ಮೀಸಲು ವಿರುದ್ಧ ಹೋರಾಟದಲ್ಲಿ ಬಿಜೆಪಿ ಜತೆ ಗೊಂದಲವಿಲ್ಲ- ದೋಸ್ತಿಗಳ ನಡುವೆ ಮೀಸಲಾತಿ ಬೆಂಕಿ ಹಚ್ಚಲೆತ್ನ: ಎಚ್ಡಿಕೆ

Published : Mar 25, 2025, 11:19 AM IST
HD Kumaraswamy

ಸಾರಾಂಶ

ಮೀಸಲು ಧರ್ಮಾಧಾರಿತ ಅಲ್ಲ. ಅದು ಸಾಮಾಜಿಕ ನ್ಯಾಯದ ತಳಹದಿ ಮೇಲೆ ನಿಂತಿರಬೇಕು ಎಂದು ಜೆಡಿಎಸ್ ರಾಜ್ಯಾಧ್ಯಕ್ಷರೂ ಆಗಿರುವ ಕೇಂದ್ರ ಕೈಗಾರಿಕಾ ಸಚಿವ ಎಚ್‌.ಡಿ.ಕುಮಾರಸ್ವಾಮಿ ಹೇಳಿದ್ದಾರೆ.

 ಬೆಂಗಳೂರು :  ಮೀಸಲು ಧರ್ಮಾಧಾರಿತ ಅಲ್ಲ. ಅದು ಸಾಮಾಜಿಕ ನ್ಯಾಯದ ತಳಹದಿ ಮೇಲೆ ನಿಂತಿರಬೇಕು ಎಂದು ಜೆಡಿಎಸ್ ರಾಜ್ಯಾಧ್ಯಕ್ಷರೂ ಆಗಿರುವ ಕೇಂದ್ರ ಕೈಗಾರಿಕಾ ಸಚಿವ ಎಚ್‌.ಡಿ.ಕುಮಾರಸ್ವಾಮಿ ಹೇಳಿದ್ದಾರೆ.

ಮುಸ್ಲಿಮರಿಗೆ ಶೇ.4ರಷ್ಟು ಗುತ್ತಿಗೆ ಮೀಸಲು ವಿಚಾರದಲ್ಲಿನ ಹೋರಾಟದಲ್ಲಿ ಬಿಜೆಪಿ-ಜೆಡಿಎಸ್‌ ನಡುವೆ ಯಾವುದೇ ಗೊಂದಲ ಇಲ್ಲ ಎಂದೂ ಅವರು ತಿಳಿಸಿದ್ದಾರೆ.

ಜೆಡಿಎಸ್-ಬಿಜೆಪಿ ಮೈತ್ರಿ ನಡುವೆ ಮೀಸಲಾತಿ ಬೆಂಕಿ ಹಚ್ಚಲು ಹೊರಟಿದ್ದಾರೆ. ಮುಸ್ಲಿಮರಿಗೆ ಕಾಂಗ್ರೆಸ್ ಸರ್ಕಾರ ಶೇ.4ರಷ್ಟು ಗುತ್ತಿಗೆ ಮೀಸಲಾತಿ ನೀಡಿರುವ ವಿರುದ್ಧದ ಹೋರಾಟದಲ್ಲಿ ಜೆಡಿಎಸ್ ಮತ್ತು ಬಿಜೆಪಿ ನಡುವೆ ಹೊಂದಾಣಿಕೆ ಇಲ್ಲ, ಗೊಂದಲವಿದೆ ಎನ್ನುವುದು ಸತ್ಯಕ್ಕೆ ದೂರ ಎಂದು ಅವರು ಸಾಮಾಜಿಕ ಜಾಲತಾಣದ ಮೂಲಕ ಸ್ಪಷ್ಟಪಡಿಸಿದ್ದಾರೆ.

