''ಕರ್ನಾಟಕದ ಸಚಿವರೂ ಸೇರಿ 25ಕ್ಕೂ ಹೆಚ್ಚು ಕಾಂಗ್ರೆಸ್‌ ಶಾಸಕರು ಬಿಜೆಪಿಯತ್ತ''

Published : Oct 13, 2026, 07:56 AM IST
BJP Congress

ಸಾರಾಂಶ

ರಾಜ್ಯದಲ್ಲಿ ಯಾವುದೇ ಕ್ಷಣದಲ್ಲಿ ವಿಧಾನಸಭಾ ಚುನಾವಣೆ ನಡೆದರೂ ಈಗಿನ ಕೆಲ ಸಚಿವರೂ ಸೇರಿ 25ಕ್ಕೂ ಹೆಚ್ಚು ಶಾಸಕರು ಕಾಂಗ್ರೆಸ್ ತೊರೆದು ಬಿಜೆಪಿಗೆ ಸೇರಲು ತುದಿಗಾಲ ಮೇಲೆ ನಿಂತಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಹೇಳಿದ್ದಾರೆ.

ಬೆಂಗಳೂರು : ರಾಜ್ಯದಲ್ಲಿ ಯಾವುದೇ ಕ್ಷಣದಲ್ಲಿ ವಿಧಾನಸಭಾ ಚುನಾವಣೆ ನಡೆದರೂ ಈಗಿನ ಕೆಲ ಸಚಿವರೂ ಸೇರಿ 25ಕ್ಕೂ ಹೆಚ್ಚು ಶಾಸಕರು ಕಾಂಗ್ರೆಸ್ ತೊರೆದು ಬಿಜೆಪಿಗೆ ಸೇರಲು ತುದಿಗಾಲ ಮೇಲೆ ನಿಂತಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಹೇಳಿದ್ದಾರೆ.

ಸೋಮವಾರ ಪಕ್ಷದ ಕಚೇರಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ, ಕಾಂಗ್ರೆಸ್ಸಿನ ಸಚಿವರು ಹಾಗೂ ಹಲವು ಶಾಸಕರು ಬಿಜೆಪಿಗೆ ಸೇರುವಂಥ ವಾತಾವರಣ ಈಗಾಗಲೇ ನಿರ್ಮಾಣವಾಗಿದೆ. ಕಾಂಗ್ರೆಸ್‌‍ನ ಆಂತರಿಕ ಬೆಳವಣಿಗೆಗಳು ಮತ್ತು ಅಧಿಕಾರದ ಪೈಪೋಟಿಯ ಹಿನ್ನೆಲೆಯಲ್ಲಿ ಮುಂದಿನ ದಿನಗಳಲ್ಲಿ ರಾಜ್ಯ ರಾಜಕಾರಣದಲ್ಲಿ ಮಹತ್ವದ ಬದಲಾವಣೆಗಳು ಸಂಭವಿಸಬಹುದು ಎಂದರು.

ಅರಾಜಕತೆ ಸೃಷ್ಟಿಗೆ ಕೈ ಪ್ರಯತ್ನ:

ಕಳೆದ ಬಾರಿಯ ಚುನಾವಣೆಯಲ್ಲಿ ಜನ ಯಾಮಾರಿಸಿ ಯುಪಿಎಗೆ ಒಂದಷ್ಟು ಸ್ಥಾನ ನೀಡಿದ್ದರು. ಆದರೆ ಮುಂದಿನ ಬಾರಿ ಹಾಗಾಗಲು ಸಾಧ್ಯವೇ ಇಲ್ಲ. ಹಿಂದೆ 50-60 ಸಂಸದರು ಕಾಂಗ್ರೆಸ್‌ನಿಂದ ಗೆದ್ದಿದ್ದರು. ರಾಹುಲ್ ಗಾಂಧಿ ಅವರಿಂದ ಪಕ್ಷಕ್ಕೆ ಮುಂದಿನ ಬಾರಿ ಸೀಟು ಕಡಿಮೆಯಾಗಲಿದೆ ಎಂದು ಹೇಳಿದರು.

