ಇಂದು 4ನೇ ಹಂತದ ಲೋಕಸಭಾ ಚುನಾವಣೆ

KannadaprabhaNewsNetwork |  
Published : May 13, 2024, 12:09 AM ISTUpdated : May 13, 2024, 04:26 AM IST
ಲೋಕಸಭಾ ಚುನಾವಣೆ | Kannada Prabha

ಸಾರಾಂಶ

ಲೋಕಸಭೆಗೆ 4ನೇ ಹಂತದ ಚುನಾವಣೆ ಸೋಮವಾರ ನಡೆಯಲಿದೆ. ಈ ಹಂತದಲ್ಲಿ 10 ರಾಜ್ಯಗಳ 96 ಲೋಕಸಭಾ ಕ್ಷೇತ್ರ, ಆಂಧ್ರಪ್ರದೇಶ ವಿಧಾನಸಭೆಯ ಎಲ್ಲಾ 175 ಕ್ಷೇತ್ರ ಮತ್ತು ಒಡಿಶಾ ವಿಧಾನಸಭೆಯ 28 ಕ್ಷೇತ್ರಗಳಿಗೆ ಮತದಾನ ನಡೆಯಲಿದೆ.

ನವದೆಹಲಿ: ಲೋಕಸಭೆಗೆ 4ನೇ ಹಂತದ ಚುನಾವಣೆ ಸೋಮವಾರ ನಡೆಯಲಿದೆ. ಈ ಹಂತದಲ್ಲಿ 10 ರಾಜ್ಯಗಳ 96 ಲೋಕಸಭಾ ಕ್ಷೇತ್ರ, ಆಂಧ್ರಪ್ರದೇಶ ವಿಧಾನಸಭೆಯ ಎಲ್ಲಾ 175 ಕ್ಷೇತ್ರ ಮತ್ತು ಒಡಿಶಾ ವಿಧಾನಸಭೆಯ 28 ಕ್ಷೇತ್ರಗಳಿಗೆ ಮತದಾನ ನಡೆಯಲಿದೆ.

ಆಂಧ್ರಪ್ರದೇಶ, ಬಿಹಾರ, ಜಾರ್ಖಂಡ್‌, ಮಧ್ಯಪ್ರದೇಶ, ಮಹಾರಾಷ್ಟ್ರ, ಒಡಿಶಾ, ತೆಲಂಗಾಣ, ಉತ್ತರಪ್ರದೇಶ, ಪಶ್ಚಿಮ ಬಂಗಾಳ ಹಾಗೂ ಜಮ್ಮು ಮತ್ತು ಕಾಶ್ಮೀರದಲ್ಲಿ ಚುನಾವಣೆ ನಿಗದಿಯಾಗಿದೆ. ಈ ಹಂತದೊಂದಿಗೆ ಲೋಕಸಭೆಯ 543 ಸ್ಥಾನಗಳ ಪೈಕಿ 283 ಸ್ಥಾನಗಳಿಗೆ ಚುನಾವಣೆ ಪೂರ್ಣಗೊಳ್ಳಲಿದೆ.

ಪ್ರಮುಖ ಅಭ್ಯರ್ಥಿಗಳು:

ಕೇಂದ್ರ ಸಚಿವರಾದ ನಿತ್ಯಾನಂದ ರಾಯ್‌, ಗಿರಿರಾಜ್‌ ಸಿಂಗ್‌, ಸಮಾಜವಾದಿ ಪಕ್ಷದ ಅಧ್ಯಕ್ಷ ಅಖಿಲೇಶ್‌ ಯಾದವ್‌, ಟಿಎಂಸಿಯ ಮಹುವಾ ಮೊಯಿತ್ರಾ, ಮಾಜಿ ಕ್ರಿಕೆಟಿಗ ಕೀರ್ತಿ ಆಜಾದ್‌, ಯೂಸುಫ್‌ ಪಠಾಣ್‌, ನಟ ಶತ್ರುಘ್ನ ಸಿನ್ಹಾ, ಕಾಂಗ್ರೆಸ್‌ನ ಅಧೀರ್‌ ರಂಜನ್‌ ಚೌಧರಿ, ಶರ್ಮಿಳಾ, ಎಂಐಎಂನ ಅಸಾದುದ್ದಿನ್‌ ಒವೈಸಿ, ಬಿಜೆಪಿಯ ಪಂಕಜಾ ಮುಂಡೆ, ಎಸ್‌.ಎಸ್‌.ಅಹ್ಲುವಾಲಿಯಾ, ದಿಲೀಪ್‌ ಘೋಷ್‌, 4ನೇ ಹಂತದ ಪ್ರಮುಖ ಅಭ್ಯರ್ಥಿಗಳಾಗಿದ್ದಾರೆ.ಆಂಧ್ರ, ಒಡಿಶಾ ವಿಧಾನಸಭಾ ಚುನಾವಣೆ:

