ರೈಲ್ವೆ ಮೇಲ್ಸೇತುವೆ, ನಿಲ್ದಾಣ ಅಭಿವೃದ್ಧಿಗೆ ಪ್ರಧಾನಿ ಚಾಲನೆ

KannadaprabhaNewsNetwork |  
Published : Feb 27, 2024, 01:34 AM IST
26ಕೆಬಿಪಿಟಿ.1.ಬಂಗಾರಪೇಟೆ ರೈಲ್ವೆ ನಿಲ್ದಾಣದಲ್ಲಿ ನಡೆದ ವಿವಿಧ ಕಾಮಗಾರಿಗಳ ಚಾಲನೆ ವೇಳೆ ಸಂಸದ ಎಸ್.ಮುನಿಸ್ವಾಮಿ ಮಾತನಾಡಿದರು. | Kannada Prabha

ಸಾರಾಂಶ

ಪ್ರಧಾನಿ ಮೋದಿರವರ ಗ್ಯಾರಂಟಿ ಯೋಜನೆಗಳು ಕಾಂಗ್ರೆಸ್ ನವರಂತೆ ನಾಲ್ಕೈದು ಜನರಿಗೆ ನೀಡಿ ಕೈತೊಳೆದುಕೊಳ್ಳುವ ರೀತಿಯಲ್ಲಿ ಇಲ್ಲ. ರೈತರು ಬೆಳೆದಿರುವ ಉತ್ಪನ್ನಗಳ ಸಾಕಾಣಿಕೆಗೆ ಪ್ರಥಮ ಬಾರಿಗೆ ಕಿಸಾನ್ ರೈಲನ್ನು ಆರಂಭಿಸಿದ್ದು ಜಿಲ್ಲೆಯಿಂದ

ಕನ್ನಡಪ್ರಭ ವಾರ್ತೆ ಬಂಗಾರಪೇಟೆ

ದೇಶವನ್ನು ೬೦ ವರ್ಷಗಳ ಕಾಲ ಆಡಳಿತ ನಡೆಸಿದ ಸರ್ಕಾರಗಳು ರೈಲ್ವೆ ನಿಲ್ದಾಣಗಳನ್ನು ಪ್ರಯಾಣಿಕರ ಬೇಡಿಕೆಯಂತೆ ಅಭಿವೃದ್ಧಿಗೊಳಿಸಿ ಆಧುನಿಕ ಸ್ಪರ್ಶ ನೀಡದೆ ಕಡೆಗಣಿಸಿದ್ದವು. ಆದರೆ ಕಳೆದ ಹತ್ತು ವರ್ಷಗಳಲ್ಲಿ ಪ್ರಧಾನಿ ಮೋದಿ ೬೦ ವರ್ಷಗಳಲ್ಲಿ ಸಾಧ್ಯವಾಗದ ಕೆಲಸವನ್ನು ಮಾಡಿ ತೋರಿಸಿ ಮಾದರಿ ಪ್ರಧಾನಿಯಾಗಿದ್ದಾರೆ ಎಂದು ಸಂಸದ ಎಸ್. ಮುನಿಸ್ವಾಮಿ ಬಣ್ಣಿಸಿದರು.ಪಟ್ಟಣದ ರೈಲ್ವೆ ನಿಲ್ದಾಣಲ್ಲಿ ಅಮೃತ್ ಭಾರತ್ ಸ್ಟೇಷನ್ ಯೋಜನೆಯಡಿ ರೈಲ್ವೆ ನಿಲ್ದಾಣ ಪುನರಾಭಿವೃದ್ಧಿ ಹಾಗೂ ಬೂದಿಕೋಟೆ ವೃತ್ತದ ಬಳಿ ೨೧ಕೋಟಿ ವೆಚ್ಚದ ಮೇಲ್ಸೇತುವೆ ನಿರ್ಮಾಣಕ್ಕೆ ಪ್ರಧಾನಿ ಮೋದಿ ವರ್ಚುವಲ್ ಮೂಲಕ ಚಾಲನೆ ನೀಡಿದ ಬಳಿಕ ಮಾತನಾಡಿದ ಅವರು, ಈ ಹಿಂದೆ ಜಿಲ್ಲೆಯ ಸಂಸದರೇ ರೈಲ್ವೆ ಸಚಿವರಾಗಿದ್ದರೂ ಜಿಲ್ಲೆಯ ಯಾವುದೇ ನಿಲ್ದಾಣಗಳು ಅಭಿವೃದ್ಧಿಯಾಗಿರಲಿಲ್ಲ ಎಂದು ಟೀಕಿಸಿದರು.

