ಸಚಿವ ಪ್ರಿಯಾಂಕ್ ಖರ್ಗೆಯನ್ನು ಕೂಡಲೇ ಸಂಪುಟದಿಂದ ವಜಾ ಮಾಡಿ : ಎಚ್.ಡಿ.ಕುಮಾರಸ್ವಾಮಿ ಆಗ್ರಹ

KannadaprabhaNewsNetwork |  
Published : Aug 27, 2024, 01:42 AM ISTUpdated : Aug 27, 2024, 04:24 AM IST
26ಕೆಎಂಎನ್ ಡಿ20 | Kannada Prabha

ಸಾರಾಂಶ

ಮುಡಾ ರೀತಿ ಸಚಿವ ಪ್ರಿಯಾಂಕ ಖರ್ಗೆ ಅವರ ವಿಚಾರವೂ ಹೊರಗೆ ಬಂದಿದೆ. ಬುದ್ಧ ವಿಹಾರ ಕಟ್ಟಲು ಸಿದ್ಧಾರ್ಥ ವಿಹಾರ್ ಟ್ರಸ್ಟ್ ಸ್ಥಾಪಿಸಿದ್ದಾರೆ. ಅದೊಂದು ಧಾರ್ಮಿಕ ಸಂಸ್ಥೆ. ಆದರೆ, ಇದನ್ನು ಯಾವುದೋ ವ್ಯವಹಾರ ಮಾಡುವುದಕ್ಕೆ, ಕಾರ್ಖಾನೆ ಕಟ್ಟುವುದಕ್ಕೆ ಉಪಯೋಗಿಸಿಕೊಳ್ಳಲಾಗಿದೆ.

 ಮಂಡ್ಯ :  ಮುಡಾ ರೀತಿ ಸಚಿವ ಪ್ರಿಯಾಂಕ ಖರ್ಗೆ ಅವರ ವಿಚಾರವೂ ಹೊರಗೆ ಬಂದಿದೆ. ಬುದ್ಧ ವಿಹಾರ ಕಟ್ಟಲು ಸಿದ್ಧಾರ್ಥ ವಿಹಾರ್ ಟ್ರಸ್ಟ್ ಸ್ಥಾಪಿಸಿದ್ದಾರೆ. ಅದೊಂದು ಧಾರ್ಮಿಕ ಸಂಸ್ಥೆ. ಆದರೆ, ಇದನ್ನು ಯಾವುದೋ ವ್ಯವಹಾರ ಮಾಡುವುದಕ್ಕೆ, ಕಾರ್ಖಾನೆ ಕಟ್ಟುವುದಕ್ಕೆ ಉಪಯೋಗಿಸಿಕೊಳ್ಳಲಾಗಿದೆ ಎಂದು ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಆರೋಪಿಸಿದರು.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಟ್ರಸ್ಟ್‌ನಲ್ಲಿ ಮಲ್ಲಿಕಾರ್ಜುನ ಖರ್ಗೆ, ಶ್ರೀಮತಿ ಮಲ್ಲಿಕಾರ್ಜುನ ಖರ್ಗೆ, ರಾಹುಲ್ ಖರ್ಗೆ, ರಾಧಾಕೃಷ್ಣ, ಪ್ರಿಯಾಂಕ್ ಖರ್ಗೆ ಸೇರಿ ಏಳು ಮಂದಿ ಇದ್ದು, ಕೋಟ್ಯಂತರ ರು. ಸರ್ಕಾರಿ ಜಮೀನನ್ನು ಟ್ರಸ್ಟ್‌ಗೆ ಸ್ವಾಧೀನ ಮಾಡಿಕೊಂಡಿದ್ದಾರೆ ಎಂದರು.

ಸಚಿವರು ಯಾವುದೇ ಕಾರಣಕ್ಕೂ ಅಧಿಕಾರ ದುರುಪಯೋಗ ಮಾಡುವಂತಿಲ್ಲ. ಈ ರೀತಿ ಪಡೆಯಬಾರದು. ರಾಧಾಕೃಷ್ಣ ಸಂಸದರಾಗಿದ್ದಾರೆ. ಮಲ್ಲಿಕಾರ್ಜುನ ಖರ್ಗೆ ಅವರು ರಾಜ್ಯಸಭಾ ಸದಸ್ಯರಾಗಿದ್ದಾರೆ. ಇದು ಸ್ವಜನ ಪಕ್ಷಪಾತ. ಅಧಿಕಾರದ ದುರುಪಯೋಗವಲ್ಲವೇ ಎಂದು ಪ್ರಶ್ನಿಸಿದರು.