ಆಂಧ್ರಪ್ರದೇಶದಲ್ಲಿ 175 ವಿಧಾನಸಭಾ ಕ್ಷೇತ್ರಗಳಿಗೆ ಹಾಗೂ 25 ಲೋಕಸಭಾ ಕ್ಷೇತ್ರಗಳಿಗೆ ಮತದಾನ ನಡೆಯಲಿದೆ. ಒಡಿಶಾ 147 ವಿಧಾನಸಭಾ ಕ್ಷೇತ್ರ ಚುನಾವಣೆ 4 ಹಂತಗಳಲ್ಲಿ ನಡೆಯಲಿದ್ದು, ಸೋಮವಾರ ಮೊದಲನೇ ಹಂತ ನಡೆಯಲಿದೆ.

ಎಷ್ಟು ಜನ ಮತದಾರರು?

96 ಲೋಕಸಭಾ ಕ್ಷೇತ್ರಗಳಲ್ಲಿ ಒಟ್ಟು 17.47 ಕೋಟಿ ಅರ್ಹ ಮತದಾರರಿದ್ದು, ಇವರಲ್ಲಿ 8.75 ಕೋಟಿ ಪುರುಷರು, 8.71 ಕೋಟಿ ಮಹಿಳೆಯರಾಗಿದ್ದಾರೆ. 705 ಶತಾಯುಷಿಗಳೂ ಮತದಾರರ ಪಟ್ಟಿಯಲ್ಲಿದ್ದಾರೆ. 96 ಕ್ಷೇತ್ರಕ್ಕೆ ಒಟ್ಟು 1717 ಜನರು ಸ್ಪರ್ಧಿಸಿದ್ದಾರೆ.

ಕಾಶ್ಮೀರದಲ್ಲಿ ಚುನಾವಣೆ:

370ನೇ ವಿಧಿ ರದ್ದತಿ ಬಳಿಕ ಕಾಶ್ಮೀರದಲ್ಲಿ ಮೊದಲ ಬಾರಿಗೆ ಪ್ರಮುಖ ಚುನಾವಣೆ ನಡೆಯುತ್ತಿದೆ. ಶ್ರೀನಗರ ಲೋಕಸಭಾ ಕ್ಷೇತ್ರದಲ್ಲಿ ಮೇ 13ರಂದು ಮತದಾನ ನಡೆಯಲಿದ್ದು, 17.48 ಲಕ್ಷ ಮತದಾರರು ತಮ್ಮ ಹಕ್ಕು ಚಲಾಯಿಸಲು ಅವಕಾಶ ಪಡೆದುಕೊಂಡಿದ್ದಾರೆ.

PREV
Catch up on the latest political news from Karnataka and India (ರಾಜಕೀಯ ಸುದ್ದಿ) — election results, government decisions, party updates, and in-depth political analysis on Kannada Prabha.

Recommended Stories

ಶಕ್ತಿ ಯೋಜನೆ ಫಲಾನುಭವಿ ಸ್ತ್ರೀಯರಿಗೆ ಸ್ಮಾರ್ಟ್‌ಕಾರ್ಡ್‌
ಎಸ್‌ಐಆರ್‌ಗೆ ಸಂಪುಟದಲ್ಲಿ ತೀವ್ರ ವಿರೋಧ - ವರದಿ ನೀಡಲು ಕಾನೂನು