‘ಗ್ಯಾರಂಟಿ’ ಪ್ರಚಾರ ಮಾಡಿ ಕಾಂಗ್ರೆಸ್‌ ಬಲಪಡಿಸಿ

KannadaprabhaNewsNetwork |  
Published : Apr 24, 2024, 02:15 AM IST
ಶಿರ್ಷಿಕೆ.೨೩ಕೆ.ಎಂ.ಎಲ್.ಅರ್.೧-ಮಾಲೂರು ತಾಲೂಕಿನ ದೊಡ್ಡಶಿವಾರ ಗ್ರಾಮದಲ್ಲಿ ರೋಡ್ ಶೋ ನಡೆಸಿ ಲೋಕಸಭಾ ಕ್ಷೇತ್ರದ ಅಭ್ಯರ್ಥಿ ಕೆ.ವಿ .ಗೌತಮ್ ಪರ ಶಾಸಕ ಕೆ.ವೈ.ನಂಜೇಗೌಡ ಮತ ಯಾಚಿಸಿ ಮಾತನಾಡಿದರು. ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಕೆ.ವಿ. ಗೌತಮ್ ಹಾಜರಿದ್ದರು. | Kannada Prabha

ಸಾರಾಂಶ

ಕೇಂದ್ರದಲ್ಲಿ ೬೦ ವರ್ಷಗಳ ಕಾಲ ಆಡಳಿತವನ್ನು ನಡೆಸಿರುವ ಕಾಂಗ್ರೆಸ್ ಪ್ರತಿಯೊಬ್ಬರಿಗೂ ಸಾಮಾಜಿಕ ನ್ಯಾಯವನ್ನು ದೊರಕಿಸಿ ಕೊಡುವಲ್ಲಿ ಪ್ರಾಮಾಣಿಕ ಪ್ರಯತ್ನ ಮಾಡಿದೆ. ಅಲ್ಲದೆ ದೇಶದ ಅಭಿವೃದ್ಧಿಗೆ ಹಲವಾರು ಜನಪರ ಯೋಜನೆಗಳನ್ನು ಅನುಷ್ಠಾನಗೊಳಿಸಿದೆ.

ಕನ್ನಡಪ್ರಭ ವಾರ್ತೆ ಮಾಲೂರು

ಕಾರ್ಯಕರ್ತರು, ಮುಖಂಡರು ಬೂತ್ ಮಟ್ಟದಲ್ಲಿ ಸರ್ಕಾರದ ಗ್ಯಾರಂಟಿ ಯೋಜನೆಗಳನ್ನು ಜನಸಾಮಾನ್ಯರಿಗೆ ಪ್ರಚಾರಪಡಿಸುವ ಮೂಲಕ ಪಕ್ಷವನ್ನು ಬಲಗೊಳಿಸಿ ಅಭ್ಯರ್ಥಿಯ ಪರವಾಗಿ ಮತಯಾಚಿಸಿ ಅಭ್ಯರ್ಥಿಯ ಗೆಲುವಿಗೆ ಶ್ರಮಿಸುವಂತೆ ಶಾಸಕ ಕೆ.ವೈ.ನಂಜೇಗೌಡ ಹೇಳಿದರು. ತಾಲೂಕಿನ ದೊಡ್ಡ ಶಿವಾರ ಗ್ರಾಮದಲ್ಲಿ ನಡೆದ ರೋಡ್ ಶೋ ನಲ್ಲಿ ಲೋಕಸಭಾ ಕ್ಷೇತ್ರದ ಅಭ್ಯರ್ಥಿ ಕೆ.ವಿ.ಗೌತಮ್ ಪರ ಶಾಸಕ ಕೆ.ವೈ. ನಂಜೇಗೌಡ ಮತ ಯಾಚಿಸಿ ಮಾತನಾಡಿದ ಅ‍ವರು, ಕಾಂಗ್ರೆಸ್ ಪಕ್ಷಕ್ಕೆ ಇತಿಹಾಸವಿದೆ. ಜಾತ್ಯತೀತ ಪಕ್ಷವಾಗಿದೆ ಎಲ್ಲಾ ಜಾತಿ ಜನಾಂಗದವರು ಧರ್ಮದವರನ್ನು ಸಹೋದರತೆಯಿಂದ ಒಗ್ಗಟ್ಟಾಗಿ ಕರೆದೊಯ್ಯುವ ಕೆಲಸ ಮಾಡಲಾಗುತ್ತಿದೆ ಎಂದರು.