ಮೇಲ್ಸೇತುವೆ ನಿರ್ಮಾಣಕ್ಕೆ ಪ್ರಧಾನಿ ಚಾಲನೆ

ಪಟ್ಟಣದ ಬೂದಿಕೋಟೆ ವೃತ್ತದಲ್ಲಿ ಕಿರಿದಾದ ರಸ್ತೆಯಿಂದ ವಾಹನಗಳ ಸಂಚಾರಕ್ಕೆ ಅಡ್ಡಿಯಾಗಿತ್ತು. ಈ ಸ್ಥಳದಲ್ಲೆ ೨೧ಕೋಟಿ ರು. ವೆಚ್ಚದಲ್ಲಿ ಮೇಲ್ಸೇತುವೆ ನಿರ್ಮಾಣಕ್ಕೆ ಪ್ರಧಾನಿ ಮೋದಿ ಈಗಾಗಲೇ ಚಾಲನೆ ನೀಡಿದ್ದಾರೆ. ಒಂದು ವರ್ಷದಲ್ಲಿ ಕಾಮಗಾರಿ ಪೂರ್ಣಗೊಂಡು ಸಾರ್ವಜನಿಕರ ಸೇವೆಗೆ ದೊರೆಯಲಿದೆ ಎಂದರು.ಕೇಂದ್ರ ಸರ್ಕಾರದ ಯೋಜನೆಗಳನ್ನು ಸ್ಥಳೀಯ ಶಾಸಕರು ನಾನು ಮಾಡಿಸಿಕೊಂಡು ಬಂದಿರುವ ಯೋಜನೆಯಿದು ಎಂದು ಜನರನ್ನು ವಂಚಿಸಲು ಯತ್ನಿಸುವರು ಎಂದು ಟೀಕಿಸಿದರು.

ಪ್ರಧಾನಿ ಮೋದಿರವರ ಗ್ಯಾರಂಟಿ ಯೋಜನೆಗಳು ಕಾಂಗ್ರೆಸ್ ನವರಂತೆ ನಾಲ್ಕೈದು ಜನರಿಗೆ ನೀಡಿ ಕೈತೊಳೆದುಕೊಳ್ಳುವ ರೀತಿಯಲ್ಲಿ ಇಲ್ಲ. ರೈತರು ಬೆಳೆದಿರುವ ತರಕಾರಿ ಸೇರಿದಂತೆ ಎಲ್ಲಾ ಉತ್ಪನ್ನಗಳನ್ನು ಬೇರೆಕಡೆ ಸಾಕಾಣಿಕೆ ಮಾಡಿ ಹೆಚ್ಚಿನ ಲಾಭಗಳಿಸುವ ಸಲುವಾಗಿ ಜಿಲ್ಲೆಯಿಂದಲೇ ಪ್ರಥಮ ಬಾರಿಗೆ ಕಿಸಾನ್ ರೈಲನ್ನು ಆರಂಭಿಸಿದರು. ಇದು ರೈತ ಪರ ಸರ್ಕಾರವೆಂದರು.

ಯೋಜನೆಗಳ ಪ್ರಚಾರ ಮಾಡಿ

ಕೇಂದ್ರ ಸರ್ಕಾರದ ಜನಪರ ಯೋಜನೆಗಳನ್ನು ಕಾರ್ಯಕರ್ತರು ವ್ಯಾಪಕವಾಗಿ ಪ್ರಚಾರ ಮಾಡಿ ಜನರಿಗೆ ತಿಳಿವಳಿಕೆ ಮೂಡಿಸಬೇಕು. ಪ್ರಧಾನಿ ಭ್ರಷ್ಟಾಚಾರ ರಹಿತ ಆಡಳಿತ ನೀಡಿದರೆ, ಸ್ಥಳಿಯ ಕಾಂಗ್ರೆಸ್ ಶಾಸಕರು ಸರ್ಕಾರದ ರಸ್ತೆಯನ್ನೇ ತನ್ನ ಸ್ವಂತ ಕೆಲಸಕ್ಕೆ ಬಂದ್ ಮಾಡಿಸಿದ್ದಾರೆ. ಇದೇ ಬಿಜೆಪಿ, ಕಾಂಗ್ರೆಸ್ ಆಡಳಿತದ ನಡುವೆ ಇರುವ ವ್ಯತ್ಯಾಸ ಎಂದರು.

ತಾಲೂಕಿನ ಕಾಮಸಮುದ್ರ ಗ್ರಾಮದಲ್ಲಿಯೂ ಮೇಲ್ಸೇತುವೆ ನಿರ್ಮಾಣಕ್ಕೆ ಮಣ್ಣು ಪರೀಕ್ಷೆ ನಡೆಯುತ್ತಿದೆ ಮುಂದಿನ ದಿನಗಳಲ್ಲಿ ಅಲ್ಲಿಯೂ ಮೇಲ್ಸೇತುವೆ ಕಾಮಗಾರಿ ಮಾಡಲಾಗುವುದು ಎಂದು ಭರವಸೆ ನೀಡಿದರು. ಈ ವೇಳೆ ಬಿಜೆಪಿ ಮುಖಂಡರಾದ ಕೆ.ಚಂದ್ರಾರೆಡ್ಡಿ,ಬಿ.ವಿ. ಮಹೇಶ್, ಬಿಜೆಪಿ ಜಿಲ್ಲಾಧ್ಯಕ್ಷ ಡಾ. ವೇಣುಗೋಪಾಲ್, ನಾಗೇಶ್, ಪುರಸಭೆ ಸದಸ್ಯ ಕಪಾಲಿಶಂಕರ್,ವಿ.ಶೇಷು, ರಾಜಾರೆಡ್ಡಿ, ಹೊಸರಾಯಪ್ಪ ಮತ್ತಿತರರು ಇದ್ದರು.

PREV

Recommended Stories

ರಾಹುಲ್‌ ವಿರುದ್ಧ 5ಕ್ಕೆ ಬಿಜೆಪಿ ಧರಣಿ : ಬಿವೈವಿ
ಸಂಘರ್ಷ ಬಿಟ್ಟು ಒಳಮೀಸಲು ಜಾರಿ : ಪರಂ ನೇತೃತ್ವದ ಸಭೆ