಿದ್ದು, ತಮ್ಮ ಹಾಗೂ ಕೇಂದ್ರ ಕೈಗಾರಿಕಾ ಸಚಿವ ಎಚ್‌.ಡಿ.ಕುಮಾರಸ್ವಾಮಿ ಸೇರಿ ಹಲವರ ಪೋನ್‌ ಕದ್ದಾಲಿಕೆ ಮಾಡಲಾಗುತ್ತಿದೆ ಎಂದು ಪ್ರತಿಪಕ್ಷ ನಾಯಕ ಆರ್‌.ಅಶೋಕ್‌ ಗಂಭೀರ ಆರೋಪ ಮಾಡಿದ್ದಾರೆ.

ಬೆಂಗಳೂರು : ಹನಿಟ್ರ್ಯಾಪ್ ಬೆನ್ನಲ್ಲೇ ರಾಜ್ಯದಲ್ಲಿ ಇದೀಗ ಫೋನ್ ಕದ್ದಾಲಿಕೆ ವಿಚಾರದ ಚರ್ಚೆ ಮುನ್ನಲೆಗೆ ಬಂದಿದ್ದು, ತಮ್ಮ ಹಾಗೂ ಕೇಂದ್ರ ಕೈಗಾರಿಕಾ ಸಚಿವ ಎಚ್‌.ಡಿ.ಕುಮಾರಸ್ವಾಮಿ ಸೇರಿ ಹಲವರ ಪೋನ್‌ ಕದ್ದಾಲಿಕೆ ಮಾಡಲಾಗುತ್ತಿದೆ ಎಂದು ಪ್ರತಿಪಕ್ಷ ನಾಯಕ ಆರ್‌.ಅಶೋಕ್‌ ಗಂಭೀರ ಆರೋಪ ಮಾಡಿದ್ದಾರೆ.

ಸೋಮವಾರ ವಿಧಾನಸೌಧದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಫೋನ್‌ ಕದ್ದಾಲಿಕೆ ಮಾಡುತ್ತಿರುವುದು ನೂರಕ್ಕೆ ನೂರರಷ್ಟು ನಿಜ. ಕಳೆದ ಎರಡು ವರ್ಷಗಳಿಂದ ಕೇಂದ್ರ ಸಚಿವ ಎಚ್‌.ಡಿ.ಕುಮಾರಸ್ವಾಮಿ ಮತ್ತು ನನ್ನ ಫೋನ್‌ ಕದ್ದಾಲಿಕೆ ಮಾಡಲಾಗುತ್ತಿದೆ. ಆಡಳಿತ ಮತ್ತು ಪ್ರತಿಪಕ್ಷ ನಾಯಕರ ಫೋನ್‌ ಕದ್ದಾಲಿಕೆಯಾಗುತ್ತಿದೆ. ಫೋನ್‌ ಕದ್ದಾಲಿಕೆ ವಿಚಾರವನ್ನು ಆಡಳಿತ ಪಕ್ಷದ ಶಾಸಕರೇ ಹೇಳಿದ್ದಾರೆ. ವಿರೋಧಿಗಳನ್ನು ಬಗ್ಗು ಬಡಿಯಬೇಕು ಎಂಬ ಕಾರಣಕ್ಕೆ ಹೀಗೆ ಮಾಡಲಾಗುತ್ತಿದ್ದು, ಇದರಲ್ಲಿ ಅನುಮಾನವೇ ಬೇಡ ಎಂದು ಹೇಳಿದರು.

ಸಹಕಾರ ಸಚಿವ ಕೆ.ಎನ್‌.ರಾಜಣ್ಣ ಮತ್ತು ಅವರ ಪುತ್ರರೂ ಆಗಿರುವ ವಿಧಾನಪರಿಷತ್‌ ಸದಸ್ಯ ರಾಜೇಂದ್ರ ಅವರ ಟ್ರ್ಯಾಕ್‌ ಮಾಡಲು ಕದ್ದಾಲಿಕೆ ಮಾಡಿಸಿರುತ್ತಾರೆ. ಈ ಬಗ್ಗೆ ನಾನು ಮತ್ತು ಎಚ್‌.ಡಿ.ಕುಮಾರಸ್ವಾಮಿ ಮೊದಲಿಂದಲೂ ಆರೋಪ ಮಾಡುತ್ತಿದ್ದೇವೆ. ಈ ಬಗ್ಗೆ ಸರ್ಕಾರ ಸೂಕ್ತ ಕ್ರಮ ಕೈಗೊಳ್ಳುತ್ತಿಲ್ಲ. ಆಡಳಿತ ಪಕ್ಷದವರೇ ಹೇಳಿಕೆ ನೀಡಿರುವುದರಿಂದ ಇನ್ನಾದರೂ ಎಚ್ಚೆತ್ತುಕೊಂಡು ಸರ್ಕಾರು ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು.

ಹನಿಟ್ರ್ಯಾಪ್‌ ವಿಚಾರವಾಗಿ ಸಚಿವ ರಾಜಣ್ಣ ಮತ್ತು ಅವರ ಮಗ ರಾಜೇಂದ್ರ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯನವರ ಅನುಮತಿ ಪಡೆದು ಮಾತನಾಡಿದ್ದಾರೆ. ಸಚಿವರಿಂದಲೇ ವಿಷಯ ಪ್ರಸ್ತಾಪವಾಗಲು ಏನೆಲ್ಲಾ ನಡೆದಿದೆ ಎಂಬುದೂ ಗೊತ್ತಿದೆ. ಈ ಮೂಲಕ ಇದರ ಸೂತ್ರದಾರರು ಯಾರೆಂದು ತಿಳಿದು ಬಂದಿದೆ. ಈ ಬಗ್ಗೆ ಇದೀಗ ಕಾಂಗ್ರೆಸ್‌ನವರೇ ಸೂತ್ರಧಾರ ಯಾರೆಂಬುದನ್ನು ಹೇಳಬೇಕು ಎಂದರು.

PREV
Catch up on the latest political news from Karnataka and India (ರಾಜಕೀಯ ಸುದ್ದಿ) — election results, government decisions, party updates, and in-depth political analysis on Kannada Prabha.

Recommended Stories

ಉ.ಕ.ಅಭಿವೃದ್ಧಿ ಕೈ ಸರ್ಕಾರ ಬದ್ಧ : ಸಿಎಂ
ಮೋದಿ ಜತೆ ಪ್ರಿಯಾಂಕಾ ಗಾಂಧಿ ಆತ್ಮೀಯ ಮಾತು!