ಮದ್ದೂರು ಕ್ಷೇತ್ರದಲ್ಲಿ ಶೀಘ್ರ ನಿಖಿಲ್‌ ಪ್ರವಾಸ: ಮಾಜಿ ಸಚಿವ ಡಿ.ಸಿ.ತಮ್ಮಣ್ಣ

KannadaprabhaNewsNetwork |  
Published : Feb 08, 2024, 01:30 AM ISTUpdated : Feb 08, 2024, 07:58 AM IST
7ಕೆಎಂಎನ್‌ಡಿ-5ಮದ್ದೂರು ಪ್ರವಾಸಿಮಂದಿರದಲ್ಲಿ ನಡೆದ ಪೂರ್ವಭಾವಿ ಸಭೆಯಲ್ಲಿ ಮಾಜಿ ಸಚಿವ ಡಿ.ಸಿ.ತಮ್ಮಣ್ಣ ಮಾತನಾಡಿದರು. | Kannada Prabha

ಸಾರಾಂಶ

ಲೋಕಸಭಾ ಚುನಾವಣೆ ಸಮೀಪಿಸುತ್ತಿರುವುದರಿಂದ ಪಕ್ಷ ಸಂಘಟನೆ ಜೊತೆಗೆ ಶಾಲಾ-ಕಾಲೇಜು ವಿದ್ಯಾರ್ಥಿಗಳೊಂದಿಗೆ ಸಂವಾದ ಹಾಗೂ ಸಾರ್ವಜನಿಕ ಸಭೆ ನಡೆಸುವ ಮೂಲಕ ಚುನಾವಣೆಯಲ್ಲಿ ಜೆಡಿಎಸ್ ಅಭ್ಯರ್ಥಿ ಗೆಲುವಿನ ಬಗ್ಗೆ ಜನರ ಅಭಿಪ್ರಾಯ ಸಂಗ್ರಹಿಸುವ ಕಾರ್ಯ ಕೈಗೊಳ್ಳಲು ಸಭೆಯಲ್ಲಿ ನಿರ್ಧರಿಸಲಾಯಿತು.

ಕನ್ನಡಪ್ರಭ ವಾರ್ತೆ ಮದ್ದೂರು

ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಜೆಡಿಎಸ್ ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಶೀಘ್ರದಲ್ಲೇ ಮದ್ದೂರು ವಿಧಾನಸಭಾ ಕ್ಷೇತ್ರದಲ್ಲಿ ಪ್ರವಾಸ ಕೈಗೊಳ್ಳಲಿದ್ದಾರೆ ಎಂದು ಮಾಜಿ ಸಚಿವ ಡಿ.ಸಿ. ತಮ್ಮಣ್ಣ ಹೇಳಿದರು.

ಬುಧವಾರ ಪಟ್ಟಣದ ಪ್ರವಾಸಿ ಮಂದಿರದ ಆವರಣದಲ್ಲಿ ನಡೆದ ಪೂರ್ವಭಾವಿ ಸಭೆಯಲ್ಲಿ ಪಕ್ಷದ ವಿವಿಧ ಘಟಕಗಳ ಪದಾಧಿಕಾರಿಗಳು. ಸ್ಥಳೀಯ ಸಂಸ್ಥೆಗಳ ಜನಪ್ರತಿನಿಧಿಗಳು ಹಾಗೂ ಪಕ್ಷದ ವಿವಿಧ ಹೋಬಳಿಗಳ ನೂರಾರು ಕಾರ್ಯಕರ್ತರು ಸಭೆಯಲ್ಲಿ ಪಾಲ್ಗೊಂಡಿದ್ದರು.

ಜೆಡಿಎಸ್ ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಅವರು ಜಿಲ್ಲೆಯ ಏಳು ವಿಧಾನಸಭಾ ಕ್ಷೇತ್ರದಲ್ಲಿ ಪ್ರವಾಸ ಕೈಗೊಳ್ಳಲಿದ್ದಾರೆ. ಮೊದಲ ಹಂತದ ಪ್ರವಾಸ ಮದ್ದೂರು ವಿಧಾನಸಭಾ ಕ್ಷೇತ್ರದಿಂದ ಆರಂಭಗೊಳ್ಳುವುದರಿಂದ ಪ್ರವಾಸದ ರೂಪು-ರೇಷೆಗಳ ಬಗ್ಗೆ ಪೂರ್ವಭಾವಿ ಸಭೆಯಲ್ಲಿ ಚರ್ಚೆ ನಡೆಸಲಾಯಿತು. 

ಲೋಕಸಭಾ ಚುನಾವಣೆ ಸಮೀಪಿಸುತ್ತಿರುವುದರಿಂದ ಪಕ್ಷ ಸಂಘಟನೆ ಜೊತೆಗೆ ಶಾಲಾ-ಕಾಲೇಜು ವಿದ್ಯಾರ್ಥಿಗಳೊಂದಿಗೆ ಸಂವಾದ ಹಾಗೂ ಸಾರ್ವಜನಿಕ ಸಭೆ ನಡೆಸುವ ಮೂಲಕ ಚುನಾವಣೆಯಲ್ಲಿ ಜೆಡಿಎಸ್ ಅಭ್ಯರ್ಥಿ ಗೆಲುವಿನ ಬಗ್ಗೆ ಜನರ ಅಭಿಪ್ರಾಯ ಸಂಗ್ರಹಿಸುವ ಕಾರ್ಯ ಕೈಗೊಳ್ಳಲು ಸಭೆಯಲ್ಲಿ ನಿರ್ಧರಿಸಲಾಯಿತು.

