ನಡ್ಡಾ, ಸಂತೋಷ್ ಭೇಟಿಯಾದ ಮಂಡ್ಯ ಸಂಸದೆ ಸುಮಲತಾ..!

KannadaprabhaNewsNetwork |  
Published : Feb 09, 2024, 01:49 AM ISTUpdated : Feb 09, 2024, 07:53 AM IST
Sumalatha

ಸಾರಾಂಶ

ಮಂಡ್ಯ ಕ್ಷೇತ್ರ ಜೆಡಿಎಸ್‌ಗೆ ಸಿಗುವ ಬಗ್ಗೆ ಮಾತುಗಳು ದಟ್ಟವಾಗಿ ಕೇಳಿಬರುತ್ತಿರುವುದರಿಂದ ಅವಕಾಶ ವಂಚಿತರಾಗಬಹುದೆಂಬ ಭಯ ಸಂಸದೆ ಸುಮಲತಾ ಅವರನ್ನು ತೀವ್ರವಾಗಿ ಕಾಡುತ್ತಿವೆ. ಇದರ ನಡುವೆಯೇ ಬಿಜೆಪಿ ಹೈಕಮಾಂಡ್ ನಾಯಕರನ್ನು ಭೇಟಿಯಾಗಿ ಮನವೊಲಿಸುವ ಕಾರ್ಯದಲ್ಲಿ ತೊಡಗಿದ್ದಾರೆಂದು ಹೇಳಲಾಗುತ್ತಿದೆ.

ಕನ್ನಡಪ್ರಭ ವಾರ್ತೆ ಮಂಡ್ಯ

ಬಿಜೆಪಿ-ಜೆಡಿಎಸ್ ಮೈತ್ರಿಯೊಳಗೆ ಮಂಡ್ಯ ಕ್ಷೇತ್ರ ಕೈಬಿಟ್ಟುಹೋಗುವ ಆತಂಕದಲ್ಲಿರುವ ಸಂಸದೆ ಸುಮಲತಾ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ನಡ್ಡಾ ಹಾಗೂ ಹಿರಿಯ ಮುಖಂಡ ಬಿ.ಎಲ್.ಸಂತೋಷ್ ಅವರನ್ನು ಭೇಟಿಯಾಗಿದ್ದಾರೆ.

ಮೈತ್ರಿ ನಡುವೆಯೂ ಮಂಡ್ಯ ಕ್ಷೇತ್ರವನ್ನು ಬಿಜೆಪಿ ಉಳಿಸಿಕೊಳ್ಳಬೇಕು. ತಮ್ಮನ್ನೇ ಮೈತ್ರಿ ಅಭ್ಯರ್ಥಿಯನ್ನಾಗಿ ಮಾಡಬೇಕೆಂಬ ಬೇಡಿಕೆಯನ್ನು ಇಟ್ಟಿದ್ದಾರೆ ಎಂದು ತಿಳಿದುಬಂದಿದೆ. ಮಂಡ್ಯ ಕ್ಷೇತ್ರ ಜೆಡಿಎಸ್‌ಗೆ ಸಿಗುವ ಬಗ್ಗೆ ಮಾತುಗಳು ದಟ್ಟವಾಗಿ ಕೇಳಿಬರುತ್ತಿರುವುದರಿಂದ ಅವಕಾಶ ವಂಚಿತರಾಗಬಹುದೆಂಬ ಭಯ ಅವರನ್ನು ತೀವ್ರವಾಗಿ ಕಾಡುತ್ತಿವೆ. 

ಇದರ ನಡುವೆಯೇ ಬಿಜೆಪಿ ಹೈಕಮಾಂಡ್ ನಾಯಕರನ್ನು ಭೇಟಿಯಾಗಿರುವ ಸುಮಲತಾ ಅವರು ಕಮಲ ನಾಯಕರ ಮನವೊಲಿಸುವ ಕಾರ್ಯದಲ್ಲಿ ತೊಡಗಿದ್ದಾರೆಂದು ಹೇಳಲಾಗುತ್ತಿದೆ.

