ಮಂಡ್ಯದಲ್ಲಿ ಗಣಪತಿ ಮೆರವಣಿಗೆ ವಿವಾದ: ಕಾಂಗ್ರೆಸ್ ವಿರುದ್ಧ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಕಿಡಿ

KannadaprabhaNewsNetwork |  
Published : Sep 14, 2024, 01:50 AM ISTUpdated : Sep 14, 2024, 04:33 AM IST
Prahlad Joshi

ಸಾರಾಂಶ

ಮಂಡ್ಯದಲ್ಲಿ ಗಣಪತಿ ಮೆರವಣಿಗೆ ವೇಳೆ ಮಸೀದಿ ಬಳಿ ವಾದ್ಯ ಬಾರಿಸುವ ವಿಚಾರದಲ್ಲಿ ಕಾಂಗ್ರೆಸ್ ವಿರುದ್ಧ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಗಲಭೆ ಪ್ರಕರಣದಲ್ಲಿ ಹಿಂದೂ ಯುವಕನ ಬಂಧನವನ್ನು ಅವರು ಖಂಡಿಸಿದ್ದಾರೆ.

 ಹುಬ್ಬಳ್ಳಿ : ಗಣಪತಿ ಮೆರವಣಿಗೆ ಹೋಗುವ ರಸ್ತೆ ಬದಿಯಲ್ಲಿ ಮಸೀದಿ ಇದ್ದರೆ ವಾದ್ಯ ಬಾರಿಸಬಾರದು ಎಂದರೆ ಏನರ್ಥ? ಮಂಡ್ಯ ಜಿಲ್ಲೆ ಪಾಕಿಸ್ತಾನದಲ್ಲಿದೆಯೇ ಅಥವಾ ರಾಜ್ಯ ಸರ್ಕಾರವೇ ಪಾಕಿಸ್ತಾನ ಮಾಡಲು ಹೊರಟಿದೆಯೇ? ಕಾಂಗ್ರೆಸ್‌ ಎಂದಿಗೂ ಹಿಂದೂ ವಿರೋಧಿಯಾಗಿದೆ ಎಂದು ಕೇಂದ್ರ ಸಚಿವ ಪ್ರಹ್ಲಾದ್‌ ಜೋಶಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ನಗರದಲ್ಲಿ ಶುಕ್ರವಾರ ಸುದ್ದಿಗಾರರೊಂದಿಗೆ ಮಾತನಾಡಿ, ನಾಗಮಂಗಲದಲ್ಲಿ ಗಣೇಶಮೂರ್ತಿ ಪ್ರತಿಷ್ಠಾಪನೆಗೆ ಹಾಗೂ ವಿಸರ್ಜನಾ ಮೆರವಣಿಗೆಗೆ ಪೊಲೀಸ್ ಇಲಾಖೆಯಿಂದ ಅನುಮತಿ ಪಡೆಯಲಾಗಿದೆ. ಆದರೂ ಗಲಭೆ ಪ್ರಕರಣಕ್ಕೆ ಸಂಬಂಧಿಸಿ ಈಗಾಗಲೇ ಪೊಲೀಸರು ಹಿಂದೂ ಯುವಕನನ್ನು ಮೊದಲ ಆರೋಪಿಯಾಗಿ ಬಂಧಿಸಿರುವುದು ಖಂಡನೀಯ. ಪಕ್ಷದ ರಾಜ್ಯಾಧ್ಯಕ್ಷರು, ವಿರೋಧ ಪಕ್ಷದ ನಾಯಕರು ಸ್ಥಳಕ್ಕೆ ಭೇಟಿ ನೀಡಿ ಬಂದಿದ್ದಾರೆ. ರಾಜಕೀಯ ಒತ್ತಡಕ್ಕೆ ಒಳಗಾಗಿ ಅಲ್ಲಿಯ ಪೊಲೀಸ್‌ ವರಿಷ್ಠಾಧಿಕಾರಿ ಹುಚ್ಚರಂತೆ ವರ್ತಿಸಬಾರದು. ಇದನ್ನು ನಾವು ಗಂಭೀರವಾಗಿ ತೆಗೆದುಕೊಂಡಿದ್ದು, ಮುಂದಿನ ದಿನಗಳಲ್ಲಿ ಹೋರಾಟ ನಡೆಸುತ್ತೇವೆ ಎಂದು ಎಚ್ಚರಿಕೆ ನೀಡಿದ್ದಾರೆ.

ಖರ್ಗೆ ಹೆಸರಿಗೆ ಮಾತ್ರ ಅಧ್ಯಕ್ಷ:

ಮಲ್ಲಿಕಾರ್ಜುನ ಖರ್ಗೆ ಅವರು ಹೆಸರಿಗೆ ಮಾತ್ರ ಕಾಂಗ್ರೆಸ್‌ನ ರಾಷ್ಟ್ರೀಯ ಅಧ್ಯಕ್ಷರಾಗಿದ್ದು, ರಾಹುಲ್‌ ಗಾಂಧಿ ಅವರ ಅಣತಿಯಂತೆ ನಡೆದುಕೊಳ್ಳುತ್ತಾರೆ. ಮುಂದಿನ ದಿನಗಳಲ್ಲಿ ದೇಶದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ರಾಹುಲ್ ಗಾಂಧಿ ಬದಲಿಗೆ ಖರ್ಗೆ ಅವರನ್ನೇ ಪ್ರಧಾನಿಯನ್ನಾಗಿ ಮಾಡುತ್ತೇವೆಂದು ಕೈ ವರಿಷ್ಠರು ಘೋಷಿಸಲಿ ಎಂದು ಜೋಶಿ ಸವಾಲು ಹಾಕಿದರು.

PREV
Catch up on the latest political news from Karnataka and India (ರಾಜಕೀಯ ಸುದ್ದಿ) — election results, government decisions, party updates, and in-depth political analysis on Kannada Prabha.

Recommended Stories

ಭಗವಂತನ ಶಕ್ತಿ ಪಡೆದವರಿಂದ ಡಿಕೆಶಿ ಸಿಎಂ ಆಗುವ ದಿನಾಂಕ ನಿಗದಿ : ಇಕ್ಬಾಲ್
ಜನ ನಂಗೆ ಇನ್ನೊಂದು ಅವಕಾಶ ಕೊಡಲಿ : ಎಚ್ಡಿಕೆ