ಸಿಎಂ ಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯೂಷನ್ : ರಾಜಭವನ ಚಲೋಗೆ ಕಾಂಗ್ರೆಸ್‌ ಕರೆ

Published : Aug 31, 2024, 05:25 AM IST
MUDA Governor Vs CM Siddaramaiah

ಸಾರಾಂಶ

ಸಿಎಂ ಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯೂಷನ್ ಅನುಮತಿ ನೀಡಿದ ವಿಚಾರಕ್ಕೆ ಸಂಬಂಧಿಸಿದಂತೆ ರಾಜ್ಯಪಾಲರ ವಿರುದ್ಧ ಹೋರಾಟವನ್ನ ತೀವ್ರಗೊಳಿಸಲಿ ಕಾಂಗ್ರೆಸ್ ಮುಂದಾಗಿದೆ. ಒಂದು ಕಡೆ ಕಾನೂನು ಹೋರಾಟ, ಮತ್ತೊಂದೆಡೆ ರಾಜಕೀಯ ಹೋರಾಟ ಮಾಡಲು ಕಾಂಗ್ರೆಸ್‌ ತಯಾರಿ ನಡೆಸಿದೆ.

ಬೆಂಗಳೂರು : ಸಿಎಂ ಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯೂಷನ್ ಅನುಮತಿ ನೀಡಿದ ವಿಚಾರಕ್ಕೆ ಸಂಬಂಧಿಸಿದಂತೆ ರಾಜ್ಯಪಾಲರ ವಿರುದ್ಧ ಹೋರಾಟವನ್ನ ತೀವ್ರಗೊಳಿಸಲಿ ಕಾಂಗ್ರೆಸ್ ಮುಂದಾಗಿದೆ. ಒಂದು ಕಡೆ ಕಾನೂನು ಹೋರಾಟ, ಮತ್ತೊಂದೆಡೆ ರಾಜಕೀಯ ಹೋರಾಟ ಮಾಡಲು ಕಾಂಗ್ರೆಸ್‌ ತಯಾರಿ ನಡೆಸಿದೆ.

ರಾಜ್ಯಪಾಲ ಥಾವರ್ ಚಂದ್ ಗೆಹಲೋತ್ ವಿರುದ್ಧ ಹೋರಾಟ ಮಾಡಲು ಕಾಂಗ್ರೆಸ್ ನಾಳೆ(ಶನಿವಾರ) ರಾಜಭವನ ಚಲೋಗೆ ಕರೆ ನೀಡಿದೆ. ಬೆಳಗ್ಗೆ 11ಕ್ಕೆ ವಿಧಾನಸೌಧದ ಗಾಂಧಿ ಪ್ರತಿಮೆ ಬಳಿ ಪ್ರತಿಭಟನೆ ನಡೆಯಲಿದೆ. ಬಳಿಕ ಗಾಂಧಿ ಪ್ರತಿಮೆಯಿಂದ ರಾಜಭವನಕ್ಕೆ ಕಾಲ್ನಡಿಗೆ ಮೂಲಕ ತೆರಳಿ ಮನವಿ ಸಲ್ಲಿಸಲಿದೆ.

ಮುಡಾ ಕೇಸ್ : ಸಿಎಂ ಸಿದ್ದರಾಮಯ್ಯ ಪ್ರಾಸಿಕ್ಯೂಷನ್ ಅರ್ಜಿ ವಿಚಾರಣೆ ಆ.31ಕ್ಕೆ ಮುಂದೂಡಿಕೆ!

ಡಿಸಿಎಂ ಡಿ.ಕೆ. ಶಿವಕುಮಾರ್ ಹಾಗೂ ಕ್ಯಾಬಿನೆಟ್ ಸಚಿವರ ನೇತೃತ್ವದಲ್ಲಿ ಪ್ರತಿಭಟನೆ ನಡೆಯಲಿದೆ. ಪ್ರತಿಭಟನೆಯಲ್ಲಿ ಸಿಎಂ ಸಿದ್ದರಾಮಯ್ಯ ಭಾಗಿಯಾಗುವುದಿಲ್ಲ, ಸಚಿವರು, ಶಾಸಕರು, ಸಂಸದರು, ರಾಜ್ಯಸಭಾ ಸದಸ್ಯರು ಭಾಗಿಯಾಗಲಿದ್ದಾರೆ.

ರಾಜಭವನ ಚಲೋ ಕಾರ್ಯಕ್ರಮಕ್ಕೆ ಕಡ್ಡಾಯವಾಗಿ ಎಲ್ಲಾ ಶಾಸಕರು, ಸಚಿವರು, ಸಂಸದರು ಭಾಗಿಯಾಗಲು ಸೂಚನೆ ನೀಡಲಾಗಿದೆ. ಪ್ರತಿಪಕ್ಷ ನಾಯಕರ ವಿರುದ್ಧ ಬಾಕಿ ಇರುವ ಪ್ರಾಸಿಕ್ಯೂಷನ್ ಅರ್ಜಿಗಳ ಮೇಲೆ ತೀರ್ಮಾನ ತೆಗೆದುಕೊಳ್ಳುವಂತೆ ಒತ್ತಡ ಹೇರಲಾಗುವುದು.

