ಕಾಂಗ್ರೆಸಲ್ಲಿ ನವೆಂಬರ್‌ ಕ್ರಾಂತಿ ಖಚಿತ : ಅಶೋಕ್‌

Published : Oct 28, 2025, 11:42 AM IST
R Ashok BJP

ಸಾರಾಂಶ

ರಾಜ್ಯ ಕಾಂಗ್ರೆಸ್‌ ಸರ್ಕಾರದಲ್ಲಿ ನವೆಂಬರ್‌ ಕ್ರಾಂತಿ ಖಚಿತ. ಅದಕ್ಕಾಗಿಯೇ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ದೆಹಲಿಗೆ ಹೋಗಿದ್ದಾರೆ ಎಂದು ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್‌.ಅಶೋಕ್‌ ಹೇಳಿದ್ದಾರೆ.

  ಬೆಂಗಳೂರು :  ರಾಜ್ಯ ಕಾಂಗ್ರೆಸ್‌ ಸರ್ಕಾರದಲ್ಲಿ ನವೆಂಬರ್‌ ಕ್ರಾಂತಿ ಖಚಿತ. ಅದಕ್ಕಾಗಿಯೇ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ದೆಹಲಿಗೆ ಹೋಗಿದ್ದಾರೆ ಎಂದು ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್‌.ಅಶೋಕ್‌ ಹೇಳಿದ್ದಾರೆ.

ಸೋಮವಾರ ಸಂಜೆ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಹೈಕಮಾಂಡ್‌ ಒಪ್ಪಿದರೆ ನಾನೇ ಐದು ವರ್ಷ ಸಿಎಂ ಎನ್ನುವ ಸಿದ್ದರಾಮಯ್ಯ ಹೇಳಿಕೆಯಿಂದ ಅಗ್ರಿಮೆಂಟ್‌, ಸೆಟ್ಲಮೆಂಟ್‌, ಪೇಮೆಂಟ್‌ ಆಗಿದೆ ಎನ್ನುವುದು ಖಾತ್ರಿ ಆಗಿದೆ. ನಾವು ಕ್ರಾಂತಿ ಎಂದರೆ ನಮಗೆ ತಲೆ ಸರಿಯಿಲ್ಲ ಎಂದು ಸಿದ್ದರಾಮಯ್ಯ ಹೇಳಿದ್ದರು. ಈಗ ನಿವೇ ಹೇಳಿದ್ದೀರಿ. ಈಗ ಯಾರ ತಲೆ ಸರಿ ಇಲ್ಲ ಎಂದು ಪ್ರಶ್ನಿಸಿದರು.

ಈಗ ಕಾಂಗ್ರೆಸ್‌ ನಾಯಕರೇ ಹೇಳುತ್ತಿದ್ದಾರೆ

ನವೆಂಬರ್‌ನಲ್ಲಿ ಕ್ರಾಂತಿಯಾಗಲಿದೆ ಎಂದು ನಾನು ಹೇಳಿದಾಗ ಟೀಕೆ ಮಾಡಿದ್ದರು. ಈಗ ಕಾಂಗ್ರೆಸ್‌ ನಾಯಕರೇ ಹೇಳುತ್ತಿದ್ದಾರೆ. ಹೀಗಾಗಿ ಸಿಎಂ ಬದಲಾವಣೆ ಖಚಿತ ಎಂದು ಹೇಳಿದರು.

ಮಳೆಯಿಂದಾಗಿ ಬೆಳೆ ಹಾನಿ ಪರಿಹಾರ ಇನ್ನೂ ಕೊಟ್ಟಿಲ್ಲ. ಜೊತೆಗೆ ಸೋಯಾ, ಸೂರ್ಯಕಾಂತಿ, ಉದ್ದು, ಹೆಸರು ಮೊದಲಾದ ಬೆಳೆಗಳನ್ನು ಸರ್ಕಾರ ಖರೀದಿಸಬೇಕಿತ್ತು. ಈ ಕುರಿತು ಕೂಡಲೇ ಸರ್ಕಾರ ಕ್ರಮ ವಹಿಸಬೇಕು. ಬೆಲೆ ಕುಸಿದಿರುವ ಈರುಳ್ಳಿಯನ್ನು ಕೂಡಲೇ ಖರೀದಿ ಮಾಡಬೇಕು ಎಂದು ಆಗ್ರಹಿಸಿದರು.

