;Resize=(412,232))
ನವದೆಹಲಿ: ಕೇಂದ್ರ ಸಚಿವ ಜೆ.ಪಿ.ನಡ್ಡಾ ಅವರ ಬಿಜೆಪಿ ಅಧ್ಯಕ್ಷ ಅವಧಿ ಸುಮಾರು 6 ತಿಂಗಳು ವಿಸ್ತರಣೆಯಾಗುವ ಸಾಧ್ಯತೆ ಇದೆ. ಇದೇ ವೇಳೆ 1 ಕಾರ್ಯಾಧ್ಯಕ್ಷ ಹುದ್ದೆಯನ್ನು ಸೃಷ್ಟಿಸಿ ಅದಕ್ಕೆ ದಲಿತ ಅಥವಾ ಹಿಂದುಳಿದ ವರ್ಗದ ಮಹಿಳಾ ನಾಯಕಿಯೊಬ್ಬರನ್ನು ನೇಮಕ ಮಾಡಲಿದೆ ಎಂದು ಮೂಲಗಳು ತಿಳಿಸಿವೆ.
ಈಗ ಇದೇ ವರ್ಷದ ಅಂತ್ಯಕ್ಕೆ ಮಹಾರಾಷ್ಟ್ರ, ಜಾರ್ಖಂಡ್, ಹರ್ಯಾಣ ಹಾಗೂ ಜಮ್ಮು ಮತ್ತು ಕಾಶ್ಮೀರದ ವಿಧಾನಸಭೆ ಚುನಾವಣೆಗಳು ನಿಗದಿಯಾಗಿರುವ ಕಾರಣ ಪಕ್ಷದ ನಾಯಕತ್ವ ಬದಲಾವಣೆಗೆ ವರಿಷ್ಠರಿಗೆ ಮನಸ್ಸಿಲ್ಲ ಎನ್ನಲಾಗಿದೆ. ಜತೆಗೆ ನಡ್ಡಾ ನಾಯಕತ್ವಕ್ಕೆ ಎಲ್ಲೆಡೆ ಮೆಚ್ಚುಗೆ ಇರುವುದರಿಂದ ಸದ್ಯಕ್ಕೆ 6 ತಿಂಗಳ ಮಟ್ಟಿಗೆ ಅವರನ್ನೇ ಮುಂದುವರಿಸುವ ನಿರ್ಧಾರ ಹೊರಬೀಳುವ ಸಾಧ್ಯತೆ ಇದೆ ಎಂದು ಬಿಜೆಪಿ ಮೂಲಗಳು ತಿಳಿಸಿವೆ.
ಒಂದು ವೇಳೆ ನಡ್ಡಾ ಅವರೇ ಮುಂದುವರೆದರೆ, 1 ಕಾರ್ಯಾಧ್ಯಕ್ಷ ಹುದ್ದೆ ಸೃಷ್ಟಿಸಿ ಒಬಿಸಿ, ದಲಿತ ಸಮುದಾಯದ ಮಹಿಳಾ ನಾಯಕಿಯನ್ನು ನೇಮಕ ಮಾಡುವ ಸಾಧ್ಯತೆಗಳಿವೆ ಎಂದು ಪಕ್ಷದ ಆಂತರಿಕ ಮೂಲಗಳು ತಿಳಿಸಿವೆ.