ಮುಡಾ ಪ್ರಕರಣ ಸಿಎಂ ವಿಚಾರಣೆ: 'ನಮಗೆ ಸಂವಿಧಾನ, ಕಾನೂನಿನ ಮೇಲೆ ಸಂಪೂರ್ಣ ವಿಶ್ವಾಸವಿದೆ' ಎಂದ ಲಕ್ಷ್ಮೀ ಹೆಬ್ಬಾಳ್ಕರ್

ಕೇಂದ್ರ ಸಚಿವ ಕುಮಾರಸ್ವಾಮಿ, ಮಾಜಿ ಸಚಿವರಾದ ಮುರುಗೇಶ್ ನಿರಾಣಿ, ಜನಾರ್ಧನ ರೆಡ್ಡಿ ಅರ್ಜಿಗಳು ರಾಜ್ಯಪಾಲರ ಮುಂದೆ ಬಾಕಿ ಇವೆ. ಹೀಗಾಗಿ ಪಕ್ಷಪಾತಿ ಧೋರಣೆ ಬಿಟ್ಟು ಪ್ರಾಸಿಕ್ಯೂಷನ್ ಗೆ ಅನುಮತಿ ನೀಡಿ ಎಂದು ರಾಜ್ಯಪಾಲರ ಮೇಲೆ ಒತ್ತಡ ಹಾಕಲು ಪ್ರತಿಭಟನೆ ಮಾಡಲು ಕಾಂಗ್ರೆಸ್‌ ಮುಂದಾಗಿದೆ.

ರಾಜಭವನ ಚಲೋ ಯಾಕೆ..?

- ರಾಜ್ಯಪಾಲರ ವಿರುದ್ಧ ಕಾನೂನು ಹೋರಾಟದ ಜೊತೆಗೆ ರಾಜಕೀಯ ಹೋರಾಟವೂ ಅನಿಚಾರ್ಯ

- ಸಿಎಂ ಸಿದ್ದರಾಮಯ್ಯ ವಿರುದ್ಧ ತೆಗೆದುಕೊಂಡ ನಿರ್ಣಯದಷ್ಟೇ ವೇಗವಾಗಿ ಬಿಜೆಪಿ ಜೆಡಿಎಸ್ ನಾಯಕರ

ಪ್ರಾಸಿಕ್ಯೂಷನ್ ಅರ್ಜಿ ಇತ್ಯರ್ಥಕ್ಕೆ ಆಗ್ರಹ

- ರಾಜ್ಯಪಾಲರು ಪಕ್ಷಪಾತಿಯಾಗಿ ನಡೆದುಕೊಂಡಿದ್ದಾರೆ ಎಂಬುದನ್ನ ಸಾರ್ವಜನಿಕರಿಗೆ ಮನದಟ್ಟು ಮಾಡಲು ಪ್ಲಾನ್

- ಕೇಂದ್ರ ಸಚಿವ ಕುಮಾರಸ್ವಾಮಿ ಪದೇ ಪದೇ ಸರ್ಕಾರದ ಮೇಲೆ ಅಟ್ಯಾಕ್ ಮಾಡ್ತಿರುವ ಬೆನ್ನಲ್ಲೇ ತಿರುಗೇಟು ನೀಡಲು ಈ ಹೋರಾಟ

- ಸಿಎಂ ಸಿದ್ದರಾಮಯ್ಯ ವಿರುದ್ಧ ಉದ್ದೇಶಪೂರ್ವಕವಾಗೇ ರಾಜ್ಯಪಾಲರು ಪ್ರಾಸಿಕ್ಯೂಷನ್ ಗೆ ಅನುಮತಿ ನೀಡಿದ್ದಾರೆ ಎಂಬುದನ್ನ ಪ್ರಚಾರ ಮಾಡಲು ಹೋರಾಟ

- ಈ ಹೋರಾಟದ ಮೂಲ ಕೇಂದ್ರ ಸರ್ಕಾರಕ್ಕೂ ಸಂದೇಶ ರವಾನಿಸುವುದು ಕಾಂಗ್ರೆಸ್ ಪ್ಲಾನ್

- ಈಗಾಗಲೇ ಪ್ರಮುಖ ವಿಧೇಯಕ ವಾಪಸ್ ಕಳಿಸುವ ಮೂಲಕ ರಾಜ್ಯಪಾಲರ ಮೇಲೆ ಸರ್ಕಾರ ಆಕ್ರೋಶ ತೋರಿಸುವ ಹೋರಾಟವೂ ಹೌದು

PREV
Catch up on the latest political news from Karnataka and India (ರಾಜಕೀಯ ಸುದ್ದಿ) — election results, government decisions, party updates, and in-depth political analysis on Kannada Prabha.

Recommended Stories

ಅಧಿಕಾರಕ್ಕಾಗಿ ಅಪವಿತ್ರ ರಾಜಕೀಯ ಮೈತ್ರಿ - ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ವೈರಿಗಳ ಮಿಲನ
ಹುಬ್ಬಳ್ಳಿಯಲ್ಲಿ ಬಿಜೆಪಿ ಕಾರ್ಯಕರ್ತೆ ವಿವಸ್ತ್ರ ವಿವಾದ