ಎಲ್ಲರಿಗೂ ಸಾಮಾಜಿಕ ನ್ಯಾಯ

ಕೇಂದ್ರದಲ್ಲಿ ೬೦ ವರ್ಷಗಳ ಕಾಲ ಆಡಳಿತವನ್ನು ನಡೆಸಿರುವ ಕಾಂಗ್ರೆಸ್ ಪ್ರತಿಯೊಬ್ಬರಿಗೂ ಸಾಮಾಜಿಕ ನ್ಯಾಯವನ್ನು ದೊರಕಿಸಿ ಕೊಡುವಲ್ಲಿ ಪ್ರಾಮಾಣಿಕ ಪ್ರಯತ್ನ ಮಾಡಿದೆ. ಅಲ್ಲದೆ ದೇಶದ ಅಭಿವೃದ್ಧಿಗೆ ಹಲವಾರು ಜನಪರ ಯೋಜನೆಗಳನ್ನು ಅನುಷ್ಠಾನಗೊಳಿಸಿದೆ. ಕಳೆದ ೧೦ ತಿಂಗಳ ಹಿಂದೆ ಆಡಳಿತಕ್ಕೆ ಬಂದ ಕಾಂಗ್ರೆಸ್ ಪಕ್ಷದ ರಾಜ್ಯ ಸರ್ಕಾರವು ನುಡಿದಂತೆ ನಡೆದಿದೆ ಚುನಾವಣಾ ಪೂರ್ವದಲ್ಲಿ ನೀಡಿದ್ದ ೫ ಗ್ಯಾರಂಟಿ ಯೋಜನೆಗಳು ಅನುಷ್ಠಾನಗೊಳಿಸಿ ಜನರ ಕಷ್ಟ ಸುಖಗಳಿಗೆ ನೆರವು ನೀಡಿದೆ ಎಂದರು.

ರಾಜ್ಯದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಅವರ ನೇತೃತ್ವದಲ್ಲಿ ಕಾಂಗ್ರೆಸ್ ಪಕ್ಷ ಬಲಿಷ್ಠವಾಗಿದೆ ಜನರ ಪರವಾದ ಸರ್ಕಾರವಾಗಿದೆ. ಗ್ಯಾರಂಟಿ ಯೋಜನೆಗಳಿಗಾಗಿ ಪ್ರತಿ ವರ್ಷ ೬೫೦೦೦ ಸಾವಿರ ಕೋಟಿ ಖರ್ಚು ಮಾಡಲಾಗುತ್ತಿದೆ. ೧೦ ತಿಂಗಳಲ್ಲಿ ತಾಲೂಕಿನ ಅಭಿವೃದ್ಧಿಗೆ ೬೦೦ ಕೋಟಿಗೂ ಹೆಚ್ಚು ಅನುದಾನವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬಿಡುಗಡೆ ಮಾಡಿದ್ದು ಮುಂಬರುವ ದಿನಗಳಲ್ಲಿ ರಾಜ್ಯ ಸರ್ಕಾರದಿಂದ ಮತ್ತಷ್ಟು ಅನುದಾನವನ್ನು ತಂದು ಅಭಿವೃದ್ಧಿಪಡಿಸಲು ತಾಲೂಕಿನ ಜನತೆ ತಮ್ಮ ಕೈ ಬಲಪಡಿಸುವಂತೆ ಕೋರಿದರು.

ಕೈ ಅಭ್ಯರ್ಥಿ ಗೌತಮ್‌ ಗೆಲ್ಲಿಸಿ

ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದಿಂದ ರ್ಸ್ಪಸಿರುವ ಅಭ್ಯರ್ಥಿ ಕೆ.ವಿ. ಗೌತಮ್ ರವರಿಗೆ ಹೆಚ್ಚಿನ ಮತಗಳನ್ನು ನೀಡಿ ಗೆಲ್ಲಿಸಬೇಕು ಎಂದು ಮನವಿ ಮಾಡಿದರು.ಕಾರ್ಯಕರ್ತರು ಮುಖಂಡರು ಬೂತ್ ಮಟ್ಟದಲ್ಲಿ ಸರ್ಕಾರದ ಗ್ಯಾರಂಟಿ ಯೋಜನೆಗಳನ್ನು ಜನಸಾಮಾನ್ಯರಿಗೆ ಪ್ರಚಾರಪಡಿಸುವ ಮೂಲಕ ಪಕ್ಷವನ್ನು ಬಲಗೊಳಿಸಿ ಅಭ್ಯರ್ಥಿಯ ಪರವಾಗಿ ಮತಯಾಚಿಸಿ ಅಭ್ಯರ್ಥಿಯ ಗೆಲುವಿಗೆ ಶ್ರಮಿಸುವಂತೆ ಹೇಳಿದರು. ಬಿಜೆಪಿಯಿಂದ ನಿರುದ್ಯೋಗ ಸೃಷ್ಟಿ

