ಕನ್ನಡಪ್ರಭ ವಾರ್ತೆ ಬೆಂಗಳೂರು
ಬಿಜೆಪಿಯ ನಿಜವಾದ ಶಕ್ತಿಯೇ ಪಕ್ಷದ ನಿಷ್ಠಾವಂತ ಕಾರ್ಯಕರ್ತರು. ಹಲವು ಬಾರಿ ಎಚ್ಚರಿಕೆ ನೀಡಲಾಗಿದ್ದರೂ ಪಕ್ಷ ವಿರೋಧಿ ಚಟುವಟಿಕೆಗಳನ್ನು ಮುಂದುವರೆಸಿದ್ದ ಎಸ್.ಟಿ.ಸೋಮಶೇಖರ್ ಮತ್ತು ಶಿವರಾಮ ಹೆಬ್ಬಾರ್ ಅವರನ್ನು ಪಕ್ಷದಿಂದ ಉಚ್ಚಾಟಿಸುವ ನಿರ್ಧಾರವನ್ನು ಕೇಂದ್ರ ಶಿಸ್ತು ಸಮಿತಿ ಕೈಗೊಂಡಿದೆ. ಪಕ್ಷದ ಎಲ್ಲ ನಮ್ಮ ನಿಷ್ಠಾವಂತ ನಾಯಕರು, ಪದಾಧಿಕಾರಿಗಳು ಹಾಗೂ ಕಾರ್ಯಕರ್ತರು ಇಂಥ ಯಾವುದೇ ಬೆಳವಣಿಗೆಗಳಿಂದ ವಿಚಲಿತರಾಗದೆ ಪಕ್ಷ ಸಂಘಟನೆಯ ಕಾರ್ಯದಲ್ಲಿ ನಿರತರಾಗಿದ್ದಾರೆ ಎಂದು ಪ್ರಕಟಣೆ ಮೂಲಕ ತಿಳಿಸಿದ್ದಾರೆ.