ಕನ್ನಡಪ್ರಭ ವಾರ್ತೆ, ತುಮಕೂರು
ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ತುಮಕೂರು ಜಿಲ್ಲಾ ಘಟಕ ವತಿಯಿಂದ ನಗರದ ಕೇಂದ್ರ ಗ್ರಂಥಾಲಯ ಸಭಾಂಗಣದಲ್ಲಿ ಏರ್ಪಡಿಸಲಾಗಿದ್ದ ಸಂಘದ ವಾರ್ಷಿಕ ದತ್ತಿ ಪ್ರಶಸ್ತಿಗಳ ಪ್ರದಾನ, ಕ್ಷೇಮಾಭಿವೃದ್ಧಿ ನಿಧಿಗೆ ದೇಣಿಗೆ ನೀಡಿದವರಿಗೆ ಸನ್ಮಾನ ಹಾಗೂ ಪ್ರತಿಭಾ ಪುರಸ್ಕಾರ ಸಮಾರಂಭ ಕಾರ್ಯಕ್ರಮದಲ್ಲಿ ಮಾತನಾಡಿದರು. ತುಮಕೂರಿನ ಅಭಿವೃದ್ಧಿಗಾಗಿ ಹಲವಾರು ಜನರು ದುಡಿದಿದ್ದಾರೆ. ಆದರೆ, ಇಂದು ಜಿಲ್ಲಾ ಪತ್ರಕರ್ತರ ಸಂಘದ ವತಿಯಿಂದ ನನಗೆ ಸಮಾಜ ಸೇವಾರತ್ನ ಪ್ರಶಸ್ತಿ ನೀಡಿ ಮತ್ತಷ್ಟು ಜವಾಬ್ದಾರಿಯನ್ನು ಹೆಚ್ಚು ಮಾಡಿದ್ದಾರೆ. ನನಗೆ ಈ ಪ್ರಶಸ್ತಿ ಕೊಟ್ಟಿರುವುದಕ್ಕೆ ನಾನು ನಿಮಗೆ ಅಭಾರಿಯಾಗಿದ್ದೇನೆ. ನಿಮ್ಮ ನಿರೀಕ್ಷೆಗೆ ತಕ್ಕಂತೆ ಕೆಲಸ ಮಾಡುತ್ತೇನೆ ಎಂದು ಹೇಳಿದರು.
ತುಮಕೂರು ತಾಲೂಕಿನ ಗೊಲ್ಲಹಳ್ಳಿ ಕುಗ್ರಾಮದಲ್ಲಿ ಜನಿಸಿದವನು. ಅಂದಿನ ಕಾಲದಲ್ಲಿದ್ದ ಜಾತಿ ವ್ಯವಸ್ಥೆ, ಮೌಢ್ಯ ಆಚರಣೆಗಳನ್ನೆಲ್ಲ ನಾನು ಖುದ್ದಾಗಿ ನೋಡಿದ್ದೇನೆ. ಆ ಆಚರಣೆಗಳೆಲ್ಲ ಇಂದು ಕಡಿಮೆಯಾಗಿವೆ. ವಿನೋಬಾ ಭಾವೆ ಅವರ ಆಶಯದಂತೆ ಚಿತ್ರಕಲಾ ಶಿಕ್ಷಕರಾಗಿದ್ದ ನಮ್ಮ ತಂದೆಯವರು ಗ್ರಾಮೀಣ ಭಾಗದ ವಿದ್ಯಾರ್ಥಿಗಳಿಗೆ ಶಿಕ್ಷಣ ನೀಡಬೇಕು ಎಂಬ ಉದ್ದೇಶದಿಂದ ಸಿದ್ದಾರ್ಥ ಶಿಕ್ಷಣ ಸಂಸ್ಥೆಯನ್ನು ಪ್ರಾರಂಭಿಸಿದ್ದರು ಎಂದು ಸ್ಮರಿಸಿಕೊಂಡರು.ಪತ್ರಕರ್ತರು ಸಮಾಜದಲ್ಲಿನ ಆಗು ಹೋಗುಗಳನ್ನು ಮತ್ತು ಜನರ ಸಮಸ್ಯೆಗಳನ್ನು ಸಮಾಜದ ಮುಂದೆ ತರುವ ಕೆಲಸ ಮಾಡುತ್ತಿದ್ದಾರೆ. ಯಾರದೇ ಅಡಚಣೆಗಳಿಗೂ ಹೆದರದೆ ಆ ಸುದ್ದಿಯನ್ನು ಹೇಳುವವನು ನಿಜವಾದ ಪತ್ರಕರ್ತ ಎಂದರು.
