;Resize=(412,232))
ತಿರುವನಂತಪುರ/ಮಥುರಾ: ಎರಡನೇ ಹಂತದ ನಾಮಪತ್ರ ಸಲ್ಲಿಕೆ ಭರಾಟೆ ಗುರುವಾರ ಅಂತ್ಯಗೊಂಡಿದ್ದು, ಕೇರಳದಲ್ಲಿ ಕೇಂದ್ರ ಸಚಿವ ರಾಜೀವ್ ಚಂದ್ರಶೇಖರ್ ಹಾಗೂ ಕಾಂಗ್ರೆಸ್ ಮುಖಂಡ ಕೆ.ಸಿ. ವೇಣುಗೋಪಾಲ್ ಮತ್ತು ಉತ್ತರ ಪ್ರದೇಶದಲ್ಲಿ ನಟಿ, ಬಿಜೆಪಿ ನಾಯಕಿ ಹೇಮಾಮಾಲಿನಿ ನಾಮಪತ್ರ ಸಲ್ಲಿಸಿದ್ದಾರೆ.
ಅದೇ ರೀತಿ ಆಲಪ್ಪುಳ ಲೋಕಸಭಾ ಕ್ಷೇತ್ರದಿಂದ ಕಾಂಗ್ರೆಸ್ ಅಭ್ಯರ್ಥಿಯಾಗಿ ಎಐಸಿಸಿ ಪ್ರಧಾನ ಕಾರ್ಯದರ್ಶಿ ವೇಣುಗೋಪಾಲ್ ತಮ್ಮ ಉಮೇದುವಾರಿಕೆಯನ್ನು ಜಿಲ್ಲಾಧಿಕಾರಿಗಳಿಗೆ ಸಲ್ಲಿಸಿದರು.
ಇನ್ನು ಉತ್ತರ ಪ್ರದೇಶದ ಮಥುರಾ ಲೋಕಸಭಾ ಕ್ಷೇತ್ರದಿಂದ ಬಿಜೆಪಿ ಅರ್ಭರ್ಥಿಯಾಗಿ ಸ್ಪರ್ಧಿಸುತ್ತಿರುವ ಹೇಮಾ ಮಾಲಿನಿ ಅವರು ತಮ್ಮ ಉಮೇದುವಾರಿಕೆಯನ್ನು ಜಿಲ್ಲಾಧಿಕಾರಿಗಳಿಗೆ ಸಲ್ಲಿಸಿದರು.ಶುಕ್ರವಾರ ನಾಮಪತ್ರ ಪರಿಶೀಲನೆ ನಡೆಯಲಿದ್ದು, ಎರಡನೇ ಹಂತದ ಮತದಾನ ಏ.26ರಂದು ನಡೆಯಲಿದೆ.