ಮಲೈ ಮಹದೇಶ್ವರ ಬೆಟ್ಟಕ್ಕೆ ದ್ವಿಚಕ್ರ ವಾಹನ ನಿರ್ಬಂಧಿಸಿ ಆದೇಶ

KannadaprabhaNewsNetwork | Published : Oct 12, 2023 12:00 AM

ಸಾರಾಂಶ

ಮಹಾಲಯ ಅಮಾವಾಸ್ಯೆ ಜಾತ್ರಾ ಹಿನ್ನೆಲೆಯಲ್ಲಿ ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕಿನ ಮಲೈ ಮಹದೇಶ್ವರ ಬೆಟ್ಟಕ್ಕೆ ಅ. 11ರ ಸಂಜೆ 6 ಗಂಟೆಯಿಂದ ಅ. 15ರ ಸಂಜೆ 7 ಗಂಟೆಯವರೆಗೆ ದ್ವಿಚಕ್ರ ವಾಹನಗಳಲ್ಲಿ ತೆರಳವುದನ್ನು ತಾತ್ಕಾಲಿಕವಾಗಿ ನಿರ್ಬಂಧಿಸಿ ಜಿಲ್ಲಾಧಿಕಾರಿ ಶಿಲ್ಪಾ ನಾಗ್ ಅವರು ಆದೇಶ ಹೊರಡಿಸಿದ್ದಾರೆ.
ಚಾಮರಾಜನಗರ: ಮಹಾಲಯ ಅಮಾವಾಸ್ಯೆ ಜಾತ್ರಾ ಹಿನ್ನೆಲೆಯಲ್ಲಿ ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕಿನ ಮಲೈ ಮಹದೇಶ್ವರ ಬೆಟ್ಟಕ್ಕೆ ಅ. 11ರ ಸಂಜೆ 6 ಗಂಟೆಯಿಂದ ಅ. 15ರ ಸಂಜೆ 7 ಗಂಟೆಯವರೆಗೆ ದ್ವಿಚಕ್ರ ವಾಹನಗಳಲ್ಲಿ ತೆರಳವುದನ್ನು ತಾತ್ಕಾಲಿಕವಾಗಿ ನಿರ್ಬಂಧಿಸಿ ಜಿಲ್ಲಾಧಿಕಾರಿ ಶಿಲ್ಪಾ ನಾಗ್ ಅವರು ಆದೇಶ ಹೊರಡಿಸಿದ್ದಾರೆ. ಮಲೈ ಮಹದೇಶ್ವರ ಬೆಟ್ಟದಲ್ಲಿ ಅ. 11 ರಿಂದ 15ರವರೆಗೆ ಜರುಗಲಿರುವ ಮಹಾಲಯ ಅಮಾವಾಸ್ಯೆ ಜಾತ್ರಾ ಹಿನ್ನೆಲೆಯಲ್ಲಿ ಜಿಲ್ಲೆ, ಹೊರಜಿಲ್ಲೆಗಳಿಂದ ಹಾಗೂ ಹೊರ ರಾಜ್ಯಗಳಿಂದ ಸುಮಾರು 1.5ರಿಂದ 2 ಲಕ್ಷಕ್ಕೂ ಅಧಿಕ ಭಕ್ತಾಧಿಗಳು ಸೇರುವ ಸಂಭವವಿದ್ದು, ವಾಹನ ದಟ್ಟಣೆ ಹೆಚ್ಚಾಗುವುದರಿಂದ ಸದರಿ ರಸ್ತೆಯು ಅರಣ್ಯ ಪ್ರದೇಶ ಹಾಗೂ ತುಂಬಾ ಕಡಿದಾದ ತಿರುವುಗಳಿಂದ ಕೂಡಿದ್ದು, ರಸ್ತೆಯ ಸಂಚಾರದಲ್ಲಿ ವಾಹನಗಳ ದಟ್ಟಣೆ ಉಂಟಾಗಿ ಅಪಘಾತಗಳು ಸಂಭವಿಸುವ ಸಾಧ್ಯತೆ ಇದೆ. ಆದ್ದರಿಂದ ಕರ್ನಾಟಕ ಮೋಟಾರು ವಾಹನಗಳ ಕಾಯ್ದೆ, ನಿಯಮಾವಳಿ ಹಾಗೂ ಸಂಚಾರಿ ನಿಯಂತ್ರಣ ಕಾಯ್ದೆ ಅನ್ವಯ ಮಲೈ ಮಹದೇಶ್ವರ ಬೆಟ್ಟಕ್ಕೆ ದ್ವಿಚಕ್ರ ವಾಹನಗಳಲ್ಲಿ ತೆರಳುವುದನ್ನು ಅ. 11ರ ಸಂಜೆ 6 ಗಂಟೆಯಿಂದ ಅ. 15ರ ಸಂಜೆ 7 ಗಂಟೆಯವರೆಗೆ ತಾತ್ಕಾಲಿಕವಾಗಿ ನಿರ್ಬಂಧಿಸಲಾಗಿದೆ ಎಂದು ಜಿಲ್ಲಾಧಿಕಾರಿ ಶಿಲ್ಪಾ ನಾಗ್ ಅವರು ಆದೇಶದಲ್ಲಿ ತಿಳಿಸಿದ್ದಾರೆ. -----------------

Share this article