ಸಶಕ್ತ ಮಹಿಳೆಯರು ದೇಶದ ಹಣೆಬರಹವನ್ನೇ ಬದಲಿಸುವಷ್ಟು ಸಬಲರಾಗಿರುತ್ತಾರೆ. ಈ ಹಿನ್ನೆಲೆಯಲ್ಲಿ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬಂದಲ್ಲಿ ಸರ್ಕಾರಿ ಉದ್ಯೋಗದಲ್ಲಿ ಮಹಿಳೆಯರಿಗೆ ಶೇ.50ರಷ್ಟು ಮೀಸಲು ಜಾರಿ ಮಾಡುವುದಾಗಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಪುನರುಚ್ಚರಿಸಿದ್ದಾರೆ.
ನವದೆಹಲಿ: ಸಶಕ್ತ ಮಹಿಳೆಯರು ದೇಶದ ಹಣೆಬರಹವನ್ನೇ ಬದಲಿಸುವಷ್ಟು ಸಬಲರಾಗಿರುತ್ತಾರೆ. ಈ ಹಿನ್ನೆಲೆಯಲ್ಲಿ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬಂದಲ್ಲಿ ಸರ್ಕಾರಿ ಉದ್ಯೋಗದಲ್ಲಿ ಮಹಿಳೆಯರಿಗೆ ಶೇ.50ರಷ್ಟು ಮೀಸಲು ಜಾರಿ ಮಾಡುವುದಾಗಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಪುನರುಚ್ಚರಿಸಿದ್ದಾರೆ.
ಈ ಕುರಿತು ಟ್ವೀಟ್ ಮಾಡಿ, ‘ರಾಷ್ಟ್ರದ ಜನಸಂಖ್ಯೆಯಲ್ಲಿ ಶೇ.50ರಷ್ಟು ಮಹಿಳೆಯರಿದ್ದರೂ, ಉನ್ನತ ಶಿಕ್ಷಣ ಪಡೆಯುವವರಲ್ಲಿ ಶೇ.50ರಷ್ಟು ಮಹಿಳೆಯರಿದ್ದರೂ, ನಮ್ಮ ದೇಶದಲ್ಲಿ ಮೂವರ ಪೈಕಿ ಒಬ್ಬಾಕೆ ಮಾತ್ರ ಮಹಿಳೆ ಉದ್ಯೋಗಿಯಾಗಿದ್ದಾಳೆ.
ಜೊತೆಗೆ ಸರ್ಕಾರಿ ಉದ್ಯೋಗದಲ್ಲಿ ಮಹಿಳಾ ಸಿಬ್ಬಂದಿ ಕೇವಲ ಶೇ.10ರಷ್ಟಿದ್ದಾರೆ. ಈ ಅಸಮಾನತೆಯನ್ನು ತೊಲಗಿಸಲು ನಮ್ಮ ಸರ್ಕಾರ ಅಧಿಕಾರಕ್ಕೆ ಬಂದ ಕೂಡಲೇ ಸರ್ಕಾರಿ ಉದ್ಯೋಗದಲ್ಲಿ ಶೇ.50ರಷ್ಟು ಮಹಿಳಾ ಮೀಸಲು ಜಾರಿ ಮಾಡುತ್ತೇವೆ.
ಅವರಿಗೆ ಉದ್ಯೋಗ ದೊರೆತಲ್ಲಿ ರಾಷ್ಟ್ರದ ಆರ್ಥಿಕ ಸ್ಥಿತಿಯನ್ನೇ ಬದಲಿಸುವಷ್ಟು ಕಾಣಿಕೆ ನೀಡುತ್ತಾರೆ’ ಎಂದು ತಿಳಿಸಿದರು. ಕಾಂಗ್ರೆಸ್ ಘೋಷಣೆ ಮಾಡಿದ್ದ ನಾರಿ ನ್ಯಾಯದಲ್ಲಿ ಈ ಅಂಶವನ್ನು ಪ್ರಸ್ತಾಪಿಸಿತ್ತು.