ಮಹಿಳೆಯರಿಗೆ ಸಮಾನ ಅವಕಾಶ ಕಲ್ಪಿಸಿ: ರಾಮಲಿಂಗಾರೆಡ್ಡಿ

KannadaprabhaNewsNetwork |  
Published : Mar 14, 2026, 03:45 AM IST
KSRTC 3 | Kannada Prabha

ಸಾರಾಂಶ

ಮಹಿಳೆಯರ ಸಬಲೀಕರಣ ಸಮಾಜದ ಅಭಿವೃದ್ಧಿಗೆ ಅತ್ಯಂತ ಮುಖ್ಯವಾಗಿದ್ದು, ಅವರಿಗೆ ಸಮಾನ ಅವಕಾಶ ಮತ್ತು ಸುರಕ್ಷಿತ ವಾತಾವರಣ ಒದಗಿಸುವುದು ಪ್ರತಿಯೊಬ್ಬರ ಕರ್ತವ್ಯವಾಗಿದೆ ಎಂದು ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ತಿಳಿಸಿದರು.

ಕನ್ನಡಪ್ರಭ ವಾರ್ತೆ ಬೆಂಗಳೂರು

ಮಹಿಳೆಯರ ಸಬಲೀಕರಣ ಸಮಾಜದ ಅಭಿವೃದ್ಧಿಗೆ ಅತ್ಯಂತ ಮುಖ್ಯವಾಗಿದ್ದು, ಅವರಿಗೆ ಸಮಾನ ಅವಕಾಶ ಮತ್ತು ಸುರಕ್ಷಿತ ವಾತಾವರಣ ಒದಗಿಸುವುದು ಪ್ರತಿಯೊಬ್ಬರ ಕರ್ತವ್ಯವಾಗಿದೆ ಎಂದು ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ತಿಳಿಸಿದರು.

ಕೆಎಸ್ಸಾರ್ಟಿಸಿ ಕೇಂದ್ರ ಕಚೇರಿಯಲ್ಲಿ ಶುಕ್ರವಾರ ಕೆಎಸ್ಸಾರ್ಟಿಸಿಯಿಂದ ಆಯೋಜಿಸಲಾಗಿದ್ದ ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಸಮಾಜದ ಪ್ರತಿ ಕ್ಷೇತ್ರಗಳಲ್ಲಿ ಮಹಿಳೆಯರು ತಮ್ಮದೇ ಅದ ಕೊಡುಗೆ ನೀಡುತ್ತಿದ್ದಾರೆ. ಕುಟುಂಬ, ಶಿಕ್ಷಣ, ವಿಜ್ಞಾನ, ಸಾಮಾಜಿಕ, ರಾಜಕೀಯ ಆರ್ಥಿಕತೆ ಸೇರಿದಂತೆ ಎಲ್ಲ ಕ್ಷೇತ್ರಗಳಲ್ಲೂ ತಮ್ಮ ಛಾಪು ಮೂಡಿಸಿದ್ದಾರೆ. ಮಹಿಳೆಯರ ಸಬಲೀಕರಣವು ಸಮಾಜದ ಅಭಿವೃದ್ಧಿಗೆ ಅತ್ಯಂತ ಮುಖ್ಯವಾಗಿದ್ದು, ಅವರಿಗೆ ಸಮಾನ ಅವಕಾಶ ಮತ್ತು ಸುರಕ್ಷಿತ ವಾತಾವರಣವನ್ನು ಒದಗಿಸುವುದು ಪ್ರತಿಯೊಬ್ಬರ ಕರ್ತವ್ಯವಾಗಿದೆ ಎಂದರು.

ನಾಲ್ಕೂ ಸಾರಿಗೆ ನಿಗಮಗಳಲ್ಲಿ 1.04 ಲಕ್ಷ ಸಿಬ್ಬಂದಿಯಿದ್ದು, ಅವರಲ್ಲಿ 8,956 ಮಹಿಳಾ ಸಿಬ್ಬಂದಿ ಕರ್ತವ್ಯ ನಿರ್ವಹಿಸುತ್ತಿದ್ದಾರೆ. 3,167 ನಿರ್ವಾಹಕರು, 2254 ತಾಂತ್ರಿಕ ಸಿಬ್ಬಂದಿ, 3535 ಆಡಳಿತ ಸಿಬ್ಬಂದಿಯಾಗಿದ್ದಾರೆ. ಶಕ್ತಿ ಯೋಜನೆಯು ಮಹಿಳಾ ಸಬಲೀಕರಣಕ್ಕೆ ತನ್ನದೇ ಕೊಡುಗೆ ನೀಡುತ್ತಿದೆ. ಮಾ.12ರವರೆಗೆ 688 ಕೋಟಿ ಉಚಿತ ಪ್ರಯಾಣ ದಾಖಲಾಗಿದೆ ಎಂದು ವಿವರಿಸಿದರು.

