ಹಣ ನೀಡಿದರೆ ವಸತಿ’ ಪಾಟೀಲ್ ಆರೋಪ ಸಂಪೂರ್ಣ ಸುಳ್ಳು: ಡಿಕೆಶಿ

Published : Jun 23, 2025, 10:38 AM IST
DK Shivakumar

ಸಾರಾಂಶ

ರಾಜೀವ್ ಗಾಂಧಿ ವಸತಿ ಯೋಜನೆಯಲ್ಲಿ ದುಡ್ಡು ಪಡೆದು ವಸತಿ ನೀಡಿದ್ದಾರೆ ಎಂದು ಅಳಂದ ವಿಧಾನಸಭಾ ಕ್ಷೇತ್ರದ ಶಾಸಕ ಬಿ.ಆರ್.ಪಾಟೀಲ್ ಅವರ ಆರೋಪ ಸುಳ್ಳು ಎಂದು ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಹೇಳಿದ್ದಾರೆ.

 ಕನಕಪುರ : ರಾಜೀವ್ ಗಾಂಧಿ ವಸತಿ ಯೋಜನೆಯಲ್ಲಿ ದುಡ್ಡು ಪಡೆದು ವಸತಿ ನೀಡಿದ್ದಾರೆ ಎಂದು ಅಳಂದ ವಿಧಾನಸಭಾ ಕ್ಷೇತ್ರದ ಶಾಸಕ ಬಿ.ಆರ್.ಪಾಟೀಲ್ ಅವರ ಆರೋಪ ಸುಳ್ಳು ಎಂದು ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಹೇಳಿದ್ದಾರೆ. ರಾಮನಗರ ಜಿಲ್ಲೆ ಕನಕಪುರ ಪಟ್ಟಣದಲ್ಲಿ ಭಾನುವಾರ ಸುದ್ದಿಗಾರರ ಜೊತೆ ಅವರು ಮಾತನಾಡಿದರು. 

ದುಡ್ಡು ಪಡೆದು ಮನೆ ನೀಡಿದ್ದಾರೆ ಎನ್ನುವ ಶಾಸಕ ಬಿ.ಆರ್.ಪಾಟೀಲ್ ಅವರ ಆರೋಪದ ಬಗ್ಗೆ ಮಾಧ್ಯಮಗಳ ಪ್ರಶ್ನೆಗೆ ಉತ್ತರಿಸಿದ ಡಿಸಿಎಂ, ಇದೆಲ್ಲವೂ ಸುಳ್ಳು. ಯಾರೋ ಒಬ್ಬ ಹೇಳಿದರೆ ಇದೆಲ್ಲವೂ ಆಗುತ್ತದೆಯೇ? ನಾನು ಅಥವಾ ನೀವು ಬಂದು ಗ್ರಾಮಸಭೆಯಲ್ಲಿ ಮನೆ ಕೇಳಿದ ತಕ್ಷಣ ಕೊಡಲಾಗುತ್ತದೆಯೇ? ಮನೆ ನೀಡಲು ತೀರ್ಮಾನ ಮಾಡುವವರು ಗ್ರಾಮ ಪಂಚಾಯಿತಿ, ಮುನಿಸಿಪಾಲಿಟಿಯವರು.

 ಎಲ್ಲೆಲ್ಲಿ ಮನೆ ನೀಡಬೇಕೋ ಆಯಾಯ ಸ್ಥಳೀಯ ಸಂಸ್ಥೆಗಳು ತೀರ್ಮಾನ ಮಾಡುತ್ತಾರೆ. ನಾವು ತೀರ್ಮಾನ ಮಾಡಲು ಆಗುತ್ತದೆಯೇ ಎಂದು ಪ್ರಶ್ನಿಸಿದರು.

ಬಿ.ಆರ್.ಪಾಟೀಲ್ ಅವರಿಗೆ ಈ ಬಗ್ಗೆ ಪೂರ್ಣ ಮಾಹಿತಿ ತಿಳಿದಿದೆಯೋ, ಇಲ್ಲವೊ ಗೊತ್ತಿಲ್ಲ. ಯಾವುದೇ ರೀತಿಯ ಅಕ್ರಮ ನಡೆದಿಲ್ಲ. ನಾನು ಅವರ ಬಳಿ ಮಾತನಾಡುತ್ತೇನೆ ಎಂದು ಸ್ಪಷ್ಟವಾಗಿ ತಿಳಿಸಿದರು.

PREV
Read more Articles on

Recommended Stories

ನನ್ನ ವಿರುದ್ಧ ಮೂವರ ಪಿತೂರಿ - ಬಿಜೆಪಿ ಸೇರೋ ಬಗ್ಗೆ ಏನಂದ್ರು ರಾಜಣ್ಣ
ಆ.17ರಿಂದ ಕಾಂಗ್ರೆಸ್‌ ‘ಮತದಾರ ಅಧಿಕಾರ ಯಾತ್ರೆ’