ಸಮೀಕ್ಷೆಯ ಮೂಲಪ್ರತಿ ನನ್ನ ಬಳಿ ಇಲ್ಲ- ಸಂಪುಟದಲ್ಲಿ ಯಾರೂ ವಿರೋಧಿಸಿಲ್ಲ : ಸಿಎಂ ತಿರುಗೇಟು

KannadaprabhaNewsNetwork |  
Published : Apr 21, 2025, 01:31 AM ISTUpdated : Apr 21, 2025, 04:17 AM IST
Siddaramaiah at kalaburagi

ಸಾರಾಂಶ

‘ಸಾಮಾಜಿಕ, ಶೈಕ್ಷಣಿಕ ಮತ್ತು ಆರ್ಥಿಕ ಸಮೀಕ್ಷೆಯ ಮೂಲಪ್ರತಿ ನನ್ನ ಬಳಿ ಇಲ್ಲ. ವಿರೋಧ ಪಕ್ಷದ ನಾಯಕ ಆರ್.ಅಶೋಕ್ ಅವರು ಸುಳ್ಳು ಹೇಳುತ್ತಿದ್ದಾರೆ’ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪಷ್ಟಪಡಿಸಿದ್ದಾರೆ.

 ಬೆಳಗಾವಿ‘ ಸಾಮಾಜಿಕ, ಶೈಕ್ಷಣಿಕ ಮತ್ತು ಆರ್ಥಿಕ ಸಮೀಕ್ಷೆಯ ಮೂಲಪ್ರತಿ ನನ್ನ ಬಳಿ ಇಲ್ಲ. ವಿರೋಧ ಪಕ್ಷದ ನಾಯಕ ಆರ್.ಅಶೋಕ್ ಅವರು ಸುಳ್ಳು ಹೇಳುತ್ತಿದ್ದಾರೆ’ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪಷ್ಟಪಡಿಸಿದ್ದಾರೆ.

ಬೆಳಗಾವಿಯ ಸಾಂಬ್ರಾ ವಿಮಾನ ನಿಲ್ದಾಣದಲ್ಲಿ ಭಾನುವಾರ ಸುದ್ದಿಗಾರರೊಂದಿಗೆ ಅವರು ಮಾತನಾಡಿದರು. ಸಾಮಾಜಿಕ, ಶೈಕ್ಷಣಿಕ ಮತ್ತು ಆರ್ಥಿಕ ಸಮೀಕ್ಷೆಯ ಮೂಲಪ್ರತಿ ಮುಖ್ಯಮಂತ್ರಿಯವರ ಬಳಿಯಿದೆ ಎಂಬ ಆರ್.ಅಶೋಕ್ ಆರೋಪಕ್ಕೆ ಪ್ರತಿಕ್ರಿಯಿಸಿದ ಸಿಎಂ, ಅಶೋಕ್ ಅವರು ಯಾವತ್ತಾದರೂ ಸತ್ಯ ಹೇಳಿದ್ದಾರೆಯೇ?. ಅವರು ಯಾವಾಗಲೂ ಸುಳ್ಳೇ ಹೇಳುವುದು. ಮೂಲಪ್ರತಿ ನನ್ನ ಬಳಿಯಿರಲು ಹೇಗೆ ಸಾಧ್ಯ ಎಂದು ಪ್ರಶ್ನಿಸಿದರು. ಅಲ್ಲದೆ, ಈ ಸಂಬಂಧ ರಾಹುಲ್ ಗಾಂಧಿಯವರಿಗೆ ನಾವು ಪತ್ರ ಬರೆದಿಲ್ಲ. ಆದರೆ, ಅವರೊಂದಿಗೆ ಚರ್ಚೆ ಮಾಡಿ ಸಚಿವ ಸಂಪುಟ ಸಭೆಯಲ್ಲಿ ಸಮೀಕ್ಷೆಯ ವರದಿಯನ್ನು ಮಂಡಿಸಿದ್ದೇವೆ ಎಂದು ಸ್ಪಷ್ಟಪಡಿಸಿದರು.

ಮುಸಲ್ಮಾನರು, ಹಿಂದುಳಿದವರಿಗೆ ಮಾತ್ರವಲ್ಲದೆ, ಎಲ್ಲಾ ಧರ್ಮ, ಜಾತಿಯ ಬಡವರಿಗೆ ಶಿಕ್ಷಣ ಸಿಗಬೇಕು. ಅವರಿಗೆ ಸಾಮಾಜಿಕ, ಆರ್ಥಿಕ ಶಕ್ತಿ ತುಂಬಬೇಕು. ಇದೇ ನಮ್ಮ ಗುರಿ. ಯಾವ ಜಾತಿಗೂ ಅನ್ಯಾಯವಾಗಬಾರದು ಎನ್ನುವುದು ಸರ್ಕಾರದ ಉದ್ದೇಶ ಎಂದರು.

ಇದು ಸಾಮಾಜಿಕ, ಶೈಕ್ಷಣಿಕ ಮತ್ತು ಆರ್ಥಿಕ ಸಮೀಕ್ಷೆ. ಸಂವಿಧಾನ ಜಾರಿಯಾಗಿ 75 ವರ್ಷಗಳಾಗಿದ್ದರೂ ಬಡವ ಬಡವನಾಗಿಯೇ ಉಳಿಯಬೇಕೆ?. ಸಮಾನತೆ ಬೇಡವೇ?, ಜಾತಿಗೆ ಅಂಟಿಕೊಂಡೇ ಇರಬೇಕೆ? ಎಂದು ಸಿದ್ದರಾಮಯ್ಯ ಪ್ರಶ್ನಿಸಿದರು.ಕಾಂಗ್ರೆಸ್ ಶಾಸಕರೇ ಈ ಬಗ್ಗೆ ವಿರೋಧ ವ್ಯಕ್ತಪಡಿಸಿರುವ ಬಗ್ಗೆ ಪ್ರತಿಕ್ರಿಯಿಸಿ, ಸಚಿವ ಸಂಪುಟ ಸಭೆಯಲ್ಲಿ ಯಾರೂ ಈ ಬಗ್ಗೆ ವಿರೋಧ ವ್ಯಕ್ತಪಡಿಸಿ ಜೋರಾಗಿ ಮಾತನಾಡಿಲ್ಲ. ಸಮೀಕ್ಷೆ ಓದಿಕೊಂಡು ಅಭಿಪ್ರಾಯ ತಿಳಿಸುವಂತೆ ಸೂಚಿಸಲಾಗಿದ್ದು, ಸಚಿವರು ಅಭಿಪ್ರಾಯ ತಿಳಿಸಿದ ನಂತರ ಪುನಃ ಸಚಿವ ಸಂಪುಟ ಸಭೆಯಲ್ಲಿ ಚರ್ಚೆ ಮಾಡಿ ಅಂತಿಮ ತೀರ್ಮಾನಕ್ಕೆ ಬರಲಾಗುವುದು ಎಂದು ತಿಳಿಸಿದರು.

PREV

Recommended Stories

ರಾಹುಲ್‌ ವಿರುದ್ಧ 5ಕ್ಕೆ ಬಿಜೆಪಿ ಧರಣಿ : ಬಿವೈವಿ
ಸಂಘರ್ಷ ಬಿಟ್ಟು ಒಳಮೀಸಲು ಜಾರಿ : ಪರಂ ನೇತೃತ್ವದ ಸಭೆ