ಮದ್ದೂರು ವಿಧಾನಸಭಾ ಕ್ಷೇತ್ರದಲ್ಲಿ ನಿಖಿಲ್ ಕುಮಾರಸ್ವಾಮಿ ಮೊದಲ ಹಂತದ ಪ್ರವಾಸ ಕೈಗೊಳ್ಳುವ ಬಗ್ಗೆ ಇನ್ನು ಎರಡು ಮೂರು ದಿನಗಳಲ್ಲಿ ದಿನಾಂಕ ನಿಗದಿಯಾಗಲಿದೆ. ಮದ್ದೂರು ಶ್ರೀಉಗ್ರ ನರಸಿಂಹಸ್ವಾಮಿ ದೇಗುಲದಲ್ಲಿ ವಿಶೇಷ ಪೂಜೆ ಸಲ್ಲಿಸುವ ಮೂಲಕ ಪ್ರವಾಸಕ್ಕೆ ಚಾಲನೆ ನೀಡಲಾಗುವುದು ಎಂದು ಮಾಜಿ ಸಚಿವ ಡಿಸಿ ತಮ್ಮಣ್ಣ ತಿಳಿಸಿದರು.

ನಂತರ ಆತಗೂರು ಹೋಬಳಿಯ ಕೆಸ್ತೂರು ಗ್ರಾಮದಲ್ಲಿ ಕಾರ್ಯಕರ್ತರ ಸಭೆ ನಡೆಯಲಿದೆ. ಬಳಿಕ ಕೆ.ಎಂ.ದೊಡ್ಡಿ ಸರ್ಕಾರಿ ಕಾಲೇಜಿನಲ್ಲಿ ನಿಖಿಲ್ ಕುಮಾರಸ್ವಾಮಿ ವಿದ್ಯಾರ್ಥಿಗಳೊಂದಿಗೆ ಸಂವಾದ ನಡೆಸಲಿದ್ದಾರೆ. ತರುವಾಯ ಪಕ್ಷದ ಕಾರ್ಯಕರ್ತರೊಂದಿಗೆ ಸಭೆ ನಡೆಸಲಿದ್ದು. 

ಪಕ್ಷ ಸಂಘಟನೆ ಜೊತೆಗೆ ಲೋಕಸಭಾ ಚುನಾವಣೆಯಲ್ಲಿ ಜೆಡಿಎಸ್ ಪಕ್ಷದ ಅಭ್ಯರ್ಥಿಯ ಗೆಲುವಿನ ಸಂಬಂಧ ಮುಖಂಡರು ಹಾಗೂ ಕಾರ್ಯಕರ್ತರು ಕೈಗೊಳ್ಳಬೇಕಾದ ಕಾರ್ಯತಂತ್ರದ ಬಗ್ಗೆ ಚರ್ಚೆ ನಡೆಸಲಾಗುವುದು ಎಂದರು.

ಬಳಿಕ ನಿಖಿಲ್ ಕುಮಾರಸ್ವಾಮಿ ಕೆ. ಹೊನ್ನಲಗೆರೆ ಗ್ರಾಮದಲ್ಲಿ ಸಂಜೆ ಪಕ್ಷದ ಕಾರ್ಯಕರ್ತರ ಸಭೆ ಏರ್ಪಡಿಸಲಾಗಿದೆ. ನಂತರ ಜಿಲ್ಲೆಯ ಉಳಿದ ಆರು ವಿಧಾನಸಭಾ ಕ್ಷೇತ್ರಗಳ ಪ್ರವಾಸ ಕುರಿತು ನಿರ್ಧಾರ ಕೈಗೊಳ್ಳಲಾಗುವುದು ಎಂದು ಸ್ಪಷ್ಟಪಡಿಸಿದರು.

ಜೆಡಿಎಸ್ ಜಿಲ್ಲಾಧ್ಯಕ್ಷ ಡಿ ರಮೇಶ್. ತಾಲೂಕು ಘಟಕದ ಅಧ್ಯಕ್ಷ ಚಿಕ್ಕ ತಿಮ್ಮೇಗೌಡ. ಕಾರ್ಯಾಧ್ಯಕ್ಷ ಮಾದನಾಯಕನಹಳ್ಳಿ ರಾಜಣ್ಣ. ಯುವ ಘಟಕದ ಅಧ್ಯಕ್ಷ ಎಂ.ಐ.ಪ್ರವೀಣ್. ಡಿಸಿಸಿ ಬ್ಯಾಂಕ್ ನಿರ್ದೇಶಕ ಪಿ.ಸಂದರ್ಶ ಮಾಜಿ ನಿರ್ದೇಶಕ ಹೊನ್ನೇಗೌಡ. ಪುರಸಭೆ ಮಾಜಿ ಅಧ್ಯಕ್ಷ ಸುರೇಶ್ ಕುಮಾರ್. ಸದಸ್ಯರಾದ ಮಹೇಶ ಪ್ರಸನ್ನ ಕುಮಾರ ಪ್ರಮೀಳಾ. ವನಿತಾ. ಮುಖಂಡರಾದ ಕೂಳಗೆರೆ ಶೇಖರ್ ಮತ್ತಿತರರು ಸಭೆಯಲ್ಲಿ ಭಾಗವಹಿಸಿದ್ದರು.

PREV
Catch up on the latest political news from Karnataka and India (ರಾಜಕೀಯ ಸುದ್ದಿ) — election results, government decisions, party updates, and in-depth political analysis on Kannada Prabha.

Recommended Stories

ಯಾವ ದೇವ್ರಿಗೆ ಪೂಜೆ ಮಾಡಿಸಿದ್ದೀರಿ? : ಮಧುಗೆ ರವಿ!
ಉತ್ತರ ಕರ್ನಾಟಕಕ್ಕೆ ₹15,000 ಕೋಟಿ : ಅಜಯ್‌