ಜೆಡಿಯು ನಾಯಕ ನಿತೀಶ್‌ ರಾಜ್ಯಸಭೆಗೆ - ಸಿಎಂ ಸ್ಥಾನಕ್ಕೆ ರಾಜೀನಾಮೆ

Published : Mar 05, 2026, 07:19 AM IST
Nitish Kumar

ಸಾರಾಂಶ

ದಿಢೀರ್ ಬೆಳವಣಿಗೆಯೊಂದರಲ್ಲಿ ಜೆಡಿಯು ನಾಯಕ, ಬಿಹಾರದ ಮುಖ್ಯಮಂತ್ರಿ ನಿತೀಶ್‌ ಕುಮಾರ್‌, ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಿ ರಾಜ್ಯಸಭೆ ಪ್ರವೇಶಕ್ಕೆ ಸಜ್ಜಾಗಿದ್ದಾರೆ. ಅವರು ಗುರುವಾರವೇ ಬಿಹಾರದಿಂದ ಎನ್‌ಡಿಎ ಅಭ್ಯರ್ಥಿಯಾಗಿ ರಾಜ್ಯಸಭೆಗೆ ನಾಮಪತ್ರ ಸಲ್ಲಿಸಲಿದ್ದಾರೆ ಎನ್ನಲಾಗಿದೆ.

 ಪಟನಾ: ದಿಢೀರ್ ಬೆಳವಣಿಗೆಯೊಂದರಲ್ಲಿ ಜೆಡಿಯು ನಾಯಕ, ಬಿಹಾರದ ಮುಖ್ಯಮಂತ್ರಿ ನಿತೀಶ್‌ ಕುಮಾರ್‌, ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಿ ರಾಜ್ಯಸಭೆ ಪ್ರವೇಶಕ್ಕೆ ಸಜ್ಜಾಗಿದ್ದಾರೆ. ಅವರು ಗುರುವಾರವೇ ಬಿಹಾರದಿಂದ ಎನ್‌ಡಿಎ ಅಭ್ಯರ್ಥಿಯಾಗಿ ರಾಜ್ಯಸಭೆಗೆ ನಾಮಪತ್ರ ಸಲ್ಲಿಸಲಿದ್ದಾರೆ ಎನ್ನಲಾಗಿದೆ.

ವಂಶಪಾರಂಪರ್ಯ ರಾಜಕೀಯ ವಿರೋಧಿಸುತ್ತಲೇ ಬಂದಿದ್ದ ನಿತೀಶ್

ಜೀವನದುದ್ದಕ್ಕೂ ವಂಶಪಾರಂಪರ್ಯ ರಾಜಕೀಯ ವಿರೋಧಿಸುತ್ತಲೇ ಬಂದಿದ್ದ ನಿತೀಶ್, ಇದೀಗ ತಮ್ಮ ಪುತ್ರ ನಿಶಾಂತ್‌ ಕುಮಾರ್‌ ರಾಜಕೀಯ ಪ್ರವೇಶಕ್ಕೆ ಅವಕಾಶ ಮಾಡಿಕೊಡುವ ನಿಟ್ಟಿನಲ್ಲಿ ಅವರು ಈ ನಿರ್ಧಾರಕ್ಕೆ ಬಂದಿದ್ದಾರೆ ಎನ್ನಲಾಗಿದೆ.

ಬಿಜೆಪಿ ಮತ್ತು ಜೆಡಿಯು ನಡುವೆ ಆದ ಒಪ್ಪಂದ

ಭವಿಷ್ಯದ ಬಿಹಾರ ರಾಜಕೀಯ ಸಂಬಂಧ ಬಿಜೆಪಿ ಮತ್ತು ಜೆಡಿಯು ನಡುವೆ ಆದ ಒಪ್ಪಂದದ ಅನ್ವಯ, ನಿತೀಶ್‌ ರಾಜೀನಾಮೆ ಬಳಿಕ ಮುಖ್ಯಮಂತ್ರಿ ಹುದ್ದೆಗೆ ಬಿಜೆಪಿಗೆ ಹೋಗಲಿದೆ. ಜೊತೆಗೆ ಇದುವರೆಗೂ ರಾಜಕೀಯದಲ್ಲಿ ಎಲ್ಲೂ ಕಾಣಿಸಿಕೊಳ್ಳದ ನಿತೀಶ್ ಪುತ್ರ ನಿಶಾಂತ್‌ ಅವರಿಗೆ ಉಪಮುಖ್ಯಮಂತ್ರಿ ಪಟ್ಟ ನೀಡುವ ಮೂಲಕ ರಾಜಕೀಯ ಪಟ್ಟು ಕಲಿಸಲು ಉಭಯ ಪಕ್ಷಗಳ ನಾಯಕ ಸಮ್ಮತಿಸಿದ್ದಾರೆ ಎನ್ನಲಾಗಿದೆ. ಮಾ.16ರಂದು ರಾಜ್ಯಸಭೆಗೆ 10 ರಾಜ್ಯಗಳ 37 ಸ್ಥಾನಕ್ಕೆ ಚುನಾವಣೆ ನಡೆಯಲಿದೆ. ಈ ಪೈಕಿ ಒಂದು ಸ್ಥಾನದಿಂದ ನಿತೀಶ್ ಸ್ಪರ್ಧಿಸಲಿದ್ದಾರೆ.

PREV
Catch up on the latest political news from Karnataka and India (ರಾಜಕೀಯ ಸುದ್ದಿ) — election results, government decisions, party updates, and in-depth political analysis on Kannada Prabha.
Read more Articles on

Recommended Stories

ರಾಜ್ಯದಲ್ಲಿ ಇ-ವಾಹನ ಕ್ಷೇತ್ರ ಅಭಿವೃದ್ಧಿಗೆ ಒತ್ತು : ಎಚ್‌.ಡಿ. ಕುಮಾರಸ್ವಾಮಿ
ರಾಮನಗರ-ಕನಕಪುರಕ್ಕೆ ಬಿಎಂಟಿಸಿ ಬಸ್ ಸಂಚಾರ