ಗ್ರಾಮ ಚಲೋ ಅಭಿಯಾನಕ್ಕೆ ಚಾಲನೆ
ಶ್ರೀರಂಗಪಟ್ಟಣ: ಪಟ್ಟಣದ ಬಿಜೆಪಿ ಕಚೇರಿಯಲ್ಲಿ ಗ್ರಾಮ ಚಲೋ ಅಭಿಯಾನಕ್ಕೆ ಪಕ್ಷದ ಹಿರಿಯ ಮುಖಂಡರು ಚಾಲನೆ ನೀಡಿದರು. ಬಿಜೆಪಿ ರಾಜ್ಯ ಕಾರ್‍ಯಕಾರಿಣಿ ಸದಸ್ಯ ಡಾ.ಸಿದ್ದರಾಮಯ್ಯ ಮಾತನಾಡಿ, ಲೋಕಸಭೆ ಚುನಾವಣೆಗೆ ಪಕ್ಷದ ಎಲ್ಲ ಕಾರ್ಯಕರ್ತರು ಒಗ್ಗೂಡಿ ಸಂಘಟಿಸಬೇಕು. 

ಮಾಜಿ ಪ್ರಧಾನ ವಾಜಪೇಯಿ ಅವರ ಆಡಳಿತದಿಂದ ಮೋದಿ ಅವರ ಆಡಳಿತದಿಂದ ದೇಶಕ್ಕೆ ಆಗಿರುವ ಸುಧಾರಣೆ ಮತ್ತು ಅಭಿವೃದ್ಧಿಗಳ ಕುರಿತು ಕಾರ್ಯಕರ್ತರು ಜನರಿಗೆ ತಿಳಿಹೇಳಬೇಕು ಎಂದರು.

ಪ್ರತಿ ಗ್ರಾಮದಲ್ಲೂ ಪ್ರವಾಸ ಮಾಡಿ ಮನೆ ಮನೆಗಳಿಗೆ ತೆರಳಿ ದೇಶದಲ್ಲಿ ಬಿಜೆಪಿ ಪಕ್ಷದಿಂದಾದ ಬದಲಾವಣೆಗಳ ಕುರಿತು ಎಳೆ ಎಳೆಯಾಗಿ ಜನರಿಗೆ ತಿಳಿಸಿ ಪಕ್ಷವನ್ನು ಸಂಘಟಿಸಬೇಕು ಎಂದರು.ಕಾರ್ಯಕ್ರಮದಲ್ಲಿ ತಾಲೂಕು ಬಿಜೆಪಿ ಅಧ್ಯಕ್ಷ ಪೀಹಳ್ಳಿ ರಮೇಶ್ ಅಧ್ಯಕ್ಷತೆ ವಹಿಸಿದ್ದರು. 

ರಾಜ್ಯ ಬಿಜೆಪಿ ರೈತ ಮೋರ್ಚಾ ಉಪಾಧ್ಯಕ್ಷ ಕೆ.ಎಸ್. ನಂಜುಂಡೇಗೌಡ, ಜಿಲ್ಲಾ ಬಿಜೆಪಿ ಪ್ರಧಾನ ಕಾರ್ಯದರ್ಶಿ ಟಿ.ಶ್ರೀಧರ್, ಪಕ್ಷದ ಜಿಲ್ಲಾ ಮತ್ತು ತಾಲೂಕು ಮಟ್ಟದ ಪದಾಧಿಕಾರಿಗಳು, ಕಾರ್ಯಕರ್ತರು ಉಪಸ್ಥಿತರಿದ್ದರು.

PREV
Catch up on the latest political news from Karnataka and India (ರಾಜಕೀಯ ಸುದ್ದಿ) — election results, government decisions, party updates, and in-depth political analysis on Kannada Prabha.

Recommended Stories

ಭಾಷಣ ಮಾಡಿಕೊಂಡು ಹೋದವನಲ್ಲ, ಪಕ್ಷದ ಎಲ್ಲಾ ಕೆಲ್ಸ ಮಾಡಿದ್ದೇನೆ: ಡಿಕೆಶಿ
ರಾಗಾ-ವೈಷ್ಣವ್‌ ಉದ್ಯೋಗ ಸೃಷ್ಟಿ ‘ಕ್ರೆಡಿಟ್‌ ವಾರ್’