ರಾಯಪುರ: ಛತ್ತೀಸ್‌ಗಢದಲ್ಲಿ ಚುನಾವಣೆಗೆ ಮೂರು ದಿನ ಇರುವಾಗಲೇ ಬಿಜೆಪಿ ಮುಖಂಡರೊಬ್ಬರನ್ನು ನಕ್ಸಲರು ಬರ್ಬರವಾಗಿ ಕೊಲೆ ಮಾಡಿದ ಘಟನೆ ಶನಿವಾರ ನಡೆದಿದೆ. ಮೃತ ರತನ್ ದುಬೆ ಜಿಲ್ಲಾ ಪಂಚಾಯ್ತಿಯ ಸದಸ್ಯರಾಗದ್ದು, ನಾರಾಯಣಪುರದ ಬಿಜೆಪಿ ಜಿಲ್ಲಾ ಉಪಾಧ್ಯಕ್ಷರಾಗಿದ್ದರು. ಕೌಶಲ್‌ನರ್‌ನಲ್ಲಿ ಚುನಾವಣೆ ಪ್ರಚಾರದಲ್ಲಿ ಭಾಗಿಯಾಗಿದ್ದರು. ಈ ವೇಳೆ ಇವರ ಮೇಲೆ ದಾಳಿ ನಡೆದಿದೆ. ಘಟನೆ ಬಳಿಕ ಹಿರಿಯ ಪೊಲೀಸ್ ಅಧಿಕಾರಿಗಳು ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸಿದ್ದಾರೆ. ಪ್ರಕರಣ ದಾಖಲಿಸಿಕೊಂಡು ತನಿಖೆ ಆರಂಭಿಸಿದ್ದಾರೆ ಎಂದು ಪೊಲೀಸರು ಮಾಹಿತಿ ನೀಡಿದರು. ರಾಜ್ಯದಲ್ಲಿ ನ.7ಕ್ಕೆ ಮೊದಲ ಹಂತದ ವಿಧಾನಸಭೆ ಚುನಾವಣೆ ನಡೆಯಲಿದೆ.