ಅಭ್ಯರ್ಥಿ ಕೆವಿ. ಗೌತಮ್ ಮಾತನಾಡಿ ಕಳೆದ ೧೦ ವರ್ಷಗಳಿಂದ ಬಿಜೆಪಿ ಜನಸಾಮಾನ್ಯರಿಗೆ ಸುಳ್ಳು ಭರವಸೆಗಳನ್ನು ನೀಡುವುದರ ಮೂಲಕ ಅಕಾರಕ್ಕೆ ಬಂದ ಸರ್ಕಾರ ಉದ್ಯೋಗ ಸೃಷ್ಟಿಸುವಲ್ಲಿ ವಿಫಲವಾಗಿದೆ. ಬೆಲೆ ಏರಿಕೆ ನಿಯಂತ್ರಿಸುವಲ್ಲಿ ವಿಫಲವಾಗಿದೆ. ಪೆಟ್ರೋಲ್ ಡೀಸೆಲ್ ಗ್ಯಾಸ್ ಬೆಲೆ ಗಗನಕ್ಕೇರಿದೆ ಬೆಲೆ ನಿಯಂತ್ರಣ ದೇಶದ ಅಭಿವೃದ್ಧಿಗಾಗಿ ಕೇಂದ್ರದಲ್ಲಿ ಐಎನ್ ಡಿ ಐಎ ಒಕ್ಕೂಟ ಬಹುಮತ ಬರಲಿದ್ದು ರಾಹುಲ್ ಗಾಂಧಿಯವರು ಪ್ರಧಾನ ಮಂತ್ರಿ ಆಗಲಿದ್ದಾರೆ. ಮತದಾನ ದಿನದಂದು ಪ್ರತಿಯೊಬ್ಬ ನಾಗರಿಕರು ಕಾಂಗ್ರೆಸ್ ಪಕ್ಷದ ಹಸ್ತದ ಗುರುತಿಗೆ ತಮ್ಮ ಅಮೂಲ್ಯವಾದ ಮತವನ್ನು ನೀಡುವುದರ ಮೂಲಕ ಆಶೀರ್ವಾದ ಮಾಡುವಂತೆ ತಿಳಿಸಿದರು.

ಈ ಸಂದರ್ಭದಲ್ಲಿ ಮಾಜಿ ಶಾಸಕ ಎ.ನಾಗರಾಜು, ಜಿಲ್ಲಾ ಕಾಂಗ್ರೆಸ್ ಪಕ್ಷದ ಅಧ್ಯಕ್ಷ ಸಿ.ಲಕ್ಷಿ÷್ಮ ನಾರಾಯಣ್, ಗ್ರಾಪಂ. ಮಾಜಿ ಅಧ್ಯಕ್ಷ ಹಾಲಿ ಸದಸ್ಯ ಲಿಂಗಾಪುರ ಎಂ. ಕೃಷ್ಣಪ್ಪ ಕಿಟ್ಟಿ, ಗ್ರಾಪಂ ಅಧ್ಯಕ್ಷರಾದ ನಾರಾಯಣ ರೆಡ್ಡಿ ,ಮುನೇಗೌಡ, ರಾಮಯ್ಯ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಮಧುಸೂದನ್, ವಿಜಯನರಸಿಂಹ, ಮುಖಂಡರಾದ ಗೋವರ್ಧನ್ ರೆಡ್ಡಿ, ಹನುಮಂತರೆಡ್ಡಿ, ಕೆ.ಎಸ್.ವೆಂಕಟೇಶಗೌಡ, ಚಿರಂಜೀವಿ, ಶ್ರೀನಾಥ್ ಬುಜ್ಜಿ, ಹುಂಗೇನಹಳ್ಳಿ ಸಂಪತ್‌ಕುಮಾರ್, ಇನ್ನಿತರಿದ್ದರು.

PREV
Catch up on the latest political news from Karnataka and India (ರಾಜಕೀಯ ಸುದ್ದಿ) — election results, government decisions, party updates, and in-depth political analysis on Kannada Prabha.

Recommended Stories

''ದ್ವೇಷ ಭಾಷಣ ಕಾಯ್ದೆ : ಜಾತಿ ನಿಂದನೆಯ ರೀತಿ ದುರ್ಬಳಕೆ ಆಗಬಹುದು''
ಬಗೆಹರಿಸಿಕೊಳ್ಳಲು ನಮ್ಮಲ್ಲಿ ಸಮಸ್ಯೆಗಳೇ ಇಲ್ಲ : ಡಿಕೆಶಿ!