ಅನುದಾನ ಬಳಕೆ ಆಗಿಲ್ಲ:

2025-26ನೇ ಆರ್ಥಿಕ ಸಾಲಿನಲ್ಲಿ 6 ತಿಂಗಳು ಕಳೆದು ಹೋದರೂ ಶೇ.30ರಷ್ಟು ಮಾತ್ರ ಅನುದಾನ ಬಳಕೆಯಾಗಿದೆ. ಆರ್‌ಎಸ್‌ಎಸ್‌ ಬಗ್ಗೆ ಟೀಕೆ ಮಾಡುವ ಸಚಿವ ಪ್ರಿಯಾಂಕ್‌ ಖರ್ಗೆ ಅವರ ಇಲಾಖೆಗಳ ಪ್ರದರ್ಶನ ಅತ್ಯಂತ ಕಳಪೆಯಾಗಿದ್ದು, ಆರ್‌ಡಿಪಿಆರ್ ಇಲಾಖೆಯಲ್ಲಿ ಕೇವಲ ಶೇ.11.02, ಐಟಿ-ಬಿಟಿ ಇಲಾಖೆಯಲ್ಲಿ ಕೇವಲ ಶೇ.10.86ರಷ್ಟು ಅನುದಾನ ಬಳಕೆಯಾಗಿದೆ. ಕಂದಾಯ ಇಲಾಖೆಯಲ್ಲಿ ಶೇ.46, ಪಶುಸಂಗೋಪನೆಯಲ್ಲಿ ಶೇ.44, ಗ್ರಾಮೀಣಾಭಿವೃದ್ಧಿಯಲ್ಲಿ ಶೇ.11 ಹೀಗೆ ಎಲ್ಲ ಇಲಾಖೆಗಳಲ್ಲಿ ಅನುದಾನ ಬಳಕೆಯೇ ಆಗಿಲ್ಲ ಎಂದು ಟೀಕಿಸಿದರು.

ಈಗಾಗಲೇ ನಿವೇಶನ ಪಡೆದವರಿಗೆ ಎ ಖಾತಾಗೆ ವರ್ಗಾವಣೆ ಮಾಡಿಸಲು ಹಣ ಪಾವತಿಸಬೇಕು. ಇದನ್ನು ಕ್ರಾಂತಿ ಎನ್ನುತ್ತಿದ್ದಾರೆ. ಆದ್ದರಿಂದ ಜನ ಎಚ್ಚರಿಕೆಯಿಂದ ಇರಬೇಕು. ಇದು ಹಣ ವಸೂಲಿ ಮಾಡುವ ಸ್ಕೀಮ್‌ ಎಂದು ಪ್ರಶ್ನೊಂದಕ್ಕೆ ಆರ್‌.ಅಶೋಕ್‌ ಪ್ರತಿಕ್ರಿಯಿಸಿದರು.

PREV
Read more Articles on

Recommended Stories

ಯಾವುದೇ ಕ್ರಾಂತಿಗೆ ಕಾಂಗ್ರೆಸ್‌ ಹೈಕಮಾಂಡ್‌ ಬಿಡಲ್ಲ : ಸತೀಶ್‌
ಅಸ್ಸಾಂನಲ್ಲಿ ಯಾವ ಪ್ರತಿಭೆ ಇದೆ ಎಂದು ಹೂಡಿಕೆ? : ಪ್ರಿಯಾಂಕ್‌