ಪಂಜಾಬ್‌ ಸಿಎಂಗೆ ಆಲ್ಕೋಹಾಲ್‌ ಟೆಸ್ಟ್ ಮಾಡಿಸಲು ವಿಧಾನಸಭೇಲಿ ಪ್ರತಿಪಕ್ಷ ಸದಸ್ಯರಿಂದ ಬಿಗಿಪಟ್ಟು!

Published : May 02, 2026, 09:53 AM IST
Bhagwant Mann

ಸಾರಾಂಶ

ಪಂಜಾಬ್‌ನ ಆಮ್‌ ಆದ್ಮಿ ಪಕ್ಷದ ಸರ್ಕಾರದ ಮುಖ್ಯಮಂತ್ರಿ ಭಗವಂತ್‌ ಮಾನ್‌ ಮದ್ಯ ಸೇವಿಸಿ ಸದನಕ್ಕೆ ಬರುತ್ತಾರೆ, ಈ ಹಿನ್ನೆಲೆಯಲ್ಲಿ ಅವರನ್ನು ಮದ್ಯಪಾನ ಪತ್ತೆ ಪರೀಕ್ಷೆ (ಆಲ್ಕೋಹಾಲ್‌ ಟೆಸ್ಟ್‌)ಗೆ ಒಳಪಡಿಸಬೇಕು ಎಂದು ವಿಪಕ್ಷಗಳು ಆಗ್ರಹಿಸಿದ ಅಪರೂಪದ ಘಟನೆಗೆ ಪಂಜಾಬ್‌ ವಿಧಾನಸಭೆ ಶುಕ್ರವಾರ ಸಾಕ್ಷಿಯಾಗಿದೆ.

ಚಂಡೀಗಢ: ಪಂಜಾಬ್‌ನ ಆಮ್‌ ಆದ್ಮಿ ಪಕ್ಷದ ಸರ್ಕಾರದ ಮುಖ್ಯಮಂತ್ರಿ ಭಗವಂತ್‌ ಮಾನ್‌ ಮದ್ಯ ಸೇವಿಸಿ ಸದನಕ್ಕೆ ಬರುತ್ತಾರೆ, ಈ ಹಿನ್ನೆಲೆಯಲ್ಲಿ ಅವರನ್ನು ಮದ್ಯಪಾನ ಪತ್ತೆ ಪರೀಕ್ಷೆ (ಆಲ್ಕೋಹಾಲ್‌ ಟೆಸ್ಟ್‌)ಗೆ ಒಳಪಡಿಸಬೇಕು ಎಂದು ವಿಪಕ್ಷಗಳು ಆಗ್ರಹಿಸಿದ ಅಪರೂಪದ ಘಟನೆಗೆ ಪಂಜಾಬ್‌ ವಿಧಾನಸಭೆ ಶುಕ್ರವಾರ ಸಾಕ್ಷಿಯಾಗಿದೆ.

1 ದಿನದ ವಿಶೇಷ ಅಧಿವೇಶನ

ಕಾರ್ಮಿಕರ ದಿನದ ಹಿನ್ನೆಲೆಯಲ್ಲಿ 1 ದಿನದ ವಿಶೇಷ ಅಧಿವೇಶನವನ್ನು ಸರ್ಕಾರ ಕರೆದಿತ್ತು. ಈ ವೇಳೆ ಕಾಂಗ್ರೆಸ್‌ ಶಾಸಕ ಸುಖ್‌ಪಾಲ್‌ ಸಿಂಗ್‌ ಖಾರಿಯಾ ಅವರು ಅಧಿವೇಶನದಲ್ಲಿ ಮೊಬೈಲ್‌ ಬಳಸುತ್ತಿದ್ದುದನ್ನು ಗಮನಿಸಿದ ಮುಖ್ಯಮಂತ್ರಿ ಭಗವಂತ್‌ ಮಾನ್‌ ಅವರು ಆಕ್ಷೇಪ ವ್ಯಕ್ತಪಡಿಸಿದರು. ಈ ವೇಳೆ ಇಬ್ಬರ ನಡುವೆ ತೀವ್ರ ಮಾತಿನ ಚಕಮಕಿ ನಡೆಯಿತು.

ಸಾರ್ವಜನಿಕ ಡೋಪ್‌ ಟೆಸ್ಟ್‌ಗೆ ಆಗ್ರಹ

ಈ ವೇಳೆ ಖಾರಿಯಾ, ಮುಖ್ಯಮಂತ್ರಿಗಳು ಮದ್ಯಪಾನ ಮಾಡಿ ಅಧಿವೇಶನಕ್ಕೆ ಬರುತ್ತಾರೆ ಎಂದು ಆರೋಪಿಸಿದರು. ಇದಕ್ಕೆ ಪ್ರತಿಪಕ್ಷ ನಾಯಕ ಪ್ರತಾಪ್‌ ಸಿಂಗ್‌ ಬಾಜ್ವಾ ಅವರೂ ಬೆಂಬಲಿಸಿ, ಸಿಎಂ ಸೇರಿ ಎಲ್ಲಾ ಶಾಸಕರು ಮದ್ಯಪಾನ ಪತ್ತೆ ಪರೀಕ್ಷೆಗೆ ಒಳಪಡಬೇಕು ಎಂದು ಒತ್ತಾಯಿಸಿದರು. ಈ ಬೇಡಿಕೆಗೆ ಅಕಾಲಿದಳವೂ ಬೆಂಬಲ ವ್ಯಕ್ತಪಡಿಸಿ ಸಾರ್ವಜನಿಕ ಡೋಪ್‌ ಟೆಸ್ಟ್‌ಗೆ ಆಗ್ರಹಿಸಿತು.

ಗದ್ದಲ ಹಿನ್ನೆಲೆಯಲ್ಲಿ ಕೆಲಕಾಲ ಕಲಾಪವನ್ನು ಮುಂದೂಡಿದರೂ ಮತ್ತೆ ಪ್ರತಿಪಕ್ಷಗಳಿಂದ ಅದೇ ಬೇಡಿಕೆ ಮಂಡನೆಯಾಯಿತು. ಆದರೆ, ಈ ಬೇಡಿಕೆಯನ್ನು ಸ್ಪೀಕರ್‌ ಕುಲ್ತಾರ್‌ ಸಿಂಗ್‌ ಸಂಧ್ವಾನ್‌ ತಿರಸ್ಕರಿಸಿದ್ದು, ಕಾಂಗ್ರೆಸ್‌ ನೇತೃತ್ವದಲ್ಲಿ ಪ್ರತಿಪಕ್ಷಗಳು ಸಭಾತ್ಯಾಗ ಮಾಡಿ ಆಕ್ರೋಶ ಹೊರಹಾಕಿದವು.

PREV
Catch up on the latest political news from Karnataka and India (ರಾಜಕೀಯ ಸುದ್ದಿ) — election results, government decisions, party updates, and in-depth political analysis on Kannada Prabha.
Read more Articles on

Recommended Stories

ಬಂಗಾಳದಲ್ಲಿ ಬಿಜೆಪಿ ಗೆದ್ರೆ ಸಂಕಷ್ಟ : ಬಾಂಗ್ಲಾ ಎಂಪಿ!
ಕರ್ನಾಟಕ ಸೇರಿ 9 ಗ್ಯಾರಂಟಿ ರಾಜ್ಯಗಳಿಗೆ ಕೇಂದ್ರ ಎಚ್ಚರಿಕೆ