ದೇಶದಲ್ಲಿ ಅರಾಜಕತೆ ಸೃಷ್ಟಿಸಲು ಕಾಂಗ್ರೆಸ್ ಯತ್ನಿಸುತ್ತಿದೆ

ದೇಶದಲ್ಲಿ ಅರಾಜಕತೆ ಸೃಷ್ಟಿಸಲು ಕಾಂಗ್ರೆಸ್ ಯತ್ನಿಸುತ್ತಿದೆ. ಆ ಪಕ್ಷ ಭ್ರಮನಿರಸನಗೊಂಡಿದೆ. ಬಾಂಗ್ಲಾದೇಶ ಮತ್ತು ಶ್ರೀಲಂಕಾದಲ್ಲಿ ಹೇಗೆ ಬೇರೆ ಬೇರೆ ರೀತಿ ಯುವಕರಿಂದ ಅರಾಜಕತೆ ಆಯಿತೋ ಅದೇ ರೀತಿ ರಾಜ್ಯದಲ್ಲೂ ಆಗಲಿದೆ ಎಂದು ಕಾಂಗ್ರೆಸ್ ಮುಖಂಡರು ಹೇಳಿದ್ದಾರೆ. ಹೇಗಾದರೂ ಮಾಡಿ ಈ ದೇಶದಲ್ಲಿ ಅರಾಜಕತೆ ಸೃಷ್ಟಿಸಲು ಕಾಂಗ್ರೆಸ್ ಷಡ್ಯಂತ್ರ ಮತ್ತು ಪಿತೂರಿ ಮಾಡುತ್ತಿದೆ. ಇದನ್ನೆಲ್ಲ ದೇಶದ ಜನ ಒಪ್ಪಲ್ಲ ಎಂದು ನುಡಿದರು.

ಕಾಂಗ್ರೆಸ್ ಪಕ್ಷಕ್ಕೆ ಸ್ವಲ್ವವಾದರೂ ಮಾನ ಮರ್ಯಾದೆ ಇದ್ದರೆ, ತಾಕತ್ ಇದ್ದರೆ ದೇಶದ ಮತದಾರರ ವಿಶ್ವಾಸ ಗೆಲ್ಲುವ ಕೆಲಸ ಮಾಡಲಿ. ಜನರ ವಿಶ್ವಾಸಗಳಿಸಿ ದೇಶ ಮತ್ತು ರಾಜ್ಯದಲ್ಲಿ ಅಧಿಕಾರಕ್ಕೆ ಬರಲಿ ಎಂದು ಸವಾಲು ಹಾಕಿದರು. ಅರಾಜಕತೆ ಸೃಷ್ಟಿಸಿ ಒಂದು ಸುಳ್ಳನ್ನು ನೂರು ಬಾರಿ ಹೇಳಿ ಗೊಂದಲದ ವಾತಾವರಣದಿಂದ ಏನೂ ಸಾಧನೆ ಮಾಡಲು ಸಾಧ್ಯವಿಲ್ಲ ಎಂದರು.

PREV
Catch up on the latest political news from Karnataka and India (ರಾಜಕೀಯ ಸುದ್ದಿ) — election results, government decisions, party updates, and in-depth political analysis on Kannada Prabha.
Read more Articles on

Recommended Stories

ನಮ್ಮ ಸಂಪರ್ಕಕ್ಕೆ ಜ್ಞಾನೇಶ್ ಯತ್ನ : ರಾಹುಲ್‌ ಬಾಂಬ್
ಸಿಇಸಿ ವಜಾ, ಎಸ್‌ಐಆರ್‌ ರದ್ದು ಕೋರಿ ವಿಪಕ್ಷಗಳು ಸುಪ್ರೀಂಗೆ