ಬಾಕಿ ಇರುವ ಬೆಂಗಳೂರಿನ ರಸ್ತೆ ಗುಂಡಿಗಳಿಗೆ ಶೀಘ್ರ ಮುಕ್ತಿ : ಡಿ.ಕೆ.ಶಿವಕುಮಾರ್‌

KannadaprabhaNewsNetwork |  
Published : Sep 21, 2025, 02:00 AM ISTUpdated : Sep 21, 2025, 05:53 AM IST
dk shivakumar

ಸಾರಾಂಶ

 ನಗರದಲ್ಲಿ 12 ಸಾವಿರ ರಸ್ತೆ ಗುಂಡಿಗಳಿದ್ದು, ಅದರಲ್ಲಿ 7 ಸಾವಿರಕ್ಕೂ ಹೆಚ್ಚಿನ ಗುಂಡಿಗಳನ್ನು ಮುಚ್ಚಲಾಗಿದೆ. ಉಳಿದ 5 ಸಾವಿರ ಗುಂಡಿಗಳನ್ನು ಶೀಘ್ರದಲ್ಲಿ ಮುಚ್ಚಲಾಗುವುದು ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌ ತಿಳಿಸಿದರು.

  ಬೆಂಗಳೂರು :  ನಗರದಲ್ಲಿನ ರಸ್ತೆ ಗುಂಡಿ ಸಮಸ್ಯೆ ಬಗೆಹರಿಸಲು ಸಮರೋಪಾದಿಯಾಗಿ ಕೆಲಸ ಮಾಡಲಾಗುತ್ತಿದೆ. ನಗರದಲ್ಲಿ 12 ಸಾವಿರ ರಸ್ತೆ ಗುಂಡಿಗಳಿದ್ದು, ಅದರಲ್ಲಿ 7 ಸಾವಿರಕ್ಕೂ ಹೆಚ್ಚಿನ ಗುಂಡಿಗಳನ್ನು ಮುಚ್ಚಲಾಗಿದೆ. ಉಳಿದ 5 ಸಾವಿರ ಗುಂಡಿಗಳನ್ನು ಶೀಘ್ರದಲ್ಲಿ ಮುಚ್ಚಲಾಗುವುದು ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌ ತಿಳಿಸಿದರು.

ಸದಾಶಿವನಗರದ ತಮ್ಮ ನಿವಾಸದ ಬಳಿ ಶನಿವಾರ ಸುದ್ದಿಗಾರರೊಂದಿಗೆ ಮಾತನಾಡಿದ ಡಿ.ಕೆ. ಶಿವಕುಮಾರ್‌, ಯಾರೂ ಉದ್ದೇಶಪೂರ್ವಕವಾಗಿ ರಸ್ತೆ ಗುಂಡಿ ಸೃಷ್ಟಿಸುವುದಿಲ್ಲ. ಅತಿಯಾದ ಮಳೆಯಿಂದ ರಸ್ತೆಗಳಲ್ಲಿ ಗುಂಡಿಗಳು ಬಿದ್ದಿವೆ. 7 ಸಾವಿರ ಗುಂಡಿಗಳನ್ನು ಈಗಾಗಲೇ ಮುಚ್ಚಲಾಗಿದೆ. ಉಳಿದ 5 ಸಾವಿರ ಗುಂಡಿ ಮುಚ್ಚಲು ಸಮರೋಪಾದಿಯಾಗಿ ಕೆಲಸ ಮಾಡಲಾಗುತ್ತಿದೆ. ರಸ್ತೆ ಗುಂಡಿಗಳ ಪತ್ತೆಗೆ ಸಂಬಂಧಿಸಿದಂತೆ ಪೊಲೀಸ್‌ ಆಯುಕ್ತರಿಂದ ವರದಿ ಕೇಳಲಾಗಿದೆ. ಸಾರ್ವಜನಿಕರೂ ಸೇರಿ ಎಲ್ಲರೂ ರಸ್ತೆ ಗುಂಡಿಗಳು ಗಮನಕ್ಕೆ ಬಂದರೆ ನಮ್ಮ ಗಮನಕ್ಕೆ ತರುವ ವ್ಯವಸ್ಥೆಯನ್ನೂ ರೂಪಿಸಲಾಗಿದೆ ಎಂದರು.

ಬಿಜೆಪಿ ನಾಯಕರಿಗೆ ಟಾಂಗ್‌ : ರಸ್ತೆ ಗುಂಡಿ ವಿಚಾರವಾಗಿ ಬಿಜೆಪಿ ಪ್ರತಿಭಟಿಸುವ ಕುರಿತು ಪ್ರತಿಕ್ರಿಯಿಸಿ, ಬಿಜೆಪಿ ನಾಯಕರು ರಸ್ತೆ ತಡೆಯಾದರೂ ಮಾಡಲಿ, ಬೇರೆ ಏನಾದರೂ ಮಾಡಿ. ಪ್ರತಿ ಬಿಜೆಪಿ ಶಾಸಕರಿಗೂ ಅವರ ಕ್ಷೇತ್ರದ ಅಭಿವೃದ್ಧಿಗಾಗಿ 25 ಕೋಟಿ ರು. ನೀಡಲಾಗಿದೆ. ನನ್ನ ಅನುದಾನದಲ್ಲೂ ಯಾವುದೇ ತಾರತಮ್ಯವಿಲ್ಲದೆ ಬಿಜೆಪಿ ಶಾಸಕರಿಗೆ ಅನುದಾನ ನೀಡಿದ್ದೇನೆ. ಆದರೂ, ಅವರ ಕ್ಷೇತ್ರಗಳಲ್ಲಿ ರಸ್ತೆ ಗುಂಡಿ ಮುಚ್ಚುತ್ತಿಲ್ಲ. ಅವರು ಮೊದಲು ತಮ್ಮ ಪಾಲಿನ ಕೆಲಸ ಮಾಡಲಿ. ನಾವು ರಾಜಕೀಯ ಮಾಡುವುದನ್ನು ಬಿಟ್ಟು ಜನರ ಅನುಕೂಲಕ್ಕಾಗಿ ಕೆಲಸ ಮಾಡುತ್ತಿದ್ದೇವೆ. ಅವರು ರಾಜಕೀಯ ಮಾಡುತ್ತಿರಲಿ ಎಂದು ಹೇಳಿದರು.

PREV
Catch up on the latest political news from Karnataka and India (ರಾಜಕೀಯ ಸುದ್ದಿ) — election results, government decisions, party updates, and in-depth political analysis on Kannada Prabha.
Read more Articles on

Recommended Stories

ಜಿಬಿಎ ಚುನಾವಣೆಗೆ ಕಾಂಗ್ರೆಸ್‌ ಅರ್ಜಿಗೆ ₹50 ಸಾವಿರ!
36 ವರ್ಷದ ಬಳಿಕ ರಾಜ್ಯದಲ್ಲಿ ವಿದ್ಯಾರ್ಥಿ ಸಂಘಕ್ಕೆ ಎಲೆಕ್ಷನ್‌?