ನಾನು, ರಾಜಕೀಯ ಕ್ಷೇತ್ರಕ್ಕೆ ಬಂದಿರುವುದು ಸಮಾಜ ಸೇವೆ ಮಾಡುವುದಕ್ಕೆ, ಹೊರಟ್ಟಿ ಅವರು ಹುಬ್ಬಳ್ಳಿ ಶಿಕ್ಷಕರ ಕ್ಷೇತ್ರದಿಂದ ಸತತ 8ನೇ ಬಾರಿಗೆ ವಿಧಾನ ಪರಿಷತ್ ಗೆ ಆಯ್ಕೆಯಾಗಿದ್ದಾರೆ ಎಂದು ಹೇಳಿದರು.
ತುಮಕೂರು ನಗರ ವ್ಯಾಪ್ತಿಯಲ್ಲಿ ಪತ್ರಕರ್ತರಿಗೆ ನಿವೇಶಗಳನ್ನು ನೀಡಲು ಜಾಗವನ್ನು ಗುರುತಿಸಲಾಗುವುದು ಹಾಗೂ ಪತ್ರಕರ್ತರು ಸ್ವಲ್ಪ ಮಟ್ಟಿಗೆ ಹಣವನ್ನು ಪಾವತಿ ಮಾಡಿ ನಿವೇಶನ ಪಡೆಯಬೇಕು ಎಂದು ಹೇಳಿದರು.
ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಜಿಲ್ಲಾಧ್ಯಕ್ಷ ಚಿ.ನಿ.ಪುರುಷೋತ್ತಮ್ ಮಾತನಾಡಿದರು. ಶಾಸಕ ಜ್ಯೋತಿ ಗಣೇಶ್ ಮಾತನಾಡಿ, ಕೊರೋನ ಸಮಯದಲ್ಲಿ ಸಂಕಷ್ಟ ಎದುರಾದಾಗ ಪತ್ರಕರ್ತರ ಜೊತೆ ನಿಂತು ಕೆಲಸ ಮಾಡಿದ್ದನ್ನು ಸ್ಮರಿಸಿದರು.
ವಿಧಾನ ಪರಿಷತ್ ಸಭಾಪತಿ ಬಸವರಾಜ್ ಹೊರಟ್ಟಿ ಮಾತನಾಡಿ, ಪತ್ರಿಕಾ ಬಳಗದವರು ಯಾವುದೇ ಬೇಧ ಭಾವ ಮಾಡದೆ ನೀಡುವ ಪ್ರಶಸ್ತಿ ತುಂಬಾ ಶ್ರೇಷ್ಠವಾದದ್ದು. ಸಮಾಜದ ಅಂಕುಡೊಂಕು ಸರಿಪಡಿಸುವ ಕೆಲಸವನ್ನು ಪತ್ರಕರ್ತರು ಮಾಡುತ್ತಿದ್ದಾರೆ. ದೇಶದಲ್ಲಿ ಪತ್ರಿಕಾ ರಂಗವು ನಾಲ್ಕನೇ ಅಂಗವಾಗಿ ಗುರುತಿಸಿಕೊಂಡಿದೆ ಎಂದರು.