ರಾಯ್‌ಬರೇಲಿಗೆ ರಾಹುಲ್‌: ಕೇರಳದಲ್ಲಿ ಮಿಶ್ರ ಪ್ರತಿಕ್ರಿಯೆ

KannadaprabhaNewsNetwork |  
Published : May 05, 2024, 02:00 AM ISTUpdated : May 05, 2024, 04:47 AM IST
Rahul Gandhi target Modi

ಸಾರಾಂಶ

ಕೇರಳದ ವಯನಾಡ್‌ ಕ್ಷೇತ್ರದ ಕಾಂಗ್ರೆಸ್‌ ಅಭ್ಯರ್ಥಿ ರಾಹುಲ್‌ ಗಾಂಧಿ ಅವರು ಉತ್ತರ ಪ್ರದೇಶದ ರಾಯ್‌ಬರೇಲಿಯಲ್ಲಿ ಶುಕ್ರವಾರ ನಾಮಪತ್ರ ಸಲ್ಲಿಕೆ ಮಾಡಿದ ಬೆನ್ನಲ್ಲೇ ಕೇರಳದಲ್ಲಿ ಮಿಶ್ರ ಪ್ರತಿಕ್ರಿಯೆಗಳು ಬಂದಿವೆ.

ತಿರುವನಂತಪುರ: ಕೇರಳದ ವಯನಾಡ್‌ ಕ್ಷೇತ್ರದ ಕಾಂಗ್ರೆಸ್‌ ಅಭ್ಯರ್ಥಿ ರಾಹುಲ್‌ ಗಾಂಧಿ ಅವರು ಉತ್ತರ ಪ್ರದೇಶದ ರಾಯ್‌ಬರೇಲಿಯಲ್ಲಿ ಶುಕ್ರವಾರ ನಾಮಪತ್ರ ಸಲ್ಲಿಕೆ ಮಾಡಿದ ಬೆನ್ನಲ್ಲೇ ಕೇರಳದಲ್ಲಿ ಮಿಶ್ರ ಪ್ರತಿಕ್ರಿಯೆಗಳು ಬಂದಿವೆ.

ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಮುಸ್ಲಿಂ ಲೀಗ್‌ ನಾಯಕ ಪಿ.ಕೆ. ಕುನ್ಹಾಲಿಕುಟ್ಟಿ, ‘ರಾಹುಲ್ ಗಾಂಧಿ ರಾಯ್‌ಬರೇಲಿಯಲ್ಲಿ ಸ್ಪರ್ಧೆ ಮಾಡುತ್ತಿರುವುದು ಆ ಪಕ್ಷದ ನಿರ್ಧಾರ ಮತ್ತು ಅವರ ನಿರ್ಧಾರ. ಅದರಲ್ಲಿ ತಪ್ಪೇನಿದೆ. ಕಳೆದ ಚುನಾವಣೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಎರಡು ಕ್ಷೇತ್ರಗಳಿಂದ ಸ್ಪರ್ಧೆ ಮಾಡಿದ್ದರು. ರಾಹುಲ್‌ ಗಾಂಧಿ ಅವರ ಈ ನಿರ್ಧಾರದಿಂದ ಇಂಡಿಯಾ ಕೂಟಕ್ಕೆ ಶಕ್ತಿ ನೀಡುತ್ತದೆ’ ಎಂದು ಹೇಳಿದ್ದಾರೆ.

ಆದರೆ ಕೆಲವರು, ‘ರಾಹುಲ್‌ ಗಾಂಧಿ ರಾಯ್‌ಬರೇಲಿಯಲ್ಲಿ ಸ್ವರ್ಧೆ ಮಾಡಬಾರದಿತ್ತು. ಒಂದು ವೇಳೆ ಎರಡೂ ಕ್ಷೇತ್ರಗಳಲ್ಲಿ ಗೆದ್ದರೆ ವಯನಾಡನ್ನು ತೊರೆಯಬೇಕಾಗುತ್ತದೆ. ಅವರು ನಿರ್ಧಾರ ತಪ್ಪು’ ಎಂದು ಬೇಸರ ವ್ಯಕ್ತ ಪಡಿಸಿದ್ದಾರೆ.

PREV
Catch up on the latest political news from Karnataka and India (ರಾಜಕೀಯ ಸುದ್ದಿ) — election results, government decisions, party updates, and in-depth political analysis on Kannada Prabha.

Recommended Stories

ಬೇರೆ ಮಂತ್ರಿ ಖಾತೆ ಒತ್ತುವರೀಲೂ ಡಿಕೆಶಿ ನಿಸ್ಸೀಮ : ಎಚ್‌ಡಿಕೆ ಟಾಂಗ್‌
ನಂಬಿಕೆಗಿಂತ ದೊಡ್ಡ ಗುಣ ಬೇರೆ ಇಲ್ಲ, ತಾಳ್ಮೆ ಇದ್ದರೆ ಜಗತ್ತೇ ಗೆಲ್ಲಬಹುದು : ಡಿಕೆ