ಕಾರ್ಯಕ್ರಮದಲ್ಲಿ ವಿಜ್ಞಾನ ಮತ್ತು ತಂತ್ರಜ್ಞಾನ ಕ್ಷೇತ್ರದಲ್ಲಿ ಗಣನೀಯ ಸಾಧನೆ ಮಾಡಿದ ಪದ್ಮಶ್ರೀ ಪ್ರಶಸ್ತಿ ಪುರಸ್ಕೃತೆ ಡಾ. ವಿ.ಶುಭಾ ಅವರನ್ನು ಸನ್ಮಾನಿಸಲಾಯಿತು. ಅವರೊಂದಿಗೆ ಉತ್ತಮ ಕಾರ್ಯನಿರ್ವಹಣೆ ತೋರಿದ 46 ಮಹಿಳಾ ಸಿಬ್ಬಂದಿಯನ್ನು ಗೌರವಿಸಲಾಯಿತು. ಕೆಎಸ್ಸಾರ್ಟಿಸಿ ವ್ಯವಸ್ಥಾಪಕ ನಿರ್ದೇಶಕ ಅಕ್ರಂ ಪಾಷ, ನಿರ್ದೇಶಕಿ ಕೆ.ಎಂ.ಗಾಯಿತ್ರಿ ಸೇರಿದಂತೆ ಇತರರಿದ್ದರು.

70 ಪಲ್ಲಕ್ಕಿ ಬಸ್‌ಗಳಿಗೆ ಚಾಲನೆ:

ಮಹಿಳಾ ದಿನಾಚರಣೆ ಕಾರ್ಯಕ್ರಮದ ನಂತರ ಕೆಎಸ್ಸಾರ್ಟಿಸಿಗೆ ನೂತನವಾಗಿ 45 ಕರ್ನಾಟಕ ಸಾರಿಗೆ ಮತ್ತು 70 ಪಲ್ಲಕ್ಕಿ ಬಸ್‌ಗಳನ್ನು ರಾಮಲಿಂಗಾರೆಡ್ಡಿ ಅವರು ನಿಗಮಕ್ಕೆ ಸೇರ್ಪಡೆ ಮಾಡಿದರು. ಈ ಬಸ್‌ಗಳು ಉಡುಪಿ, ಮಂಗಳೂರು, ಮೈಸೂರು ಸೇರಿದಂತೆ ರಾಜ್ಯದ ವಿವಿಧ ಕಡೆಗಳಿಗೆ ಹಾಗೂ ಚೆನ್ನೈ, ಹೈದರಾಬಾದ್‌, ಎರ್ನಾಕುಲಂ, ಕುಂಭಕೋಣಂ, ಪಣಜಿ ಸೇರಿ ಹೊರರಾಜ್ಯಗಳ ನಗರಗಳಿಗೆ ಸೇವೆ ನೀಡಲಿವೆ.

PREV
Catch up on the latest political news from Karnataka and India (ರಾಜಕೀಯ ಸುದ್ದಿ) — election results, government decisions, party updates, and in-depth political analysis on Kannada Prabha.

Recommended Stories

ಯುದ್ಧದಿಂದ ರಾಜ್ಯದಲ್ಲಿ ಸಿಲುಕಿರುವ ಪ್ರವಾಸಿಗರ ಆತಿಥ್ಯಕ್ಕೆ ಕ್ರಮ: ಎಚ್‌.ಕೆ.ಪಾಟೀಲ್‌
ಚಾಟ್‌ ಜಿಪಿಟಿಯಲ್ಲಿ ಐದು ಪ್ರಶ್ನೆ ಕೇಳಿದರೆ 500 ಲೀ. ನೀರು ಬಳಕೆ