ಸತ್ತವರು ಎದ್ದುಬಂದಾಗ.. ! 7 ಮತದಾರರ ಜತೆ ‘ಚಾಯ್ ಪೇ ಚರ್ಚಾ’

KannadaprabhaNewsNetwork |  
Published : Aug 14, 2025, 01:02 AM IST
ರಾಹುಲ್‌ ಟೀ ಪಾರ್ಟಿ | Kannada Prabha

ಸಾರಾಂಶ

ಬಿಹಾರದಲ್ಲಿ ಮತದಾರರ ಪಟ್ಟಿ  ಪರಿಷ್ಕರಣೆಯಲ್ಲಿ ಭಾರೀ ಅಕ್ರಮ ನಡೆದಿದೆ ಎಂದು ಸತತ ವಾಗ್ದಾಳಿ ನಡೆಸುತ್ತಿರುವ ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ, ಮತದಾರರ ಪಟ್ಟಿ ಪರಿಷ್ಕರಣೆ ವೇಳೆ ‘ಮೃತಪಟ್ಟಿದ್ದಾರೆ’ ಎಂಬ ಕಾರಣ ನೀಡಿ ಚುನಾವಣಾ ಆಯೋಗ ಕೈಬಿಟ್ಟಿದ್ದ 7 ಮತದಾರರ ಜತೆ ‘ಚಾಯ್ ಪೇ ಚರ್ಚಾ’ ನಡೆಸಿದ್ದಾರೆ.

ನವದೆಹಲಿ: ಬಿಹಾರದಲ್ಲಿ ನಡೆದ ಮತದಾರರ ಪಟ್ಟಿಯ ವಿಶೇಷ ಪರಿಷ್ಕರಣೆಯಲ್ಲಿ ಭಾರೀ ಅಕ್ರಮ ನಡೆದಿದೆ ಎಂದು ಸತತ ವಾಗ್ದಾಳಿ ನಡೆಸುತ್ತಿರುವ ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ, ಮತದಾರರ ಪಟ್ಟಿ ಪರಿಷ್ಕರಣೆ ವೇಳೆ ‘ಮೃತಪಟ್ಟಿದ್ದಾರೆ’ ಎಂಬ ಕಾರಣ ನೀಡಿ ಚುನಾವಣಾ ಆಯೋಗ ಕೈಬಿಟ್ಟಿದ್ದ 7 ಮತದಾರರ ಜತೆ ‘ಚಾಯ್ ಪೇ ಚರ್ಚಾ’ ನಡೆಸಿದ್ದಾರೆ. ಈ ಮೂಲಕ ಚುನಾವಣಾ ಆಯೋಗದ ಲೋಪಗಳ ವಿರುದ್ಧ ಮತ್ತಷ್ಟು ಸಾಕ್ಷ್ಯಗಳನ್ನು ಹೊರಹಾಕುವ ಯತ್ನ ಮಾಡಿದ್ದಾರೆ.

ಎಕ್ಸ್‌ನಲ್ಲಿ ಈ ಕುರಿತ ವಿಡಿಯೋವೊಂದನ್ನು ಪೋಸ್ಟ್‌ ಮಾಡಿರುವ ರಾಹುಲ್‌ ಗಾಂಧಿ, ‘ಜೀವನದಲ್ಲಿ ಹಲವು ಕುತೂಹಲಕಾರಿ ಅನುಭವಗಳಾಗಿವೆ. ಆದರೆ ಇಲ್ಲಿಯವರೆಗೆ ಸತ್ತವರೊಂದಿಗೆ ಕುಳಿತು ಟೀ ಕುಡಿಯುವ ಅವಕಾಶ ಸಿಕ್ಕಿರಲಿಲ್ಲ. ಈ ಅಮೋಘ ಅನುಭವಕ್ಕಾಗಿ ಚುನಾವಣಾ ಆಯೋಗಕ್ಕೆ ಧನ್ಯವಾದ ತಿಳಿಸುತ್ತೇನೆ’ ಎಂದು ವ್ಯಂಗ್ಯವಾಡಿದ್ದಾರೆ.

ವಿಡಿಯೋದಲ್ಲಿ 4 ಪುರುಷರು ಮತ್ತು 3 ಮಹಿಳೆಯರೊಂದಿಗೆ ರಾಹುಲ್‌ ಮಾತಾಡುತ್ತಿರುವುದನ್ನು ಕಾಣಬಹುದಾಗಿದೆ. ‘ವಿಶೇಷ ಪರಿಷ್ಕರಣೆ ವೇಳೆ ನಮ್ಮನ್ನು ಮೃತರೆಂದು ಘೋಷಿಸಿದ್ದು ತಿಳಿದುಬಂತು. ಈ ಪ್ರಕ್ರಿಯೆಯಲ್ಲಿ ತೆಗೆದುಹಾಕಲ್ಪಟ್ಟ 65 ಲಕ್ಷ ಜನರಲ್ಲಿ ನಾವೂ ಇದ್ದೆವು. ನಮ್ಮ ಮತದಾನದ ಹಕ್ಕನ್ನು ಮರಳಿ ಪಡೆಯಲು ಸುಪ್ರೀಂ ಕೋರ್ಟ್‌ ಮೊರೆ ಹೋಗಿದ್ದು, ಈ ಬಗ್ಗೆ ವಿಚಾರಣೆ ನಡೆಯುತ್ತಿದೆ’ ಎಂದು ಅವರು ಹೇಳಿದ್ದಾರೆ.

ಇದೇ ವೇಳೆ ರಾಹುಲ್‌, ‘ದೆಹಲಿ ಸುತ್ತಿ ಬನ್ನಿ. ಸತ್ತವರ ಬಳಿ ಟಿಕೆಟ್‌ ಕೇಳುವುದಿಲ್ಲ’ ಎಂದೂ ಮೃತರೆಂದು ಘೋಷಿಸಲ್ಪಟ್ಟವರ ಜತೆ ತಮಾಷೆ ಮಾಡಿದ್ದನ್ನು ಕಾಣಬಹುದು.

PREV
Catch up on the latest political news from Karnataka and India (ರಾಜಕೀಯ ಸುದ್ದಿ) — election results, government decisions, party updates, and in-depth political analysis on Kannada Prabha.
Read more Articles on

Recommended Stories

ಸಿದ್ದರಾಮಯ್ಯ ಭೇಟಿ ಮಾಡಿದ ರಮೇಶ್‌ ಜಾರಕಿಹೊಳಿ : ಕುತೂಹಲ!
ವೈದ್ಯಕೀಯ ಪರಿಹಾರ ನಿಧಿ ಹಣಕ್ಕೆ ಬೆಂಗಳೂರು ಪಾಲಿಕೆ ತಡೆ