ಕೆಐಇಎಡಿಬಿಯಲ್ಲಿ ಒಂದು ಎಕರೆಗೆ ಐದು ಕೋಟಿ ಬೆಲೆ ಬಾಳುತ್ತದೆ. ಅಂತಹ ಕಡೆ ಐದು ಎಕರೆ ಜಾಗವನ್ನು ಟ್ರಸ್ಟ್‌ಗೆ ಪಡೆದುಕೊಂಡಿದ್ದಾರೆ ಎಂದು ದೂರಿದರು.

ಇದನ್ನು ಒಪ್ಪಿಕೊಂಡಿರುವ ಸಚಿವ ಪ್ರಿಯಾಂಕ್ ಖರ್ಗೆ ಅವರನ್ನು ತಕ್ಷಣ ಸಂಪುಟದಿಂದ ವಜಾ ಮಾಡಬೇಕು. ಜಮೀನು ವಾಪಸ್‌ ಪಡೆಯಬೇಕು. ಅವರ ಮೇಲೆ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು.

ದಿಶಾ ಸಭೆಯಲ್ಲಿ ಇಬ್ಬರು ಶಾಸಕರಷ್ಟೆ ಭಾಗಿ

 ಮಂಡ್ಯ :  ಕೇಂದ್ರ ಸಚಿವ, ಸಂಸದ ಎಚ್.ಡಿ.ಕುಮಾರಸ್ವಾಮಿ ಅಧ್ಯಕ್ಷತೆಯಲ್ಲಿ ನಡೆದ ದಿಶಾ ಸಭೆಯಲ್ಲಿ ಇಬ್ಬರು ಶಾಸಕರನ್ನು ಹೊರತು ಪಡಿಸಿ ಸಚಿವ ಚಲುವರಾಯಸ್ವಾಮಿ ಸೇರಿದಂತೆ ಹಲವರು ಗೈರಾಗಿದ್ದರು.

ಸಂಸದರಾದ ನಂತರ ಎಚ್ಡಿಕೆ ಅವರು ನಡೆಸಿದ ಮೊದಲ ಸಭೆಯಲ್ಲಿ ಕೆ.ಆರ್ ಪೇಟೆ ಶಾಸಕ ಎಚ್.ಟಿ.ಮಂಜು, ಮಂಡ್ಯ ಕ್ಷೇತ್ರದ ಶಾಸಕ ಪಿ.ರವಿಕುಮಾರ್ ಹೊರತು ಪಡಿಸಿ ಕಾಂಗ್ರೆಸ್‌ನ ಬಹುತೇಕ ಶಾಸಕರು ಗೈರಾಗಿದ್ದರು. ಕಾರ್ಯನಿಮಿತ್ತ ಅಮೆರಿಕಾ ಪ್ರವಾಸದಲ್ಲಿರುವ ಕೃಷಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಚಲುವರಾಯಸ್ವಾಮಿ ಪಾಲ್ಗೊಂಡಿರಲಿಲ್ಲ.

ಆದರೆ, ಮದ್ದೂರು ಶಾಸಕ ಕೆ.ಎಂ.ಉದಯ್, ಶ್ರೀರಂಗಪಟ್ಟಣ ಕ್ಷೇತ್ರದ ಶಾಸಕ ರಮೇಶ ಬಂಡಿಸಿದ್ದೇಗೌಡ, ಮೇಲುಕೋಟೆ ಶಾಸಕ ದರ್ಶನ್ ಪುಟ್ಟಣ್ಣಯ್ಯ, ಮಳವಳ್ಳಿ ಶಾಸಕ ಪಿ.ಎಂ.ನರೇಂದ್ರಸ್ವಾಮಿ ಭಾಗವಹಿಸದಿರುವುದು ಕಂಡು ಬಂತು.

PREV

Recommended Stories

ರಾಹುಲ್‌ ವಿರುದ್ಧ 5ಕ್ಕೆ ಬಿಜೆಪಿ ಧರಣಿ : ಬಿವೈವಿ
ಸಂಘರ್ಷ ಬಿಟ್ಟು ಒಳಮೀಸಲು ಜಾರಿ : ಪರಂ ನೇತೃತ್ವದ ಸಭೆ