ಛತ್ರಪತಿ ಶಿವಾಜಿ ಹೆಸರಲ್ಲಿ ರಾಜಕಾರಣ ಸರಿಯಲ್ಲ: ಶಿವರಾಜ್ ತಂಗಡಗಿ

KannadaprabhaNewsNetwork |  
Published : Feb 20, 2026, 04:15 AM IST
shivaji maharaj | Kannada Prabha

ಸಾರಾಂಶ

ಛತ್ರಪತಿ ಶಿವಾಜಿ ಮಹಾರಾಜರು ಒಂದು ಧರ್ಮಕ್ಕೆ ಮಾತ್ರ ಸೀಮಿರಲ್ಲ, ಅವರ ಹೆಸರಿನಲ್ಲಿ ರಾಜಕಾರಣ ಮಾಡುತ್ತಿರುವುದು ಸರಿಯಲ್ಲ ಎಂದು ಕನ್ನಡ ಮತ್ತು ಸಂಸ್ಕೃತಿ ಸಚಿವ ಶಿವರಾಜ್ ಎಸ್. ತಂಗಡಗಿ ಹೇಳಿದರು.

ಕನ್ನಡಪ್ರಭ ವಾರ್ತೆ ಬೆಂಗಳೂರು

ಛತ್ರಪತಿ ಶಿವಾಜಿ ಮಹಾರಾಜರು ಒಂದು ಧರ್ಮಕ್ಕೆ ಮಾತ್ರ ಸೀಮಿರಲ್ಲ, ಅವರ ಹೆಸರಿನಲ್ಲಿ ರಾಜಕಾರಣ ಮಾಡುತ್ತಿರುವುದು ಸರಿಯಲ್ಲ ಎಂದು ಕನ್ನಡ ಮತ್ತು ಸಂಸ್ಕೃತಿ ಸಚಿವ ಶಿವರಾಜ್ ಎಸ್. ತಂಗಡಗಿ ಹೇಳಿದರು.

ಗುರುವಾರ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ಕರ್ನಾಟಕ ಮರಾಠ ಸಮುದಾಯಗಳ ಅಭಿವೃದ್ಧಿ ನಿಗಮದ ವತಿಯಿಂದ ರವೀಂದ್ರ ಕಲಾಕ್ಷೇತ್ರದಲ್ಲಿ ಗೋಸಾಯಿ ಮಹಾಸಂಸ್ಥಾನ ಮಠದ ಮಂಜುನಾಥ ಭಾರತೀ ಸ್ವಾಮೀಜಿ ಅವರ ಸಾನಿಧ್ಯದಲ್ಲಿ ಆಯೋಜಿಸಿದ್ದ ಶ್ರೀ ಛತ್ರಪತಿ ಶಿವಾಜಿ ಮಹಾರಾಜರ ಜಯಂತಿ ಉದ್ಘಾಟಿಸಿ ಅವರು ಮಾತನಾಡಿದರು.‌

ಪ್ರತಿಯೊಬ್ಬರು ಶಿವಾಜಿ ಅವರ ಇತಿಹಾಸವನ್ನು ಸರಿಯಾಗಿ ತಿಳಿದುಕೊಳ್ಳಬೇಕು ಎಂದರು.‌ಸಮಾರಂಭದಲ್ಲಿ ಮರಾಠ ಅಭಿವೃದ್ಧಿ ನಿಗಮದ ವತಿಯಿಂದ ವಿವಿಧ ಯೋಜನೆಗಳ ಪ್ರಮಾಣ ಪತ್ರಗಳನ್ನು ಸಚಿವರು ವಿತರಿಸಿದರು.

ಸಮಾರಂಭದಲ್ಲಿ ಮರಾಠ ‌ಅಭಿವೃದ್ಧಿ ನಿಮಗದ ಅಧ್ಯಕ್ಷ ಬಿ.ಎಚ್. ಮರಿಯೋಜಿರಾವ್, ಮರಾಠ ಸಮಾಜದ ರಾಜ್ಯಾಧ್ಯಕ್ಷ ಎಸ್. ಸುರೇಶ್ ರಾವ್ ಸಾಠೆ, ಮರಾಠ ವೆಲ್ಫೇರ್ ಅಸೋಸಿಯೇಷನ್ ಅಧ್ಯಕ್ಷ ಎಸ್.ಸುನೀಲ್ ರಾವ್ ಭಿಸ್ಸೆ ಸೇರಿದಂತೆ ಇತರರು ಇದ್ದರು.

PREV
Catch up on the latest political news from Karnataka and India (ರಾಜಕೀಯ ಸುದ್ದಿ) — election results, government decisions, party updates, and in-depth political analysis on Kannada Prabha.

Recommended Stories

ಅನುದಾನ ಬಿಡುಗಡೆ ಭರವಸೆ ಬೆನ್ನಲ್ಲೇ ಕಸ ಸಮಸ್ಯೆ ಇತ್ಯರ್ಥ
ವಿಧಾನಸೌಧದಲ್ಲಿ ದೃಶ್ಯಮಾಧ್ಯಮಕ್ಕೆ ನಿರ್ಬಂಧ