'ಗ್ಯಾರಂಟಿ ಜಾರಿ ಆಗಿಲ್ಲಾಂದ್ರೆ ರಾಜೀನಾಮೆ : ಮೋದಿ ಅವರೇ ಕರ್ನಾಟಕಕ್ಕೆ ಬಂದು ನೋಡಿ'

ಸಾರಾಂಶ

ಗ್ಯಾರಂಟಿಗಳನ್ನು ಟೀಕಿಸಿದ ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಮುಖ್ಯಮಂತ್ರಿ ಸಿದ್ದರಾಮಯ್ಯ ಗರಂ ಆಗಿದ್ದಾರೆ. ‘ಸುಳ್ಳು ಜಾಹೀರಾತು ನೀಡಿದ ಮಹಾರಾಷ್ಟ್ರ ಸರ್ಕಾರಕ್ಕೆ ನಾಚಿಕೆ ಇಲ್ಲ. ಕರ್ನಾಟಕಕ್ಕೆ ಬಂದು ನೋಡಿ, ಗ್ಯಾರಂಟಿಗಳು ಜಾರಿ ಆಗಿಲ್ಲ ಎಂದರೆ ರಾಜೀನಾಮೆ ನೀಡುತ್ತೇನೆ’ ಎಂದಿದ್ದಾರೆ.

ಸೊಲ್ಲಾಪುರ: ಕರ್ನಾಟಕದಲ್ಲಿ ಗ್ಯಾರಂಟಿ ಯೋಜನೆಗಳನ್ನು ಜಾರಿ ಮಾಡದೇ ಕರ್ನಾಟಕದ ಕಾಂಗ್ರೆಸ್‌ ಸರ್ಕಾರ ಜನತೆಗೆ ವಂಚಿಸಿದೆ ಎಂದು ಜಾಹೀರಾತು ನೀಡಿದ ಮಹಾರಾಷ್ಟ್ರ ಸರ್ಕಾರದ ವಿರುದ್ಧ ಹಾಗೂ ಗ್ಯಾರಂಟಿಗಳನ್ನು ಟೀಕಿಸಿದ ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಮುಖ್ಯಮಂತ್ರಿ ಸಿದ್ದರಾಮಯ್ಯ ಗರಂ ಆಗಿದ್ದಾರೆ. ‘ಸುಳ್ಳು ಜಾಹೀರಾತು ನೀಡಿದ ಮಹಾರಾಷ್ಟ್ರ ಸರ್ಕಾರಕ್ಕೆ ನಾಚಿಕೆ ಇಲ್ಲ. ಕರ್ನಾಟಕಕ್ಕೆ ಬಂದು ನೋಡಿ, ಗ್ಯಾರಂಟಿಗಳು ಜಾರಿ ಆಗಿಲ್ಲ ಎಂದರೆ ರಾಜೀನಾಮೆ ನೀಡುತ್ತೇನೆ’ ಎಂದಿದ್ದಾರೆ.

ಮಹಾರಾಷ್ಟ್ರ ವಿಧಾನಸಭೆ ಚುನಾವಣೆ ಪ್ರಚಾರ ನಡೆಸುತ್ತಿರುವ ಸಿದ್ದರಾಮಯ್ಯ ಸೊಲ್ಲಾಪುರದಲ್ಲಿ ಶನಿವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ‘ ಪ್ರಧಾನಿ ನರೇಂದ್ರ ಮೋದಿ ಮತ್ತು ಬಿಜೆಪಿ ಸುಳ್ಳಿನ ಸರದಾರರೇ ಕರ್ನಾಟಕಕ್ಕೆ ಬಂದು ನೋಡಿ. ನಿಮಗೆ ವಿಶೇಷ ವಿಮಾನದ ವ್ಯವಸ್ಥೆ ನಾನೇ ಮಾಡುತ್ತೇನೆ. ಕರ್ನಾಟಕದಲ್ಲಿ ಗ್ಯಾರಂಟಿಗಳು ಜಾರಿ ಆಗಿಲ್ಲ ಎಂದರೆ ನಾನು ರಾಜೀನಾಮೆ ನೀಡುತ್ತೇನೆ. ನಮ್ಮ ನೆಲದಲ್ಲಿ ಗ್ಯಾರಂಟಿಗಳು ಜಾರಿ ಆಗಿರುವುದು ಸತ್ಯ. ಆದರೆ, ನಿಮ್ಮ ಸುಳ್ಳು ಜಾಹೀರಾತನ್ನು ವಾಪಾಸ್ ಪಡೆದು ಮಹಾರಾಷ್ಟ್ರ ಜನತೆಯ ಕ್ಷಮೆ ಕೇಳಬೇಕು. ಈ ಸವಾಲು ಸ್ವೀಕರಿಸುತ್ತೀರಾ?’ ಎಂದರು.

‘ವರ್ಷಕ್ಕೆ 56 ಸಾವಿರ ಕೋಟಿ ರೂಪಾಯಿಯನ್ನು ಗ್ಯಾರಂಟಿಗಳ ಮೂಲಕ ನಮ್ಮ ರಾಜ್ಯದ ಕೋಟಿ ಕೋಟಿ ಜನರ ಖಾತೆಗೆ ನೇರವಾಗಿ ಹಣ ಹಾಕುತ್ತಿದ್ದೇವೆ’ ಎಂದೂ ಅವರು ನುಡಿದರು.

Share this article