ವಿಧಾನಮಂಡಲ ಅಧಿವೇಶನ ಆರಂಭಕ್ಕೆ ಮೊದಲೇ ಬೆಂಗಳೂರಿನಲ್ಲಿ ಎನ್‌ಡಿಎ ಸಮನ್ವಯ ಸಮಿತಿ ಸಭೆ ನಡೆದು ಎಲ್ಲ ವಿಚಾರಗಳನ್ನೂ ಸಮಗ್ರವಾಗಿ ಚರ್ಚಿಸಲಾಗಿದೆ. ಸರ್ಕಾರದ ವಿರುದ್ಧ ಹೋರಾಟದ ರೂಪುರೇಷೆ ರೂಪಿಸಲಾಗಿತ್ತು. ಕಾಂಗ್ರೆಸ್ ಸರ್ಕಾರ ಕೇವಲ ಚುನಾವಣಾ ಸ್ವಾರ್ಥಕ್ಕೆ, ವೋಟ್ ಬ್ಯಾಂಕ್ ರಾಜಕೀಯಕ್ಕಾಗಿ ‘ಸಾಮಾಜಿಕ ನ್ಯಾಯದ ಆದರ್ಶ ಪರಿಕಲ್ಪನೆ’ಯಾದ ಮೀಸಲಾತಿ ವ್ಯವಸ್ಥೆ ಹಾಳು ಮಾಡುತ್ತಿದೆ. ಮೀಸಲಾತಿಯನ್ನೇ ಓಲೈಕೆ ಅಸ್ತ್ರವನ್ನಾಗಿ ಮಾಡಿಕೊಂಡು ರಾಜ್ಯದ ಜನತೆಯ ದಿಕ್ಕು ತಪ್ಪಿಸುತ್ತಿದೆ. ರಾಷ್ಟ್ರದ ಉದ್ದಗಲಕ್ಕೂ ಕಾಂಗ್ರೆಸ್ ಮೀಸಲು ಅರಾಜಕತೆ ಸೃಷ್ಟಿಸುತ್ತಿದೆ ಎಂದು ಆರೋಪಿಸಿದ್ದಾರೆ.

ಜೆಡಿಎಸ್-ಬಿಜೆಪಿ ಪಕ್ಷಗಳು ಈಗಾಗಲೇ ಒಟ್ಟಾಗಿ ಅನೇಕ ಜನಪರ ಹೋರಾಟಗಳಲ್ಲಿ ಭಾಗಿಯಾಗಿದ್ದು, ಮುಂದೆಯೂ ಹೋರಾಡುತ್ತವೆ. ಈ ಬಗ್ಗೆ ರಾಜಿ ಪ್ರಶ್ನೆಯೇ ಇಲ್ಲ. ಶೈಕ್ಷಣಿಕ, ಆರ್ಥಿಕ, ಸಾಮಾಜಿಕವಾಗಿ ದುರ್ಬಲವಾಗಿರುವ ಎಲ್ಲಾ ಸಮುದಾಯಗಳಿಗೆ ಸಮಾನ ಅವಕಾಶಗಳು, ಸೌಲಭ್ಯಗಳು ಸಿಗಬೇಕು. ಆದರೆ, ಒಂದು ನಿರ್ದಿಷ್ಟ ಸಮುದಾಯದ ತುಷ್ಟೀಕರಣ, ಬಹು ಸಮುದಾಯಗಳ ತುಚ್ಚೀಕರಣ ನ್ಯಾಯ ಸಮ್ಮತವಲ್ಲ. ಇದು ಸಂವಿಧಾನಕ್ಕೆ ಎಸಗುವ ಅಪಚಾರ ಎಂದು ಕುಮಾರಸ್ವಾಮಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

PREV
Catch up on the latest political news from Karnataka and India (ರಾಜಕೀಯ ಸುದ್ದಿ) — election results, government decisions, party updates, and in-depth political analysis on Kannada Prabha.

Recommended Stories

ಬಗೆಹರಿಸಿಕೊಳ್ಳಲು ನಮ್ಮಲ್ಲಿ ಸಮಸ್ಯೆಗಳೇ ಇಲ್ಲ : ಡಿಕೆಶಿ!
ರಾಜಣ್ಣ ನೇಮಿಸಿದ್ದು ನಾನೇ ಎಂದ ಡಿಕೆಗೆ ಸಿದ್ದು ಟಾಂಗ್‌