ಜೈಪುರ: ರಾಜಸ್ಥಾನದ ಕಾಂಗ್ರೆಸ್ ನಾಯಕ ಸಚಿನ್ ಪೈಲಟ್ ತಮ್ಮ ಪತ್ನಿ ಸಾರಾ ಅಬ್ದುಲ್ಲಾ ಅವರೊಂದಿಗೆ ವಿಚ್ಛೇದನ ಪಡೆದುಕೊಂಡಿದ್ದಾರೆ. ಈ ವಿಷಯ ಅವರು ಸಲ್ಲಿಸಿರುವ ಚುನಾವಣಾ ಅಫಿಡವಿಟ್‌ನಿಂದ ಬಹಿರಂಗವಾಗಿದೆ. ಎರಡು ದಶಕಗಳ ಕಾಲ ದಾಂಪತ್ಯ ಜೀವನ ನಡೆಸಿದ್ದ ದಂಪತಿ ಇತ್ತೀಚೆಗೆ ದೂರವಾಗಿದ್ದಾರೆ ಎನ್ನು ಮಾಹಿತಿ ಹಬ್ಬಿತ್ತಾದರೂ ಅಧಿಕೃತಗೊಂಡಿರಲಿಲ್ಲ. ಸಾರಾ ಅಬ್ದುಲ್ಲಾ ಜಮ್ಮು ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಫಾರೂಖ್ ಅಬ್ದುಲ್ಲಾ ಅವರ ಪುತ್ರಿ.