ಲಖನೌ: ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಉತ್ತರ ಪ್ರದೇಶದಲ್ಲಿ ಬಿಜೆಪಿಗೆ ಹಿನ್ನಡೆಯಾಗಲು ದಲಿತ ಮತ್ತು ಹಿಂದುಳಿದ ವರ್ಗಗಳ ಮತಬ್ಯಾಂಕ್ ವಿಭಜನೆಯಾಗಿದ್ದೇ ಪ್ರಮುಖ ಕಾರಣ. ಈ ವರ್ಗದ ಮತಗಳನ್ನು ಸೆಳೆಯುವಲ್ಲಿ ಕಾಂಗ್ರೆಸ್-ಸಮಾಜವಾದಿ ಮೈತ್ರಿಕೂಟ ಯಶಸ್ವಿಯಾಗಿದ್ದು ಬಿಜೆಪಿ ಹಿನ್ನಡೆಗೆ ಕಾರಣವಾಯ್ತು ಎಂದು ಆರ್‌ಎಸ್‌ಎಸ್ ವಿಶ್ಲೇಷಣೆ ಮಾಡಿದೆ.
ಆದ್ದರಿಂದ ಸಂಘವು ಈಗ ಉದ್ಯೋಗ ಹೆಚ್ಚಿಸುವಂತಹ ವಿಷಯಗಳಲ್ಲಿ ಕೆಲಸ ಮಾಡಲು ನಿರ್ಧರಿಸಿದೆ. ಇದು ದಲಿತರು ಮತ್ತು ಹಿಂದುಳಿದ ವರ್ಗಗಳಿಗೆ ತಲುಪುವಂತೆ ಕಾರ್ಯ ನಿರ್ವಹಿಸಲಿದೆ ಎಂದು ಮೂಲಗಳು ತಿಳಿಸಿವೆ.
ಈ ನಿಟ್ಟಿನಲ್ಲೇ ಉತ್ತರಪ್ರದೇಶದ ಪ್ರಮುಖ ಪ್ರದೇಶಗಳಲ್ಲಿನ ತನ್ನ ಪ್ರಚಾರಕರನ್ನು ಸ್ಥಳಾಂತರ ಮಾಡಿ ಮರು ಸಂಘಟನೆಗೆ ಕಾರ್ಯತಂತ್ರ ರೂಪಿಸಿದೆ. ಇದರಿಂದ ಉತ್ತರಪ್ರದೇಶದಲ್ಲಿ ಬಿಜೆಪಿ ಮತ್ತೆ ಹಿಡಿತ ಸಾಧಿಸಬಹುದು.80 ಲೋಕಸಭಾ ಸ್ಥಾನಗಳ ಪೈಕಿ ಸಮಾಜವಾದಿ ಪಕ್ಷ 37, ಕಾಂಗ್ರೆಸ್ 6 ಸ್ಥಾನಗಳಲ್ಲಿ ಗೆಲುವು ಸಾಧಿಸಿತ್ತಿ. ಬಿಜೆಪಿ 33 ಸ್ಥಾನಗಳಲ್ಲಿ ಮಾತ್ರ ಗೆದ್ದಿತ್ತು.